Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:4 - ಪರಿಶುದ್ದ ಬೈಬಲ್‌

4 ಭೂಮಧ್ಯ ಸಮುದ್ರವು ನಿನ್ನ ಸುತ್ತಲೂ ಮೇರೆಯಂತಿದೆ. ನಿನ್ನನ್ನು ಕಟ್ಟಿದವರು ಅಂದವಾಗಿಯೇ ಕಟ್ಟಿದರು. ನಿನ್ನಿಂದ ಹೊರಡುವ ಹಡಗುಗಳಂತೆ ನೀನು ಸುಂದರವಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನ ನೆಲೆಯು ಸಮುದ್ರದ ಮಧ್ಯವೇ; ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ನೆಲೆಯಿರುವುದು ಸಮುದ್ರಗಳ ನಡುವೆ ನಿನ್ನ ನಿರ್ಮಿಸಿಹರು ಸರ್ವಾಂಗ ಸುಂದರಿಯಾಗಿಯೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನ ನೆಲೆಯು ಸಮುದ್ರಮಧ್ಯವೇ; ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿನ್ನ ಮೇರೆಗಳು ಸಮುದ್ರದ ಮಧ್ಯದಲ್ಲಿವೆ. ನಿನ್ನನ್ನು ಕಟ್ಟಿದವರು ನಿನ್ನನ್ನು ಸರ್ವಾಂಗ ಸುಂದರಿಯನ್ನಾಗಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:4
5 ತಿಳಿವುಗಳ ಹೋಲಿಕೆ  

ಬೆಸ್ತರು ತಮ್ಮ ಬಲೆಗಳನ್ನು ಹರಡಿ ಒಣಗಿಸುವ ಸ್ಥಳವನ್ನಾಗಿ ಮಾಡುವೆನು. ಇದು ನನ್ನ ನುಡಿ.” ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಸೈನಿಕರು ಯುದ್ಧದ ಸಮಯದಲ್ಲಿ ಬೆಲೆಬಾಳುವ ವಸ್ತುವನ್ನು ಕೊಳ್ಳೆ ಮಾಡುವಂತೆ ತೂರ್ ಇದೆ.


ಅದರ ಬಗ್ಗೆ ಈ ರೀತಿಯಾಗಿ ಹೇಳು: “‘ತೂರೇ, ನೀನು ಸಮುದ್ರಕ್ಕೆ ಬಾಗಿಲು. ಅನೇಕ ದೇಶಗಳಿಗೆ ನೀನು ವ್ಯಾಪಾರಿ. ಕರಾವಳಿಯ ಅನೇಕ ದೇಶಗಳಿಗೆ ನೀನು ಪ್ರಯಾಣಿಸುವೆ.’ ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ. ತೂರೇ, ನೀನು ಅತಿ ಸುಂದರಳೆಂದು ಭಾವಿಸಿರುವೆ. ನೀನು ಪರಿಪೂರ್ಣ ಸುಂದರಳೆಂದು ತಿಳಿದಿರುವೆ.


ನಿನ್ನನ್ನು ಕಟ್ಟಿದವರು ಸೆನೀರ್ ಬೆಟ್ಟದ ತುರಾಯಿ ಮರಗಳನ್ನು ಹಲಗೆಗಳಿಗಾಗಿ ಉಪಯೋಗಿಸಿದರು. ಲೆಬನೋನಿನ ದೇವದಾರು ಮರವನ್ನು ಹಾಯಿ ಮರವನ್ನಾಗಿ ಉಪಯೋಗಿಸಿದರು.


ನಾನು ನಿನ್ನನ್ನು ಸೃಷ್ಟಿಸಿದಾಗ ನೀನು ಸದ್ಗುಣಿಯಾಗಿ ನಿರ್ದೋಷಿಯಾಗಿದ್ದಿ. ಆದರೆ ನೀನು ದುಷ್ಟನಾಗುತ್ತಾ ಬಂದೆ.


ನಿನ್ನ ಸೌಂದರ್ಯವು ನಿನಗೆ ಹೆಮ್ಮೆ ಏರುವಂತೆ ಮಾಡಿತು. ನಿನ್ನ ಘನತೆಯು ನಿನ್ನ ಜ್ಞಾನವನ್ನು ಕೆಡಿಸಿತು. ಆದ್ದರಿಂದ ನಿನ್ನನ್ನು ನೆಲಕ್ಕೆ ದಬ್ಬಿದೆ. ಈಗ ಬೇರೆ ರಾಜರುಗಳು ನಿನ್ನನ್ನೆ ಎವೆಯಿಕ್ಕದೆ ನೋಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು