ಯೆಹೆಜ್ಕೇಲನು 28:12 - ಪರಿಶುದ್ದ ಬೈಬಲ್12 “ನರಪುತ್ರನೇ, ತೂರ್ ದೇಶದ ರಾಜನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ: “‘ನೀನೊಬ್ಬ ಆದರ್ಶ ಮನುಷ್ಯನಾಗಿದ್ದೆ. ಸರ್ವಾಂಗಸುಂದರನೂ ಜ್ಞಾನದಿಂದ ತುಂಬಿದವನೂ ಆಗಿದ್ದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ನರಪುತ್ರನೇ, ನೀನು ತೂರಿನ ಅರಸನ ವಿಷಯದಲ್ಲಿ ಶೋಕ ಗೀತೆಯನ್ನು ಹಾಡು, ಅವನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಸರ್ವಸುಲಕ್ಷಣ ಶಿರೋಮಣಿ, ಪೂರ್ಣಜ್ಞಾನಿ, ಪರಿಪೂರ್ಣಸುಂದರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ನರಪುತ್ರನೇ, ನೀನು ಟೈರಿನ ಅರಸನನ್ನು ಕುರಿತು ಶೋಕಗೀತೆಯೊಂದನ್ನು ಹಾಡಿ ಅವನಿಗೆ ಹೀಗೆ ನುಡಿ: ಸರ್ವೇಶ್ವರನಾದ ದೇವರು ಹೀಗೆನ್ನುತ್ತಾರೆ: - “ನೀನು ಸರ್ವಸುಲಕ್ಷಣ ಶಿರೋಮಣಿ ಪರಿಪೂರ್ಣ ಸುಂದರ, ಪೂರ್ಣಜ್ಞಾನಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನರಪುತ್ರನೇ, ನೀನು ತೂರಿನ ಅರಸನ ವಿಷಯದಲ್ಲಿ ಶೋಕಗೀತವನ್ನೆತ್ತು, ಅವನಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಸರ್ವಸುಲಕ್ಷಣಶಿರೋಮಣಿ, ಪೂರ್ಣಜ್ಞಾನಿ, ಪರಿಪೂರ್ಣಸುಂದರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಮನುಷ್ಯಪುತ್ರನೇ, ಟೈರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಸರ್ವಸುಲಕ್ಷಣ ಶಿರೋಮಣಿ. ಸಂಪೂರ್ಣಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ. ಅಧ್ಯಾಯವನ್ನು ನೋಡಿ |
ಅವರು ನಿನ್ನ ಬಗ್ಗೆ ಈ ಶೋಕಗೀತೆಯನ್ನು ಹಾಡುವರು: “‘ತೂರ್, ನೀನು ಹೆಸರುವಾಸಿಯಾದ ನಗರವಾಗಿದ್ದೆ. ನಿನ್ನಲ್ಲಿ ವಾಸಮಾಡಲು ಜನರು ಸಮುದ್ರದಾಚೆಯಿಂದ ಬಂದರು. ನೀನು ಪ್ರಸಿದ್ಧಳಾಗಿದ್ದೆ, ಆದರೆ ನೀನೀಗ ಹೋಗಿಬಿಟ್ಟೆ. ದ್ವೀಪವಾಗಿರುವ ನೀನು ಮತ್ತು ನಿನ್ನಲ್ಲಿ ವಾಸವಾಗಿದ್ದ ಜನರು ಸಮುದ್ರದಿಂದ ದೂರದಲ್ಲಿರುವುದರಿಂದ ಬಲಿಷ್ಠರಾಗಿದ್ದೀರಿ. ಭೂಮಿಯ ಮೇಲೆ ವಾಸವಾಗಿದ್ದ ಎಲ್ಲಾ ಜನರನ್ನು ನೀವು ಭಯಗೊಳಿಸಿದಿರಿ.
“ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: “‘ಜನಾಂಗಗಳ ಮಧ್ಯೆ ಹೆಮ್ಮೆಯಿಂದ ನಡೆದಾಡುತ್ತಿರುವ ಮೃಗರಾಜನಂತೆ ನೀನಿರುವೆ ಎಂದು ನೀನು ಭಾವಿಸಿದ್ದೆ. ಆದರೆ ನಿಜವಾಗಿಯೂ ನೀನು ಸರೋವರದಲ್ಲಿರುವ ಪೇರ್ಮೊಸಳೆಯಾಗಿರುವೆ. ನೀರಿನ ಹೊಳೆಗಳಲ್ಲಿ ನೀನು ನಿನ್ನ ದಾರಿಯನ್ನು ಮಾಡುವೆ. ನಿನ್ನ ಕಾಲುಗಳಿಂದ ಆ ನೀರನ್ನು ನೀನು ಕೆಸರಾಗಿ ಮಾಡುವೆ. ನೀನು ಈಜಿಪ್ಟಿನ ಹೊಳೆಗಳನ್ನು ಕದಡಿಸುವೆ.’”