ಯೆಹೆಜ್ಕೇಲನು 26:18 - ಪರಿಶುದ್ದ ಬೈಬಲ್18 ನೀನು ಬಿದ್ದ ದಿವಸ ಕರಾವಳಿಯಲ್ಲಿರುವ ದೇಶಗಳೆಲ್ಲಾ ನಡುಗುವವು. ನೀನು ಕರಾವಳಿಯಲ್ಲಿ ಅನೇಕ ವಸಾಹತುಗಳನ್ನು ನಿರ್ಮಿಸಿದ್ದೀ. ನೀನು ಹೋದ ಬಳಿಕ ಅವರು ಭಯಗ್ರಸ್ತರಾಗುವರು.’” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಈ ನಿನ್ನ ಪತನದ ದಿನದಲ್ಲಿ ಕರಾವಳಿಯು ನಡುಗುತ್ತದೆ; ನೀನು ಇಲ್ಲವಾದದ್ದಕ್ಕೆ ಸಮುದ್ರ ದ್ವೀಪಗಳು ಗಾಬರಿಯಾಗುವವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಈ ನಿನ್ನ ಪತನ ದಿನದಲ್ಲಿ ಕರಾವಳಿಯು ನಡುಗುತ್ತದೆ; ನೀನು ಅಳಿದುಹೋದುದಕ್ಕೆ ಸಮುದ್ರದ್ವೀಪಗಳು ತತ್ತರಿಸುತ್ತವೆ.’ ಎಂಬ ಶೋಕಗೀತೆಯನ್ನೆತ್ತುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಈ ನಿನ್ನ ಪತನದಿನದಲ್ಲಿ ಕರಾವಳಿಯು ನಡುಗುತ್ತದೆ; ನೀನು ಇಲ್ಲವಾದದಕ್ಕೆ ಸಮುದ್ರದ್ವೀಪಗಳು ತತ್ತರಿಸುತ್ತವೆ ಎಂಬ ಶೋಕಗೀತವನ್ನೆತ್ತುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಈಗ ನೀನು ಬೀಳುವ ದಿವಸದಲ್ಲಿ ಸಮುದ್ರ ತೀರಗಳು ನಡುಗುವುವು. ಹೌದು, ನೀನು ಅಳಿದು ಹೋದುದ್ದಕ್ಕೆ ಸಮುದ್ರ ತೀರಗಳು ಗಾಬರಿಯಾಗುವುವು.’ ಅಧ್ಯಾಯವನ್ನು ನೋಡಿ |
ನನ್ನ ಒಡೆಯನಾದ ಯೆಹೋವನು ಇದನ್ನು ನುಡಿದಿದ್ದಾನೆ: “ಆ ಮರವು ಪಾತಾಳಕ್ಕೆ ಹೋದ ದಿವಸದಲ್ಲಿ ನಾನು ಜನರನ್ನು ಅಳುವಂತೆ ಮಾಡಿದೆನು. ಅದನ್ನು ನಾನು ಆಳವಾದ ಸಾಗರದಿಂದ ಮುಚ್ಚಿಬಿಟ್ಟೆನು. ನಾನು ಅದರ ನದಿಗಳನ್ನೂ ಬೇರೆ ನೀರಿನ ತೊರೆಗಳನ್ನೂ ನಿಲ್ಲಿಸಿಬಿಟ್ಟೆನು. ಲೆಬನೋನ್ ಅದಕ್ಕಾಗಿ ಶೋಕಿಸುವಂತೆ ಮಾಡಿದೆನು. ಆ ದೊಡ್ಡ ಮರವು ಹೋದುದಕ್ಕಾಗಿ ಆ ಪ್ರಾಂತ್ಯದ ಬೇರೆ ಎಲ್ಲಾ ಮರಗಳು ದುಃಖದಿಂದ ಕಾಯಿಲೆಯಲ್ಲಿ ಬಿದ್ದವು.