ಯೆಹೆಜ್ಕೇಲನು 26:21 - ಪರಿಶುದ್ದ ಬೈಬಲ್21 ನಿನಗಾದ ಸ್ಥಿತಿಯನ್ನು ನೋಡಿ ಬೇರೆ ಜನರು ಭಯಗ್ರಸ್ತರಾಗುವರು. ನಿನ್ನ ಅಂತ್ಯವು ಆಯಿತು. ಜನರು ನಿನಗಾಗಿ ಹುಡುಕಾಡುವರು. ಆದರೆ ಅವರು ನಿನ್ನನ್ನು ಕಂಡುಹಿಡಿಯುವುದೇ ಇಲ್ಲ.” ಇವು ಒಡೆಯನಾದ ಯೆಹೋವನ ಮಾತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿನ್ನನ್ನು ತೀರಾ ಧ್ವಂಸಮಾಡುವೆನು; ನೀನು ಇಲ್ಲವಾಗುವಿ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಿನ್ನನ್ನು ಪೂರ್ತಿಯಾಗಿ ಧ್ವಂಸಮಾಡುವೆನು; ನೀನು ಇಲ್ಲವಾಗುವೆ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವುದಿಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಿನ್ನನ್ನು ತೀರಾ ಧ್ವಂಸಮಾಡುವೆನು; ನೀನು ಇಲ್ಲವಾಗುವಿ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವದಿಲ್ಲ; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಾನೂ ನಿನ್ನನ್ನು ಭಯಂಕರವಾದ ಅಂತ್ಯಕ್ಕೆ ತರುವೆನು. ಇನ್ನು ಮೇಲೆ ನೀನು ಇರುವುದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡುಕಿದರೂ ನೀನು ಸಿಗುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” ಅಧ್ಯಾಯವನ್ನು ನೋಡಿ |
ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ‘ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸ್ನೇಹಿತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು; ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು.