ಯೆಹೆಜ್ಕೇಲನು 27:36 - ಪರಿಶುದ್ದ ಬೈಬಲ್36 ಬೇರೆ ದೇಶಗಳಲ್ಲಿರುವ ವ್ಯಾಪಾರಿಗಳು ಆಶ್ಚರ್ಯದಿಂದ ಸಿಳ್ಳು ಹಾಕಿದರು. ನಿನಗೆ ಸಂಭವಿಸಿದ ವಿಷಯಗಳು ಜನರಿಗೆ ಭೀತಿಯನ್ನುಂಟುಮಾಡಿತು. ಯಾಕೆಂದರೆ ನಿನ್ನ ಕಥೆ ಮುಗಿಯಿತು. ನಿನಗೆ ಅಂತ್ಯವಾಯಿತು. ಇನ್ನು ನೀನು ಕಾಣುವದಿಲ್ಲ.’” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಜನಾಂಗಗಳ ವರ್ತಕರು ನಿನ್ನನ್ನು ನೋಡಿ, ಸಿಳ್ಳು ಹಾಕುತ್ತಾರೆ; ನೀನು ಸಂಪೂರ್ಣ ಧ್ವಂಸವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ನಿನ್ನ ನೋಡಿ ಸಿಳ್ಳುಹಾಕುವರು ರಾಷ್ಟ್ರಗಳ ವರ್ತಕರು. ನಾಶವಾದೆ ನೀನು ಪೂರ್ತಿಯಾಗಿ, ಇಲ್ಲವಾದೆ ಇನ್ನೆಂದಿಗು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ; ನೀನು ತೀರಾ ಧ್ವಂಸವಾಗಿ ಇನ್ನೆಂದಿಗೂ ಇಲ್ಲದಂತಾದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸೀಳಿಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.’ ” ಅಧ್ಯಾಯವನ್ನು ನೋಡಿ |
ಈ ನಿನೆವೆಯು ಸಂತೋಷಭರಿತ ನಗರಿಯಾಗಿದೆ. ಅದರ ನಿವಾಸಿಗಳು ತಾವು ಸುರಕ್ಷಿತರಾಗಿದ್ದೇವೆಂದು ತಿಳಿದಿದ್ದಾರೆ. ನಿನೆವೆಯು ಲೋಕದಲ್ಲಿ ಅತ್ಯಂತ ಮಹತ್ವಪೂರ್ಣ ಸ್ಥಳವೆಂದು ತಿಳಿದಿದ್ದಾರೆ. ಅವರು ಬಹಳ ಗರ್ವಪಡುತ್ತಾರೆ. ಆದರೆ ಆ ನಗರವು ನಾಶವಾಗುವದು. ಕಾಡುಮೃಗಗಳ ಹಕ್ಕೆಯಾಗುವದು. ದಾಟಿಹೋಗುವ ಜನರು, ತಮ್ಮ ಆಶ್ಚರ್ಯವನ್ನು ಸಿಳ್ಳುಹಾಕಿ ತಲೆಯಾಡಿಸಿ “ಎಂಥಾ ದುರ್ಗತಿ” ಎಂದು ಉದ್ಗರಿಸುವರು.