ಅವರು ನಿನ್ನ ಬಗ್ಗೆ ಈ ಶೋಕಗೀತೆಯನ್ನು ಹಾಡುವರು: “‘ತೂರ್, ನೀನು ಹೆಸರುವಾಸಿಯಾದ ನಗರವಾಗಿದ್ದೆ. ನಿನ್ನಲ್ಲಿ ವಾಸಮಾಡಲು ಜನರು ಸಮುದ್ರದಾಚೆಯಿಂದ ಬಂದರು. ನೀನು ಪ್ರಸಿದ್ಧಳಾಗಿದ್ದೆ, ಆದರೆ ನೀನೀಗ ಹೋಗಿಬಿಟ್ಟೆ. ದ್ವೀಪವಾಗಿರುವ ನೀನು ಮತ್ತು ನಿನ್ನಲ್ಲಿ ವಾಸವಾಗಿದ್ದ ಜನರು ಸಮುದ್ರದಿಂದ ದೂರದಲ್ಲಿರುವುದರಿಂದ ಬಲಿಷ್ಠರಾಗಿದ್ದೀರಿ. ಭೂಮಿಯ ಮೇಲೆ ವಾಸವಾಗಿದ್ದ ಎಲ್ಲಾ ಜನರನ್ನು ನೀವು ಭಯಗೊಳಿಸಿದಿರಿ.
ನನ್ನ ಪ್ರಿಯ ಜೆರುಸಲೇಮೇ, ನಾನು ನಿನ್ನ ಬಗ್ಗೆ ಏನು ಹೇಳಲಿ? ನಾನು ನಿನ್ನನ್ನು ಯಾವುದಕ್ಕೆ ಹೋಲಿಸಲಿ? ನೀನು ಎಂಥವಳೆಂದು ಹೇಳಲಿ? ನನ್ನ ಚೀಯೋನೇ, ನಾನು ನಿನ್ನನ್ನು ಹೇಗೆ ಸಂತೈಸಲಿ. ನಿನ್ನ ವಿನಾಶವು ಸಾಗರದಷ್ಟು ಅಪಾರ. ಯಾರೂ ನಿನ್ನನ್ನು ಸ್ವಸ್ಥ ಮಾಡಲಾರರು ಎಂದೆನಿಸುತ್ತದೆ.
ರಸ್ತೆಯಲ್ಲಿ ಹಾದುಹೋಗುವ ಜನರೇ, ನೀವು ನನ್ನ ಬಗ್ಗೆ ಯೋಚಿಸುವುದಿಲ್ಲವೆಂದು ತೋರುತ್ತದೆ. ನನ್ನ ಕಡೆಗೆ ಗಮನ ಕೊಡಿ. ನನ್ನ ನೋವಿನಂಥ ನೋವು ಮತ್ತೊಂದು ಇದೆಯೇ? ನನಗೆ ಬಂದಂಥ ನೋವು ಇನ್ನಾವುದಾದರೂ ಇದೆಯೇ? ದಂಡನೆಯಾಗಿ ಯೆಹೋವನು ನನಗೆ ಕೊಟ್ಟ ನೋವಿನಂಥ ನೋವು ಮತ್ತೊಂದು ಇದೆಯೇ? ಆತನು ತನ್ನ ಮಹಾಕೋಪದ ದಿನದಂದು ನನ್ನನ್ನು ದಂಡಿಸಿರುವನು.
ನೆಬೂಕದ್ನೆಚ್ಚರನ ಸೈನ್ಯವು ನಿನ್ನ ಐಶ್ವರ್ಯವನ್ನು ದೋಚಿಕೊಳ್ಳುವದು. ನೀನು ಮಾರಬೇಕೆಂದಿದ್ದ ವಸ್ತುಗಳನ್ನು ಅವರು ದೋಚಿಕೊಳ್ಳುವರು. ನಿನ್ನ ಗೋಡೆಗಳನ್ನು ಒಡೆದು ಅಂದವಾದ ನಿನ್ನ ಮನೆಗಳನ್ನು ಹಾಳು ಮಾಡುವರು. ನಿನ್ನ ಮರದಿಂದ ಮತ್ತು ಕಲ್ಲುಗಳಿಂದ ಮಾಡಿದ ಮನೆಗಳನ್ನು ಕಸದಂತೆ ಸಮುದ್ರಕ್ಕೆ ಎಸೆಯುವರು.
“ನರಪುತ್ರನೇ, ತೂರ್ ದೇಶದ ರಾಜನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ: “‘ನೀನೊಬ್ಬ ಆದರ್ಶ ಮನುಷ್ಯನಾಗಿದ್ದೆ. ಸರ್ವಾಂಗಸುಂದರನೂ ಜ್ಞಾನದಿಂದ ತುಂಬಿದವನೂ ಆಗಿದ್ದೆ.