10 ಪರದೇಶಸ್ಥರು ನಿನ್ನನ್ನು ಪರದೇಶಿಯಂತೆ ನೋಡುವರು ಮತ್ತು ಕೊಲೆ ಮಾಡುವರು. ನಾನು ಆ ರೀತಿಯಾಗಿ ಮಾಡಬೇಕೆಂದು ಆಜ್ಞಾಪಿಸುವದರಿಂದ ನಿನಗೆ ಹಾಗೆ ಆಗುವದು.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.
“ಈಜಿಪ್ಟೇ, ಏದೆನಿನಲ್ಲಿ ಎಷ್ಟೋ ದೊಡ್ಡ, ಬಲಶಾಲಿಯಾಗಿರುವ ಮರಗಳಿವೆ. ಅದರ ಯಾವ ಮರಕ್ಕೆ ನಿನ್ನನ್ನು ಹೋಲಿಸಲಿ? ಅವೆಲ್ಲವೂ ಭೂಮಿಯ ಕೆಳಗೆ ಪಾತಾಳವನ್ನು ಸೇರಿದವು. ನೀನು ಕೂಡಾ ಆ ಪರದೇಶಸ್ಥರೊಂದಿಗೆ ಆ ಸ್ಥಳಕ್ಕೆ ಸೇರುವೆ. ರಣರಂಗದಲ್ಲಿ ಸತ್ತವರೊಂದಿಗೆ ನೀನು ಬಿದ್ದುಕೊಳ್ಳುವೆ. “ಹೌದು, ಈ ರೀತಿಯಾಗಿ ಫರೋಹನಿಗೂ ಅವನೊಂದಿಗಿರುವ ಜನರ ಗುಂಪಿಗೂ ಆಗುವದು.” ಇದು ಒಡೆಯನಾದ ಯೆಹೋವನ ನುಡಿ.
ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.
ನಾನು ಒಂದು ಸಿಂಹವನ್ನೂ ಒಂದು ಕರಡಿಯನ್ನೂ ಕೊಂದಿದ್ದೇನೆ. ಅದೇ ರೀತಿಯಲ್ಲಿ ನಾನು ಅನ್ಯದೇಶಿಯನಾದ ಗೊಲ್ಯಾತನನ್ನೂ ಕೊಂದು ಹಾಕುತ್ತೇನೆ. ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸಿದ್ದರಿಂದ ಗೊಲ್ಯಾತನು ಸಾಯಲೇಬೇಕು.
ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.
ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!
ನೀವು ನನ್ನ ಆಲಯದೊಳಗೆ ಅನ್ಯರನ್ನು ತಂದಿರುತ್ತೀರಿ. ಅವರು ಸುನ್ನತಿಯಾದವರಾಗಿರಲಿಲ್ಲ. ಅವರು ಸಂಪೂರ್ಣವಾಗಿ ನನ್ನನ್ನು ನಂಬಿರಲಿಲ್ಲ. ಈ ರೀತಿಯಾಗಿ ನೀವು ನನ್ನ ಆಲಯವನ್ನು ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಬಿಟ್ಟಿರಿ. ಭಯಂಕರ ಕೃತ್ಯಗಳನ್ನು ಮಾಡಿ ಆಮೇಲೆ ನನಗೆ ರೊಟ್ಟಿ, ಕೊಬ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನ್ನ ಆಲಯವನ್ನು ಅಶುದ್ಧಗೊಳಿಸುತ್ತಿವೆ.
ನಿನಗೆ ವಿರುದ್ಧವಾಗಿ ಯುದ್ಧ ಮಾಡಲು ಅಪರಿಚಿತರನ್ನು ಕರೆತರುವೆನು. ಅವರು ಎಲ್ಲಾ ಜನಾಂಗಗಳವರಿಗಿಂತ ಕ್ರೂರರು, ಅವರು ತಮ್ಮ ಖಡ್ಗವನ್ನು ಎಳೆದು ನಿನ್ನ ಜ್ಞಾನದಿಂದ ಕೊಂಡುಕೊಂಡಿದ್ದ ಎಲ್ಲಾ ಬೆಲೆಬಾಳುವ ಅಪೂರ್ವ ವಸ್ತುಗಳನ್ನು ನಾಶಮಾಡುವರು.
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
ನಾನು ಯಾರೊಂದಿಗೆ ಮಾತನಾಡಲಿ? ನಾನು ಯಾರಿಗೆ ಎಚ್ಚರಿಕೆಯ ನುಡಿಗಳನ್ನು ಹೇಳಲಿ? ನನ್ನ ಮಾತನ್ನು ಯಾರು ಕೇಳುತ್ತಾರೆ? ಇಸ್ರೇಲಿನ ಜನರು ತಮ್ಮ ಕಿವಿಗಳನ್ನು ಮುಚ್ಚಿಕೊಂಡಿದ್ದಾರೆ. ಅವರು ನನ್ನ ಎಚ್ಚರಿಕೆಯ ನುಡಿಗಳನ್ನು ಕೇಳಲಾರರು. ಜನರಿಗೆ ಯೆಹೋವನ ಉಪದೇಶ ರುಚಿಸುವದಿಲ್ಲ. ಅವರು ಯೆಹೋವನ ನುಡಿಗಳನ್ನು ಕೇಳಬಯಸುವದಿಲ್ಲ.
ನಾನು ಅವರಿಗೆ ವಿಮುಖನಾಗಿ ಅವರನ್ನು ಶತ್ರುಗಳ ದೇಶಕ್ಕೆ ಕರೆದುಕೊಂಡು ಬಂದೆನೆಂದು ಅವರು ಅರಿತುಕೊಂಡು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಪಾಪಕ್ಕೆ ಬರತಕ್ಕ ಶಿಕ್ಷೆಯನ್ನು ಸ್ವೀಕರಿಸಲು ಯೋಗ್ಯರೆಂದು ಹೇಳಿಕೊಂಡರೆ
ಆ ಮನುಷ್ಯನು ನಿನ್ನನ್ನು ಕೊಂದುಹಾಕುವನು. ಆಗಲೂ ನೀನು “ನಾನು ದೇವರು” ಎಂದು ಹೇಳುವಿಯಾ? ಇಲ್ಲ. ಅವನು ನಿನ್ನನ್ನು ತನ್ನ ಅಧಿಕಾರದಲ್ಲಿರಿಸುವನು. ಆಗ ನೀನು “ಕೇವಲ ಮನುಷ್ಯನೇ” ಎಂದು ತಿಳಿಯುವಿ.