ಯೆಹೆಜ್ಕೇಲನು 27:13 - ಪರಿಶುದ್ದ ಬೈಬಲ್13 ಗ್ರೀಸ್, ತುರ್ಕಿ ಮತ್ತು ಕಪ್ಪು ಸಮುದ್ರದ ಸುತ್ತಲಿರುವ ದೇಶಗಳವರು ನಿನ್ನಲ್ಲಿಗೆ ವ್ಯಾಪಾರಕ್ಕಾಗಿ ಬಂದರು. ಅವರು ನಿನ್ನ ವಸ್ತುಗಳಿಗೆ ಬದಲಾಗಿ ಗುಲಾಮರನ್ನೂ ತಾಮ್ರವನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ಗುಲಾಮರನ್ನೂ ಮತ್ತು ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಜು ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಯಾವಾನಿನವರು, ತೂಬಲಿನವರು ಮತ್ತು ಮೆಷೆಕಿನವರು ನಿನ್ನ ಪರವಾಗಿ ವ್ಯಾಪಾರಮಾಡಿ ನರಪ್ರಾಣಿಗಳನ್ನು ಹಾಗು ತಾಮ್ರದ ಪಾತ್ರೆಗಳನ್ನು ನಿನಗೆ ಸರಬರಾಜು ಮಾಡುತ್ತಿದ್ದರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯಾವಾನಿನವರೂ ತೂಬಲಿನವರೂ ಮೆಷೆಕಿನವರೂ ನಿನ್ನ ಪರವಾಗಿ ವ್ಯಾಪಾರಮಾಡಿ ನರಪ್ರಾಣಿಗಳನ್ನೂ ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಯಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ ‘ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ನರಪ್ರಾಣಿಗಳನ್ನೂ ಕಂಚಿನ ಪಾತ್ರೆಗಳನ್ನೂ ನಿನ್ನ ಬಜಾರಿನಲ್ಲಿ ಮಾರಾಟಕ್ಕಿಟ್ಟರು. ಅಧ್ಯಾಯವನ್ನು ನೋಡಿ |
ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.
“ದಾನಿಯೇಲನೇ, ಈಗ ನಾನು ನಿನಗೆ ಸತ್ಯಾಂಶವನ್ನು ಹೇಳುತ್ತೇನೆ ಕೇಳು. ಪಾರಸಿಯ ದೇಶದಲ್ಲಿ ಇನ್ನೂ ಮೂರು ಜನ ರಾಜರು ಆಳುವರು. ಆಮೇಲೆ ನಾಲ್ಕನೆಯ ರಾಜನು ಬರುವನು. ನಾಲ್ಕನೆಯ ರಾಜನು ತನಗಿಂತ ಮುಂಚೆ ಆಗಿ ಹೋದ ಪಾರಸಿಯ ದೇಶದ ಎಲ್ಲ ರಾಜರಿಗಿಂತ ಅಧಿಕ ಧನವಂತನಾಗಿರುವನು. ಆ ನಾಲ್ಕನೆಯ ರಾಜನು ತನ್ನ ಪ್ರಾಬಲ್ಯವನ್ನು ಬೆಳೆಸಿಕೊಳ್ಳುವದಕ್ಕೆ ಧನವನ್ನು ಬಳಸಿಕೊಳ್ಳುವನು. ಎಲ್ಲರೂ ಗ್ರೀಸ್ ರಾಜ್ಯದ ವಿರುದ್ಧವಾಗುವಂತೆ ಮಾಡುವನು.