ಯೆಹೆಜ್ಕೇಲನು 27:12 - ಪರಿಶುದ್ದ ಬೈಬಲ್12 “‘ತಾರ್ಷೀಷ್ ನಿನ್ನ ಉತ್ತಮ ವ್ಯಾಪಾರ ಕೇಂದ್ರವಾಗಿತ್ತು. ಅವರು ತಮ್ಮ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸ ಲೋಹಗಳನ್ನು ಕೊಟ್ಟು ನಿನ್ನಿಂದ ವಸ್ತುಗಳನ್ನು ಕೊಂಡುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸಗಳನ್ನು ಒದಗಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. ಆದುದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಹಾಗೂ ಸೀಸಗಳನ್ನು ನಿನಗೆ ಒದಗಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿದ್ದದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ ಕಬ್ಬಿಣ ತವರ ಸೀಸಗಳನ್ನು ನಿನಗೆ ಒದಗಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ ‘ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. ಆದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಹಾಗೂ ಸೀಸಗಳನ್ನು ನಿನಗೆ ಒದಗಿಸುತ್ತಿದ್ದರು. ಅಧ್ಯಾಯವನ್ನು ನೋಡಿ |
ನಿನ್ನ ವ್ಯಾಪಾರವು ನಿನಗೆ ಐಶ್ವರ್ಯವನ್ನು ತಂದಿತು. ಆದರೆ ಅದರೊಂದಿಗೆ ನಾನಾ ದುಷ್ಟತ್ವಗಳು ನಿನ್ನೊಳಗೆ ಬಂದು ನೀನು ಪಾಪ ಮಾಡಿದೆ. ಆಗ ನಾನು ನಿನ್ನನ್ನು ಅಶುದ್ಧನೆಂದು ಪರಿಗಣಿಸಿ ನಿನ್ನನ್ನು ದೇವರ ಪರ್ವತದಿಂದ ದಬ್ಬಿಬಿಟ್ಟೆನು. ನೀನು ನನ್ನ ಕೆರೂಬಿಯರಲ್ಲಿ ವಿಶೇಷವಾದವನಾಗಿದ್ದೆ. ನಿನ್ನ ರೆಕ್ಕೆಗಳು ನನ್ನ ಸಿಂಹಾಸನದ ಮೇಲೆ ಚಾಚಿರುತ್ತಿದ್ದವು. ಆದರೆ ಬೆಂಕಿಯಂತೆ ಹೊಳೆಯುವ ರತ್ನಾಭರಣಗಳನ್ನೆಲ್ಲಾ ತೆಗೆದಿಡಲು ನಿನ್ನನ್ನು ಬಲವಂತಪಡಿಸಿದೆ.