Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:20 - ಪರಿಶುದ್ದ ಬೈಬಲ್‌

20 ಆಳವಾದ ಗುಂಡಿಗೆ, ಸತ್ತವರು ಹೋಗುವ ಸ್ಥಳಕ್ಕೆ ನಿನ್ನನ್ನು ಕಳುಹಿಸುವೆನು. ಬೇರೆ ಹಳೇ ನಗರಗಳಂತೆ ನಾನು ಭೂಮಿಯ ಕೆಳಗೆ ನಿನ್ನನ್ನು ಕಳುಹಿಸಿಬಿಡುವೆನು. ಸಮಾಧಿಯೊಳಗಿರುವವರೊಂದಿಗೆ ನೀನು ಇರುವೆ. ನಿನ್ನಲ್ಲಿ ಆಗ ಯಾರೂ ವಾಸ ಮಾಡುವದಿಲ್ಲ. ನೀನು ಎಂದಿಗೂ ಜೀವಿಸುವವರ ಲೋಕದಲ್ಲಿರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಗ ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ, ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ನಿವಾಸಿಯಾಗುವಂತೆ, ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲೇ ಸೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಪುರಾತನಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವವುಳ್ಳವರ ಲೋಕದಲ್ಲಿ ನೆಲೆಗೊಳಿಸದೆ ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರೊಂದಿಗೆ ವಾಸಿಸುವಂತೆ ಸೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:20
26 ತಿಳಿವುಗಳ ಹೋಲಿಕೆ  

ಯೆಹೋವನ ಒಳ್ಳೆಯತನವನ್ನು ನಾನು ಸಾಯುವುದಕ್ಕಿಂತ ಮುಂಚೆ ನೋಡುತ್ತೇನೆ ಎಂಬ ದೃಢನಂಬಿಕೆ ನನ್ನಲ್ಲಿದೆ.


ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯೋ? ಇಲ್ಲ! ನೀನು ಪಾತಾಳಕ್ಕೆ ಇಳಿಯುವೆ!


ಇದು ಸರ್ವಶಕ್ತನಾದ ಯೆಹೋವನ ನುಡಿ. “ನಿಮ್ಮ ವಸ್ತುಗಳನ್ನು ಕದ್ದುಕೊಂಡ ಜನಾಂಗಗಳಿಗೆ ಆತನು ನನ್ನನ್ನು ಕಳುಹಿಸಿದನು. ನಿಮಗೆ ಗೌರವವನ್ನು ತರುವುದಕ್ಕಾಗಿ ಆತನು ನನ್ನನ್ನು ಕಳುಹಿಸಿದನು. ಯಾಕೆಂದರೆ, ನಿಮಗೆ ಹಾನಿ ಮಾಡಿದರೆ ಅದು ದೇವರ ಕಣ್ಣುಗುಡ್ಡೆಗೆ ಹಾನಿ ಮಾಡಿದಂತೆ.


ನಾನು ಸಮುದ್ರದ ತಳದಲ್ಲಿದ್ದೆನು. ಅಲ್ಲಿಂದ ಪರ್ವತಗಳು ಉಗಮವಾಗುತ್ತವೆ. ‘ನಾನು ಈ ಸೆರೆಮನೆಯಲ್ಲಿ ಎಂದೆಂದಿಗೂ ಬಂಧಿತನಾದೆನು’ ಎಂದು ನೆನಸಿದೆನು. ಆದರೆ ನನ್ನ ದೇವರಾದ ಯೆಹೋವನು ಸಮಾಧಿಯಿಂದ ನನ್ನನ್ನು ಹೊರತಂದನು. ಯೆಹೋವನೇ ನೀನು ಪುನಃ ನನಗೆ ಜೀವ ಕೊಟ್ಟೆ.


“ನಾನು ದೊಡ್ಡ ಆಪತ್ತಿನಲ್ಲಿದ್ದೆನು. ಸಹಾಯಕ್ಕಾಗಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಉತ್ತರ ದಯಪಾಲಿಸಿದನು. ನಾನು ಆಳವಾದ ಸಮಾಧಿಯೊಳಗಿದ್ದೆನು. ನಾನು ನಿನಗೆ ಮೊರೆಯಿಟ್ಟಾಗ, ಯೆಹೋವನೇ, ನೀನು ನನ್ನ ಸ್ವರವನ್ನು ಕೇಳಿದೆ.


ಭೂಮಿಯನ್ನು ಅವರು ಅಗೆದು ಅದರೊಳಗೆ ಅವಿತುಕೊಂಡರೆ ಅದರೊಳಗಿಂದ ಅವರನ್ನು ಎಳೆದುಹಾಕುವೆನು. ಆಕಾಶದೊಳಗೆ ಹಾರಿ ತಪ್ಪಸಿಕೊಂಡರೆ ಅಲ್ಲಿಂದಲೂ ನಾನು ಅವರನ್ನು ಎಳೆದುಹಾಕುವೆನು.


ನನ್ನ ಜನರಾದ ಇಸ್ರೇಲರಲ್ಲಿ ನನ್ನ ಪವಿತ್ರನಾಮವನ್ನು ಪ್ರಸಿದ್ಧಿಪಡಿಸುವೆನು. ಅವರು ನನ್ನ ಪವಿತ್ರ ನಾಮವನ್ನು ಇನ್ನು ಮುಂದೆ ಅವಮಾನಕ್ಕೆ ಗುರಿಪಡಿಸುವದಿಲ್ಲ. ರಾಜ್ಯಗಳೆಲ್ಲಾ ನಾನು ಯೆಹೋವನೆಂದು ಅರಿತುಕೊಳ್ಳುವರು. ನಾನೇ ಇಸ್ರೇಲಿನ ಪವಿತ್ರನಾದ ದೇವರು ಎಂದು ತಿಳಿಯುವರು.


ಬಹುಕಾಲದ ಹಿಂದೆಯೇ ಸತ್ತಿರುವವರಂತೆ ನನ್ನನ್ನು ಕತ್ತಲೆಯಲ್ಲಿ ಕುಳ್ಳಿರಿಸಿದ್ದಾನೆ.


ನಾವು ಕಣ್ಣಿಲ್ಲದವರಂತಿದ್ದೇವೆ. ಕುರುಡರಂತೆ ಗೋಡೆಗೆ ತಾಕುತ್ತಿದ್ದೇವೆ. ರಾತ್ರಿಯಲ್ಲಿ ಎಡವಿಬೀಳುವಂತೆ ಬೀಳುತ್ತಿದ್ದೇವೆ. ಹಗಲಿನಲ್ಲಿಯೂ ನಮಗೆ ಕಾಣದು. ಮಧ್ಯಾಹ್ನದ ಸಮಯದಲ್ಲೂ ಸತ್ತವರಂತೆ ಬೀಳುತ್ತೇವೆ.


ಆ ಸಮಯದಲ್ಲಿ ತಾನು ತನ್ನ ಜನರೊಂದಿಗೆ ಇರುವುದಾಗಿ ಹೀಗೆ ಯೆಹೋವನು ರುಜುವಾತುಪಡಿಸುವನು. ಹಗಲಲ್ಲಿ ಆತನು ಧೂಮಮೇಘವನ್ನೂ ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಗುರುತುಗಳು ಚೀಯೋನ್ ಪರ್ವತದ ಮೇಲಿರುವ ಪ್ರತಿಯೊಂದು ಜನರ ಸಭೆಯ ಮೇಲೆ ಆಕಾಶದಲ್ಲಿ ಕಾಣುವುದು. ಪ್ರತಿಯೊಬ್ಬನ ಮೇಲೆಯೂ ಕಾಪಾಡಿಕೊಳ್ಳುವುದಕ್ಕಾಗಿ ಹೊದಿಕೆ ಇರುವುದು.


ಯೆಹೋವನೇ, ನೀನೇ ನನ್ನ ಬಂಡೆ. ಸಹಾಯಕ್ಕಾಗಿ ನಾನು ನಿನ್ನನ್ನು ಕೂಗಿಕೊಳ್ಳುತ್ತಿದ್ದೇನೆ. ನನ್ನ ಪ್ರಾರ್ಥನೆಗಳಿಗೆ ಕಿವಿಗಳನ್ನು ಮುಚ್ಚಿಕೊಳ್ಳಬೇಡ. ಇಲ್ಲವಾದರೆ ಸತ್ತು ಸಮಾಧಿಯಲ್ಲಿರುವವರಂತೆ ಜನರು ನನ್ನನ್ನು ಪರಿಗಣಿಸುವರು.


ಆ ಜನರೆಲ್ಲಾ ಸಜೀವ ಸಮಾಧಿಯಾದರು. ಅವರ ಆಸ್ತಿಪಾಸ್ತಿಯೆಲ್ಲಾ ಅವರೊಡನೆ ಭೂಸಮಾಧಿಯಾಯಿತು. ಆ ಬಳಿಕ ಭೂಮಿ ಅವರ ಸಮೇತವಾಗಿ ಮುಚ್ಚಿಕೊಂಡಿತು. ಅದೇ ಅವರ ಅಂತ್ಯವಾಯಿತು. ಅವರು ಸಮುದಾಯದಿಂದ ಶಾಶ್ವತವಾಗಿ ಇಲ್ಲವಾದರು!


ಆದರೆ ಯೆಹೋವನು ಇವರಿಗೋಸ್ಕರ ಅಪೂರ್ವ ಶಿಕ್ಷೆಯನ್ನು ಕಲ್ಪಿಸಿದರೆ ಅಂದರೆ ಭೂಮಿಯು ಬಾಯ್ದೆರೆದು ಇವರನ್ನೂ ಇವರ ಸರ್ವಸ್ವವನ್ನೂ ನುಂಗುವುದರಿಂದ ಇವರೆಲ್ಲರೂ ಸಜೀವಿಗಳಾಗಿ ಸಮಾಧಿಯಾದರೆ, ಇವರು ನಿಜವಾಗಿಯೂ ಯೆಹೋವನನ್ನು ತಿರಸ್ಕರಿಸಿದವರೆಂದು ನೀವು ತಿಳಿದುಕೊಳ್ಳಬೇಕು” ಎಂದನು.


“ಕಪೆರ್ನೌಮೇ, ನೀನು ಪರಲೋಕಕ್ಕೆ ಎತ್ತಲ್ಪಡುವುದಾಗಿ ಯೋಚಿಸುವಿಯೋ? ಇಲ್ಲ! ನೀನು ಪಾತಾಳಕ್ಕೆ ಇಳಿಯುವೆ. ನಾನು ನಿನ್ನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿದೆ. ಸೊದೋಮಿನಲ್ಲಿ ಆ ಅದ್ಭುತಕಾರ್ಯಗಳನ್ನು ನಡೆಸಿದ್ದರೆ ಆ ಜನರು ಪಾಪಮಾಡುವುದನ್ನು ನಿಲ್ಲಿಸಿಬಿಡುತ್ತಿದ್ದರು ಮತ್ತು ಇಂದಿನವರೆಗೂ ಅದು ಪಟ್ಟಣವಾಗಿಯೇ ಉಳಿದಿರುತ್ತಿತ್ತು.


ಬಹಳ ಹಿಂದೆ ಬದುಕಿದ್ದ ಕೆಟ್ಟ ಜನರನ್ನು ದೇವರು ದಂಡಿಸಿದನು. ಈ ಲೋಕದಲ್ಲಿ ತನಗೆ ವಿರುದ್ಧವಾದ ಜನರು ತುಂಬಿಕೊಂಡಿದ್ದಾಗ ಆತನು ಜಲಪ್ರಳಯವನ್ನು ಬರಮಾಡಿ ದನು. ಆದರೆ ನೋಹನನ್ನೂ ಅವನೊಂದಿಗಿದ್ದ ಏಳು ಮಂದಿಯನ್ನೂ ರಕ್ಷಿಸಿದನು. ಯೋಗ್ಯರಾಗಿ ಜೀವಿಸಬೇಕೆಂದು ಆ ಜನರಿಗೆ ತಿಳಿಸಿದವನೇ ನೋಹ.


ನೀನು ಬರುವದರಿಂದ ಮರಣದ ಸ್ಥಳವಾಗಿರುವ ನರಕವು ಉತ್ಸಾಹಗೊಂಡಿದೆ. ನಿನ್ನನ್ನು ಎದುರುಗೊಳ್ಳುವದಕ್ಕಾಗಿ ಪಾತಾಳವು ಲೋಕದ ಎಲ್ಲಾ ಅಧಿಪತಿಗಳ ಆತ್ಮಗಳನ್ನು ಎಬ್ಬಿಸಿದೆ. ಅರಸರು ತಮ್ಮ ಸಿಂಹಾಸನದಲ್ಲಿ ನಿಂತುಕೊಳ್ಳುವಂತೆ ಪಾತಾಳವು ಮಾಡುತ್ತಿದೆ. ಅವರು ನಿನ್ನ ಬರುವಿಕೆಯನ್ನು ಕಾಯುತ್ತಿದ್ದಾರೆ.


“ಈಗ ನೀನು ನಮ್ಮಂತೆಯೇ ಸತ್ತ ಶರೀರವಾಗಿರುವೆ. ಈಗ ನೀನು ನಮ್ಮಂತೆಯೇ ಆಗಿರುವೆ” ಎಂದು ಅವರು ನಿನ್ನನ್ನು ಗೇಲಿ ಮಾಡುವರು.


ಆಗ ಜೆರುಸಲೇಮ್ ಒಂದು ಅದ್ಭುತವಾದ ಸ್ಥಳವಾಗುವುದು; ಜನರು ಸಂತೋಷದಿಂದಿರುವರು. ಅಲ್ಲಿ ನಡೆದ ಒಳ್ಳೆಯ ಸಂಗತಿಗಳ ಬಗ್ಗೆ ಕೇಳಿದಾಗ ಬೇರೆ ಜನಾಂಗಗಳ ಜನರು ಅದನ್ನು ಹೊಗಳುವರು; ವಿಸ್ಮಯಪಡುವರು. ನಾನು ಜೆರುಸಲೇಮಿಗೆ ಮಾಡುತ್ತಿರುವ ಒಳಿತಿನ ವಿಷಯವು ಅವರ ಕಿವಿಗೆ ಬೀಳುವುದು.’


“ಈಗ ಆ ನೀರಿನ ಬಳಿಯಲ್ಲಿರುವ ಯಾವ ಮರಗಳೂ ಹೆಮ್ಮೆಪಡುವದಿಲ್ಲ. ಅವು ಮುಗಿಲನ್ನು ಮುಟ್ಟಲು ಪ್ರಯತ್ನಿಸುವದಿಲ್ಲ. ಚೆನ್ನಾಗಿ ಬೆಳೆದ ಮರಗಳು ಆ ನೀರನ್ನು ಕುಡಿದು ತಾನು ಉದ್ದವಾಗಿ ಬೆಳೆದಿದ್ದೇನೆ ಎಂದು ಕೊಚ್ಚಿಕೊಳ್ಳುವದಿಲ್ಲ. ಯಾಕೆಂದರೆ ಎಲ್ಲವೂ ಸಾಯುವುದಕ್ಕಾಗಿ ನೇಮಕಗೊಂಡಿವೆ. ಅವುಗಳೆಲ್ಲಾ ಮರಣದ ಸ್ಥಳವನ್ನು ಸೇರುವವು. ಅಲ್ಲಿ ಸತ್ತು, ಮರಣದ ಆ ಸ್ಥಳಕ್ಕೆ ಹೋಗಿ ಪಾತಾಳಕ್ಕೆ ಸೇರಿದವರನ್ನು ಸೇರುವವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು