ಯೆಹೆಜ್ಕೇಲನು 26:2 - ಪರಿಶುದ್ದ ಬೈಬಲ್2 “ನರಪುತ್ರನೇ, ಜೆರುಸಲೇಮ್ ಬಗ್ಗೆ ತೂರ್ ಕೆಟ್ಟ ಮಾತುಗಳನ್ನಾಡಿದೆ. ‘ಜನರನ್ನು ಸುರಕ್ಷಿತವಾಗಿರಿಸುವ ನಗರದ್ವಾರವು ಕೆಡವಲ್ಪಟ್ಟು ದ್ವಾರವೇ ಇಲ್ಲದಂತಾಗಿದೆ. ನಗರವು ಹಾಳಾಗಿರುವುದರಿಂದ ಕೊಳ್ಳೆ ಹೊಡೆಯಲು ಸುಲಭವಾಯಿತು’ ಎಂದು ಅದು ಅಂದುಕೊಂಡಿದೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನರಪುತ್ರನೇ, ತೂರು, ಯೆರೂಸಲೇಮಿನ ವಿಷಯವಾಗಿ, ಅಹಾ!, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ! ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು” ಅಂದುಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನರಪುತ್ರನೇ, ಜೆರುಸಲೇಮಿನ ವಿಷಯವಾಗಿ ಟೈರ್ ನಗರವು ‘ಅಹಹ, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ, ನನ್ನ ಕಡೆಗೆ ತೆರೆದುಬಿದ್ದಿದೆ; ಜೆರುಸಲೇಮ್ ಹಾಳಾದ ಕಾರಣ ನಾನು ವೃದ್ಧಿಗೊಳ್ಳುವೆನು’ ಎಂದುಕೊಂಡಿತು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನರಪುತ್ರನೇ, ತೂರು ಯೆರೂಸಲೇವಿುನ ವಿಷಯವಾಗಿ - ಅಹಹ, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ, ನನ್ನ ಕಡೆಗೆ ತೆರೆದುಬಿಟ್ಟಿದೆ ; ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಅಂದುಕೊಂಡದರಿಂದ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಮನುಷ್ಯಪುತ್ರನೇ, ಟೈರ್, ಯೆರೂಸಲೇಮಿನ ವಿಷಯವಾಗಿ, ‘ಆಹಾ, ಜನರ ದ್ವಾರವಾಗಿದ್ದದ್ದು ಮುರಿದುಹೋಯಿತು, ಅದು ನನ್ನ ಕಡೆಗೆ ತೆರೆದುಕೊಂಡಿದೆ. ಯೆರೂಸಲೇಮು ಹಾಳಾದದ್ದರಿಂದ ನಾನು ವೃದ್ಧಿಗೊಳ್ಳುವೆನು,’ ಅಧ್ಯಾಯವನ್ನು ನೋಡಿ |