8 ನೆಬೂಕದ್ನೆಚ್ಚರನು ನಿನ್ನ ಹೆಣ್ಣುಮಕ್ಕಳನ್ನು (ಚಿಕ್ಕ ಪಟ್ಟಣಗಳನ್ನು) ಕೊಲ್ಲುವನು. ಅವನು ಬುರುಜುಗಳನ್ನು ಕಟ್ಟಿ ನಿನ್ನ ನಗರವನ್ನು ಧಾಳಿ ಮಾಡುವನು. ನಿನ್ನ ನಗರದ ಸುತ್ತಲೂ ಮಣ್ಣಿನ ಮಾರ್ಗ ಮಾಡುವನು. ಕೋಟೆಗೋಡೆಯ ತನಕ ರಸ್ತೆಯನ್ನು ತಯಾರಿಸುವನು.
“ಜೆರುಸಲೇಮನ್ನು ಸೂಚಿಸುವ ಮಂತ್ರಶಕ್ತಿಯ ವಸ್ತು ಅವನ ಬಲಗೈಗೆ ಬರುವುದು. ಅವನು ತನ್ನೊಂದಿಗೆ ಭಿತ್ತಿಭೇದಕ ಯಂತ್ರಗಳನ್ನು ತರುವನು. ಅವನು ಅಪ್ಪಣೆ ಮಾಡಿದ ಕೂಡಲೇ ಅವನ ಸೈನಿಕರು ಕೊಲ್ಲಲು ಪ್ರಾರಂಭಿಸುವರು. ರಣರಂಗದ ಆರ್ಭಟ ಮಾಡುವರು. ಆಮೇಲೆ ನಗರದ ಸುತ್ತಲೂ ಮಣ್ಣಿನ ದಿಬ್ಬ ಕಟ್ಟುವರು. ಕೋಟೆಗೋಡೆಯ ತನಕ ಮಣ್ಣಿನ ರಸ್ತೆ ಮಾಡುವರು. ಮರದಿಂದ ಮಾಡಿದ ಗೋಪುರಗಳನ್ನು ಮಾಡಿ ಅಲ್ಲಿಂದ ನಗರಕ್ಕೆ ಧಾಳಿ ಮಾಡುವರು.
ಆದ್ದರಿಂದ ಚಿದ್ಕೀಯನು ತನ್ನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಜೆರುಸಲೇಮಿನ ವಿರುದ್ಧ ದಂಡಯಾತ್ರೆ ಕೈಗೊಂಡನು. ನೆಬೂಕದ್ನೆಚ್ಚರನ ಸಂಗಡ ಅವನ ಇಡೀ ಸೈನ್ಯವಿತ್ತು. ಬಾಬಿಲೋನ್ ಸೈನ್ಯವು ಜೆರುಸಲೇಮಿನ ಹೊರಭಾಗದಲ್ಲಿ ಬೀಡುಬಿಟ್ಟಿತು. ಆ ನಗರವನ್ನು ಹತ್ತಲು ಅನುಕೂಲವಾಗುವಂತೆ ಅವರು ನಗರದ ಪೌಳಿಗೋಡೆಗೆ ಅಲ್ಲಲ್ಲಿ ಇಳಿಜಾರಾದ ಗೋಡೆಗಳನ್ನು ಕಟ್ಟಿದ್ದರು.
“ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.
ಸರ್ವಶಕ್ತನಾದ ಯೆಹೋವನು ಹೀಗೆ ಹೇಳಿದನು: “ಜೆರುಸಲೇಮಿನ ಸುತ್ತಮುತ್ತಲಿನ ಮರಗಳನ್ನು ಕಡಿದುಹಾಕಿರಿ; ಜೆರುಸಲೇಮಿನ ಎದುರಿಗೆ ಒಂದು ದಿಬ್ಬ ನಿರ್ಮಿಸಿರಿ. ನಗರವನ್ನು ದಂಡಿಸಬೇಕು. ನಗರದ ಒಳಗಡೆ ದಬ್ಬಾಳಿಕೆಯ ಹೊರತು ಮತ್ತೇನಿಲ್ಲ.
ಯೋವಾಬನು ತನ್ನ ಜನರೊಂದಿಗೆ ಆಬೇಲ್ಬೇತ್ಮಾಕಾ ಊರಿಗೆ ಬಂದನು. ಯೋವಾಬನ ಸೈನ್ಯವು ಪಟ್ಟಣವನ್ನು ಸುತ್ತುಗಟ್ಟಿತು. ಅವರು ನಗರದ ಗೋಡೆಯ ಹತ್ತಿರ ಮಣ್ಣಿನ ದಿಬ್ಬವನ್ನು ಮಾಡಿ ಗೋಡೆಯನ್ನು ಸಮೀಪಿಸಿದರು; ನಂತರ ಆ ಗೋಡೆಯನ್ನು ಬೀಳಿಸುವುದಕ್ಕಾಗಿ ಅದನ್ನು ಹೊಡೆಯಲಾಂಭಿಸಿದರು.
“ಇತರ ಜನಾಂಗದ ಅರಸರನ್ನು ಬಾಬಿಲೋನಿನ ಸೈನಿಕರು ಗೇಲಿ ಮಾಡುತ್ತಾರೆ. ಪರದೇಶದ ಅರಸರು ಅವರಿಗೆ ಹಾಸ್ಯಾಸ್ಪದವಾಗಿರುತ್ತಾರೆ. ಕೋಟೆಕೊತ್ತಲುಗಳಿರುವ ನಗರವನ್ನು ನೋಡಿ ಅವರು ನಗಾಡುವರು. ಆ ಸೈನಿಕರು ಕೋಟೆಯ ಗೋಡೆಯ ತನಕ ಮಣ್ಣಿನದಿಬ್ಬವನ್ನೇರಿಸಿ, ಸುಲಭವಾಗಿ ಪಟ್ಟಣಗಳನ್ನು ವಶಮಾಡಿಕೊಳ್ಳುವರು.