ಯೆಹೆಜ್ಕೇಲನು 27:33 - ಪರಿಶುದ್ದ ಬೈಬಲ್33 ನಿನ್ನ ವ್ಯಾಪಾರಿಗಳು ಸಮುದ್ರದಾಚೆ ಹೋದರು; ನೀನು ಅನೇಕರನ್ನು ತೃಪ್ತಿಗೊಳಿಸಿದಿ. ನಿನ್ನ ಐಶ್ವರ್ಯದಿಂದಲೂ ನೀನು ಮಾರಿದ ಸರಕುಗಳಿಂದಲೂ ನೀನು ಲೋಕದ ರಾಜರನ್ನು ಐಶ್ವರ್ಯವಂತರನ್ನಾಗಿ ಮಾಡಿದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನಿನ್ನ ಸರಕುಗಳು ಸಮುದ್ರಗಳನ್ನು ದಾಟಿ ಹರಡಿಕೊಂಡವು, ಅವುಗಳಿಂದ ಅನೇಕ ಜನಾಂಗಗಳನ್ನು ತೃಪ್ತಿಪಡಿಸಿದಿ; ನಿನ್ನ ಅಪಾರವಾದ ಐಶ್ವರ್ಯದಿಂದಲೂ, ವ್ಯಾಪಾರದ ವಸ್ತುಗಳಿಂದಲೂ ಭೂರಾಜರನ್ನು ಸಮೃದ್ಧಿಪಡಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅಪಾರ ಐಶ್ವರ್ಯದಿಂದ, ವಾಣಿಜ್ಯ ದಿನಸುಗಳಿಂದ ನೀನು ತುಂಬಿಸಿದೆ ಬಹುರಾಷ್ಟ್ರಗಳನು, ಸಮೃದ್ಧಿಗೊಳಿಸಿದೆ ಭೂರಾಜರನು. ಈಗಾಗಿವೆ ಸಮುದ್ರದ ಪಾಲು ಆ ಸರಕು ಸಾಮಗ್ರಿಗಳೆಲ್ಲವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ನಿನ್ನ ಸರಕುಗಳು ಸಮುದ್ರಗಳನ್ನು ಹಾದು ಹರಡಿಕೊಂಡವು. ಅವುಗಳಿಂದ ಬಹುಜನಾಂಗಗಳನ್ನು ತುಂಬಿಸಿದಿ; ನಿನ್ನ ಅಪಾರವಾದ ಐಶ್ವರ್ಯದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜರನ್ನು ಸಮೃದ್ಧಿಪಡಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ. ನಿನ್ನ ಅಪಾರವಾದ ಐಶ್ವರ್ಯದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜರನ್ನು ಸಮೃದ್ಧಿಪಡಿಸಿದೆ. ಅಧ್ಯಾಯವನ್ನು ನೋಡಿ |
ನಿನ್ನ ವ್ಯಾಪಾರವು ನಿನಗೆ ಐಶ್ವರ್ಯವನ್ನು ತಂದಿತು. ಆದರೆ ಅದರೊಂದಿಗೆ ನಾನಾ ದುಷ್ಟತ್ವಗಳು ನಿನ್ನೊಳಗೆ ಬಂದು ನೀನು ಪಾಪ ಮಾಡಿದೆ. ಆಗ ನಾನು ನಿನ್ನನ್ನು ಅಶುದ್ಧನೆಂದು ಪರಿಗಣಿಸಿ ನಿನ್ನನ್ನು ದೇವರ ಪರ್ವತದಿಂದ ದಬ್ಬಿಬಿಟ್ಟೆನು. ನೀನು ನನ್ನ ಕೆರೂಬಿಯರಲ್ಲಿ ವಿಶೇಷವಾದವನಾಗಿದ್ದೆ. ನಿನ್ನ ರೆಕ್ಕೆಗಳು ನನ್ನ ಸಿಂಹಾಸನದ ಮೇಲೆ ಚಾಚಿರುತ್ತಿದ್ದವು. ಆದರೆ ಬೆಂಕಿಯಂತೆ ಹೊಳೆಯುವ ರತ್ನಾಭರಣಗಳನ್ನೆಲ್ಲಾ ತೆಗೆದಿಡಲು ನಿನ್ನನ್ನು ಬಲವಂತಪಡಿಸಿದೆ.