ಯೆಹೆಜ್ಕೇಲನು 26:7 - ಪರಿಶುದ್ದ ಬೈಬಲ್7 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಉತ್ತರ ದಿಕ್ಕಿನಿಂದ ಒಬ್ಬ ಶತ್ರುವನ್ನು ನಾನು ತೂರಿಗೆ ವಿರುದ್ಧವಾಗಿ ಬರಮಾಡುವೆನು. ಅವನೇ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು. ಅವನು ಲೆಕ್ಕವಿಲ್ಲದಷ್ಟು ಕುದುರೆ ಸವಾರರು, ರಥಗಳು, ಕಾಲ್ಬಲವುಳ್ಳ ದೊಡ್ಡ ಸೈನ್ಯವನ್ನು ತೆಗೆದುಕೊಂಡು ಬರುವನು. ಅವನ ಸೈನಿಕರೆಲ್ಲಾ ಬೇರೆಬೇರೆ ಜನಾಂಗದವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ರಾಜಾಧಿರಾಜನೂ, ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವಗಳ ಸಂಗಡಲೂ, ರಥಗಳ ಸಂಗಡಲೂ, ರಾಹುತರ ಸಂಗಡಲೂ, ಬಹುಜನರ ಸಂಗಡಲೂ ಕೂಡಿದವನಾಗಿ ನಾನು ಪೂರ್ವದಿಂದ ತೂರಿನ ಮೇಲೆ ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಇಗೋ, ರಾಜಾಧಿರಾಜನೂ ಬಾಬಿಲೋನಿನ ಅರಸನೂ ಆದ ನೆಬೂಕದ್ನೆಚ್ಚರನನ್ನು, ಅಶ್ವ, ರಥ, ರಾಹುತ, ಬಹುಸೈನ್ಯ ಪರಿವಾರ ಇವುಗಳಿಂದ ಕೂಡಿದವನಾಗಿ, ನಾನು ಉತ್ತರದಿಂದ ಟೈರಿನ ಮೇಲೆ ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವ, ರಥ, ರಾಹುತ, ಬಹುಜನಪರಿವಾರ ಇವುಗಳಿಂದ ಕೂಡಿದವನನ್ನಾಗಿ ನಾನು ಬಡಗಲಿಂದ ತೂರಿನ ಮೇಲೆ ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಉತ್ತರದ ರಾಜಾಧಿರಾಜನೂ ಬಾಬಿಲೋನಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡವೂ ಸವಾರರ ಸಂಗಡವೂ ರಥಗಳ ಸಂಗಡವೂ ಬಹುಜನರ ಸಂಗಡವೂ ಟೈರಿನ ಮೇಲೆ ತರುತ್ತೇನೆ. ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.