Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:16 - ಪರಿಶುದ್ದ ಬೈಬಲ್‌

16 ನಿನ್ನಲ್ಲಿ ಅನೇಕ ಬೆಲೆಬಾಳುವ ವಸ್ತುಗಳಿದ್ದುದರಿಂದ ಅರಾಮ್ ನಿನ್ನೊಂದಿಗೆ ವ್ಯಾಪಾರ ಮಾಡಿತು. ಅವರು ಇಂದ್ರನೀಲ, ಧೂಮ್ರ ಬಣ್ಣದ ಬಟ್ಟೆ, ಕಸೂತಿ ಕೆಲಸ, ನಯವಾದ ಬಟ್ಟೆ, ಹವಳ, ಕೆಂಪು ಹರಳು ಇತ್ಯಾದಿಗಳನ್ನು ಕೊಟ್ಟು ವಸ್ತುಗಳನ್ನು ನಿನ್ನಿಂದ ಕೊಂಡುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ, ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕೈಕೆಲಸದ ವಸ್ತುಗಳು ನಿನಗೆ ಅಪಾರವಾಗಿದ್ದವು; ಆದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಮಡಿ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾವಿುನವರೂ ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಲು ರಕ್ತಾಂಬರ ಕಸೂತಿಯ ವಸ್ತ್ರ ನಾರುಬಟ್ಟೆ ಹವಳ ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ ‘ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮ್ಯರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:16
12 ತಿಳಿವುಗಳ ಹೋಲಿಕೆ  

ಇಸ್ರೇಲರು ಮತ್ತೆ ದೇವರಿಗೆ ವಿರೋಧವಾಗಿ ದುಷ್ಕೃತ್ಯಗಳನ್ನು ಮಾಡಿದರು. ಅವರು ಸುಳ್ಳುದೇವರಾದ ಬಾಳನನ್ನೂ ಸುಳ್ಳುದೇವತೆಯಾದ ಅಷ್ಟೋರೆತಳನ್ನೂ ಪೂಜಿಸತೊಡಗಿದರು. ಅವರು ಅರಾಮ್ಯರ, ಚೀದೋನ್ಯರ, ಮೋವಾಬ್ಯರ, ಅಮ್ಮೋನಿಯರ ಮತ್ತು ಫಿಲಿಷ್ಟಿಯರ ದೇವರುಗಳನ್ನು ಸಹ ಪೂಜಿಸಿದರು. ಇಸ್ರೇಲರು ಯೆಹೋವನನ್ನು ಮರೆತುಬಿಟ್ಟು ಆತನ ಸೇವೆಯನ್ನು ನಿಲ್ಲಿಸಿಬಿಟ್ಟರು.


ದೇವರ ಉದ್ಯಾನವನವಾಗಿದ್ದ ಏದೆನಿನಲ್ಲಿ ನೀನಿದ್ದೆ. ನಿನ್ನ ಬಳಿಯಲ್ಲಿ ಬಂಗಾರದ ಚೌಕಟ್ಟಿನಲ್ಲಿ ಕುಳ್ಳಿರಿಸಿದ ವಜ್ರ, ವೈಢೂರ್ಯ, ನವರತ್ನಗಳ ಆಭರಣಗಳಿದ್ದವು. ನೀನು ಸೃಷ್ಟಿಸಲ್ಪಟ್ಟ ದಿನದಲ್ಲಿ ಈ ಸೌಂದರ್ಯವು ನಿನಗೆ ಕೊಡಲ್ಪಟ್ಟಿತು. ದೇವರು ನಿನ್ನನ್ನು ಬಲಾಢ್ಯನನ್ನಾಗಿ ಮಾಡಿದನು.


ನಾನು ಅರಾಮಿನ ಗೆಷೂರಿನಲ್ಲಿ ನೆಲೆಸಿದ್ದಾಗ, ‘ಯೆಹೋವನು ನನ್ನನ್ನು ಜೆರುಸಲೇಮಿಗೆ ಮತ್ತೆ ಕರೆಸಿಕೊಂಡರೆ, ನಾನು ಯೆಹೋವನ ಆರಾಧನೆ ಮಾಡುತ್ತೇನೆ, ಎಂಬ ವಿಶೇಷ ಪ್ರಮಾಣವನ್ನು ಮಾಡಿದ್ದೆನು’” ಎಂದನು.


ಅಮ್ಮೋನಿಯರು ತಾವು ದಾವೀದನಿಗೆ ಶತ್ರುಗಳಾಗಿರುವುದಾಗಿ ತಿಳಿದುಕೊಂಡರು. ಆದ್ದರಿಂದ ಅಮ್ಮೋನಿಯರು ಹಣಕೊಟ್ಟು ಬೇತ್‌ರೆಹೋಬ್ ಮತ್ತು ಚೋಬಾಗಳಿಂದ ಅರಾಮ್ಯರ ಇಪ್ಪತ್ತುಸಾವಿರ ಮಂದಿ ಭೂದಳವನ್ನು ಬರಮಾಡಿಕೊಂಡರು. ಅಮ್ಮೋನಿಯರು ಮಾಕಾದ ರಾಜನನ್ನು ಮತ್ತು ಅವನ ಒಂದು ಸಾವಿರ ಸೈನಿಕರನ್ನು ಹಾಗೂ ಟೋಬ್‌ನಿಂದ ಹನ್ನೆರಡು ಸಾವಿರ ಮಂದಿ ಸೈನಿಕರನ್ನು ಬರಮಾಡಿಕೊಂಡರು.


ಚೋಬದ ರಾಜನಾದ ಹದದೆಜೆರನ ಸಹಾಯಕ್ಕೆ ದಮಸ್ಕದ ಅರಾಮ್ಯರು ಬಂದರು. ಆದರೆ ದಾವೀದನು ಆ ಇಪ್ಪತ್ತೆರಡು ಸಾವಿರ ಅರಾಮ್ಯರನ್ನು ಸಂಹರಿಸಿದನು.


ಅಂತೆಯೇ ಯಾಕೋಬನು ಪದ್ದನ್‌ಅರಾಮಿಗೆ ಹೊರಟು ರೆಬೆಕ್ಕಳ ಅಣ್ಣನಾದ ಲಾಬಾನನ ಬಳಿಗೆ ಹೋದನು. ಬೆತೂವೇಲನು ಲಾಬಾನನ ಮತ್ತು ರೆಬೆಕ್ಕಳ ತಂದೆ. ರೆಬೆಕ್ಕಳು ಯಾಕೋಬನ ಮತ್ತು ಏಸಾವನ ತಾಯಿ.


ಶೇಮನ ಗಂಡುಮಕ್ಕಳು: ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್ ಮತ್ತು ಅರಾಮ್.


ನಿನಗೆ ಅಂದವಾದ ಉಡುಪನ್ನು ಕೊಟ್ಟು ಕಾಲಿಗೆ ನಯವಾದ ಚರ್ಮದ ಕೆರಗಳನ್ನು ಕೊಟ್ಟೆನು. ನಿನ್ನ ತಲೆಗೆ ನಾರುಮಡಿಯ ತಲೆಕಟ್ಟನ್ನು ಕೊಟ್ಟೆನು ಮತ್ತು ನಿನಗೆ ರೇಷ್ಮೆಯ ಬಟ್ಟೆಯನ್ನು ಹೊದಿಸಿದೆನು.


ನಿನ್ನ ಚಿನ್ನ, ಬೆಳ್ಳಿ, ಆಭರಣ, ನಾರುಮಡಿ, ರೇಷ್ಮೆ ಮತ್ತು ಕಸೂತಿ ಹಾಕಿದ ಬಟ್ಟೆಗಳಲ್ಲಿ ನೀನು ಸುಂದರಳಾಗಿ ಕಾಣಿಸುತ್ತಿದ್ದೆ. ನೀನು ಉತ್ತಮವಾದ ಆಹಾರವನ್ನು ಊಟ ಮಾಡಿದೆ: ಉತ್ತಮ ಗೋಧಿಹಿಟ್ಟು, ಜೇನುತುಪ್ಪ ಮತ್ತು ಆಲೀವ್ ಎಣ್ಣೆ. ನೀನು ಅತ್ಯಂತ ಸುಂದರಿಯಾದೆ. ಮತ್ತು ನೀನು ರಾಣಿಯಾಗಿದ್ದೆ.


ನಂತರ ನೀನು ಅಂದವಾದ ಬಟ್ಟೆಯಿಂದ ಆ ವಿಗ್ರಹಗಳಿಗೆ ಹೊದಿಸಿದೆ. ನಾನು ನಿನಗೆ ಕೊಟ್ಟಿದ್ದ ಧೂಪ, ಪರಿಮಳದ್ರವ್ಯವನ್ನು ನೀನು ಆ ವಿಗ್ರಹಗಳ ಮುಂದೆ ಹಾಕಿದಿ.


ಈಗಿನಂತೆ, ನಿನ್ನ ದುಷ್ಟತನವು ಹೊರಬರುವುದಕ್ಕಿಂತ ಮೊದಲು ನೀನು ಅದನ್ನು ಮಾಡಿದೆ. ಈಗ ಎದೋಮಿನ ಹೆಣ್ಣುಮಕ್ಕಳು (ಪಟ್ಟಣಗಳು) ಮತ್ತು ಆಕೆಯ ನೆರೆಯವರು ನಿನ್ನನ್ನು ಗೇಲಿ ಮಾಡುವರು. ಫಿಲಿಷ್ಟಿಯರ ಹೆಣ್ಣುಮಕ್ಕಳು ಸಹ ನಿನ್ನನ್ನು ಗೇಲಿ ಮಾಡುವರು. ನಿನ್ನ ಸುತ್ತಲೂ ಇರುವವರು ನಿನ್ನನ್ನು ಕಡೆಗಾಣಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು