Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:17 - ಪರಿಶುದ್ದ ಬೈಬಲ್‌

17 “‘ಇಸ್ರೇಲ್ ಮತ್ತು ಯೆಹೂದ ದೇಶದವರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ನಿನ್ನ ವಸ್ತುಗಳಿಗೆ ಗೋಧಿ, ಆಲೀವ್, ಅಂಜೂರ, ಜೇನು, ಎಣ್ಣೆ ಮತ್ತು ಮುಲಾಮುಗಳನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಯೆಹೂದ್ಯರೂ, ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋದಿಯಿಂದಲೂ, ಖಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧತೈಲದಿಂದಲೂ ನಿನ್ನೊಂದಿಗೆ ವ್ಯಾಪಾರ ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಯೆಹೂದ್ಯರೂ, ಇಸ್ರಯೇಲ್ ನಾಡಿನವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ, ಗೋಧಿ, ‘ಪನ್ನಗ್’, ಜೇನು, ಎಣ್ಣೆ, ಸುಗಂಧತೈಲ, ಈ ಸಾಮಗ್ರಿಗಳನ್ನು ನಿನಗೆ ಸೇರಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೂದ್ಯರೂ ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ವಿುನ್ನೀಥಿನ ಗೋದಿ ಕಂಡಸಕ್ಕರೆ ಜೇನು ಎಣ್ಣೆ ಸುಗಂಧತೈಲ ಈ ಸಾಮಗ್ರಿಗಳನ್ನು ನಿನಗೆ ಸೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ ‘ಯೆಹೂದವೂ ಇಸ್ರಾಯೇಲ್ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಮಿಠಾಯಿ, ಜೇನು, ಎಣ್ಣೆ ಮತ್ತು ಸುಗಂಧ ತೈಲದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:17
9 ತಿಳಿವುಗಳ ಹೋಲಿಕೆ  

ಅವನು ಅವರನ್ನು ಸೋಲಿಸಿ ಅರೋಯೇರ್ ನಗರದಿಂದ ಮಿನ್ನೀತ್ ನಗರದವರೆಗೆ ಇಪ್ಪತ್ತು ನಗರಗಳನ್ನು ಗೆದ್ದುಕೊಂಡನು. ಆಮೇಲೆ ಅವನು ಅಮ್ಮೋನಿಯರ ಸಂಗಡ ಯುದ್ಧಮಾಡಿ ಅಬೇಲ್‌ಕೆರಾಮೀಮ್ ನಗರವನ್ನು ಗೆದ್ದುಕೊಂಡನು. ಇಸ್ರೇಲರು ಅಮ್ಮೋನಿಯರನ್ನು ಸೋಲಿಸಿದರು. ಅಮ್ಮೋನಿಯರಿಗೆ ಇದೊಂದು ದೊಡ್ಡ ಸೋಲಾಯಿತು.


ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರತೀರಕ್ಕೆ ತರುತ್ತಾರೆ. ನಂತರ ನಾನು ಅವುಗಳನ್ನು ಒಟ್ಟಾಗಿ ಕಟ್ಟಿ, ನೀನು ತಿಳಿಸಿದ ಸ್ಥಳಕ್ಕೆ ತೇಲಿಬಿಡುತ್ತೇನೆ. ಗೊತ್ತುಪಡಿಸಿದ ಸ್ಥಳದಲ್ಲಿ ದಿಮ್ಮಿಗಳನ್ನು ಬೇರ್ಪಡಿಸುತ್ತೇನೆ; ನೀನು ಅವುಗಳನ್ನು ತೆಗೆದುಕೊಳ್ಳಬಹುದು. ಅವುಗಳಿಗೆ ಬದಲಾಗಿ ನೀನು ನನ್ನ ಮನೆಯವರಿಗೆ ಆಹಾರಸಾಮಾಗ್ರಿಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ.”


ಟೈರ್ ಮತ್ತು ಸಿದೋನ್ ಪಟ್ಟಣಗಳ ಜನರ ಮೇಲೆ ಹೆರೋದನು ಬಹು ಕೋಪಗೊಂಡಿದ್ದನು. ಆ ಜನರೆಲ್ಲರೂ ಹೆರೋದನನ್ನು ಭೇಟಿಯಾಗಲು ಒಟ್ಟಾಗಿ ಹೋದರು. ಅವರು ಬ್ಲಾಸ್ತನನ್ನು ತಮ್ಮ ಕಡೆಗೆ ಒಲಿಸಿಕೊಂಡರು. ಬ್ಲಾಸ್ತನು ರಾಜನ ವೈಯಕ್ತಿಕ ಸೇವಕನಾಗಿದ್ದನು. ಆ ಜನರು ತಮ್ಮೊಂದಿಗೆ ಶಾಂತಿಸಂಧಾನ ಮಾಡಿಕೊಳ್ಳಬೇಕೆಂದು ಹೆರೋದನನ್ನು ಕೇಳಿಕೊಂಡರು. ಯಾಕೆಂದರೆ ಅವರ ನಾಡಿಗೆ ಹೆರೋದನ ನಾಡಿನಿಂದ ಆಹಾರವನ್ನು ತರಿಸಿಕೊಳ್ಳಬೇಕಾಗಿತ್ತು.


ಗಿಲ್ಯಾದಿನಲ್ಲಿ ಖಂಡಿತವಾಗಿಯೂ ಔಷಧವಿದೆ. ಖಂಡಿತವಾಗಿಯೂ ಅಲ್ಲಿ ಒಬ್ಬ ವೈದ್ಯನಿದ್ದಾನೆ. ಆದರೆ ನನ್ನ ಜನರ ಗಾಯಗಳು ಗುಣವಾಗಲಿಲ್ಲವೇಕೆ?


ಸೆರೆಯಿಂದ ಹಿಂತಿರುಗಿಬಂದ ಜನರು ಬಡಗಿಗಳಿಗೂ ಕಲ್ಲುಕುಟಿಗರಿಗೂ ಹಣ ಕೊಟ್ಟರು. ಲೆಬನೋನಿನಿಂದ ದೇವದಾರು ಮರಗಳನ್ನು ಸಾಗಿಸುವ ತೂರ್ಯರಿಗೆ ಮತ್ತು ಚೀದೋನ್ಯರಿಗೆ ಆಹಾರಪದಾರ್ಥಗಳನ್ನು, ಆಲಿವ್ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಸಂಬಳವಾಗಿ ಕೊಟ್ಟರು. ಸೊಲೊಮೋನನು ಮೊದಲನೆಯ ದೇವಾಲಯವನ್ನು ಕಟ್ಟುವಾಗ ಅದಕ್ಕೆ ಬೇಕಾದ ಮರಗಳನ್ನು ಸಮುದ್ರಮಾರ್ಗವಾಗಿ ತಂದಂತೆಯೇ ಇವರೂ ಜೆರುಸಲೇಮಿಗೆ ಸಮೀಪವಿರುವ ಯೊಪ್ಪಕ್ಕೆ ಸಮುದ್ರಮಾರ್ಗವಾಗಿ ತಂದರು. ಪರ್ಶಿಯಾದ ಅರಸನಾದ ಸೈರಸನ ಆಜ್ಞೆಗನುಸಾರವಾಗಿ ಇವೆಲ್ಲವೂ ಮಾಡಲ್ಪಟ್ಟವು.


ನಿನ್ನ ಜನರು ಮರಗಳನ್ನು ಕಡಿದು ಸಾಗಿಸುವ ಕಾರ್ಯಕ್ಕೆ ನಾನು ಒಂದು ಲಕ್ಷದ ಇಪ್ಪತ್ತೈದು ಸಾವಿರ ಕ್ವಿಂಟಾಲ್ ಗೋಧಿಯನ್ನೂ ಒಂದು ಲಕ್ಷದ ಇಪ್ಪತ್ತೈದು ಸಾವಿರ ಕ್ವಿಂಟಾಲ್ ಜವೆಗೋಧಿಯನ್ನೂ ಒಂದು ಲಕ್ಷದ ಹದಿನೈದು ಸಾವಿರ ಲೀಟರ್ ದ್ರಾಕ್ಷಾರಸವನ್ನೂ ಒಂದು ಲಕ್ಷದ ಹದಿನೈದು ಸಾವಿರ ಲೀಟರ್ ಎಣ್ಣೆಯನ್ನೂ ಕೊಡುವೆನು.”


ಯೆಹೋವನು ಇಸ್ರೇಲಿಗೆ ಹಿಂಡಿನಿಂದ ಬೆಣ್ಣೆಯನ್ನೂ ಹಾಲನ್ನೂ ಕೊಟ್ಟನು. ಆತನು ಕೊಬ್ಬಿದ ಕುರಿಮರಿಗಳನ್ನೂ ಆಡುಗಳನ್ನೂ ಬಾಷಾನಿನ ಅತ್ಯುತ್ತಮವಾದ ಟಗರುಗಳನ್ನೂ ಕೊಟ್ಟನು. ಜೊತೆಗೆ ಉತ್ತಮವಾದ ಗೋಧಿಯನ್ನೂ ಕೊಟ್ಟನು. ಇಸ್ರೇಲಿನ ಜನರು ಕೆಂಪು ದ್ರಾಕ್ಷಿಯಿಂದ ಮಾಡಿದ ಉತ್ತಮ ದ್ರಾಕ್ಷಾರಸವನ್ನು ಕುಡಿದರು.


ಆ ದೇಶವು ಗೋಧಿ, ಜವೆಗೋಧಿ, ದ್ರಾಕ್ಷಾಲತೆಗಳು, ಅಂಜೂರ, ದಾಳಿಂಬೆ ಮರಗಳಿಂದ ತುಂಬಿದೆ. ಅಲ್ಲಿ ಎಣ್ಣೆ, ಜೇನುತುಪ್ಪ ಧಾರಾಳವಾಗಿ ಸಿಗುವವು.


ಅದಕ್ಕೆ ಅವರ ತಂದೆಯಾದ ಇಸ್ರೇಲನು, “ಇದು ನಿಜವಾಗಿಯೂ ಸತ್ಯವಾಗಿದ್ದರೆ, ನಿನ್ನೊಂದಿಗೆ ಬೆನ್ಯಾಮೀನನನ್ನು ಕರೆದುಕೊಂಡು ಹೋಗು. ಆದರೆ ರಾಜ್ಯಪಾಲನಿಗೆ ಶ್ರೇಷ್ಠವಾದ ಕೆಲವು ಉಡುಗೊರೆಗಳನ್ನು ತೆಗೆದುಕೊಂಡು ಹೋಗಿ. ನಮ್ಮ ನಾಡಿನಲ್ಲಿ ದೊರಕುವ ಜೇನು, ಆಕ್ರೋಡು, ಬಾದಾಮಿ, ಹಾಲುಮಡ್ಡಿ ಮತ್ತು ಗೋಲರಸ ಇವುಗಳನ್ನು ತೆಗೆದುಕೊಳ್ಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು