Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:13 - ಪರಿಶುದ್ದ ಬೈಬಲ್‌

13 ದೇವರ ಉದ್ಯಾನವನವಾಗಿದ್ದ ಏದೆನಿನಲ್ಲಿ ನೀನಿದ್ದೆ. ನಿನ್ನ ಬಳಿಯಲ್ಲಿ ಬಂಗಾರದ ಚೌಕಟ್ಟಿನಲ್ಲಿ ಕುಳ್ಳಿರಿಸಿದ ವಜ್ರ, ವೈಢೂರ್ಯ, ನವರತ್ನಗಳ ಆಭರಣಗಳಿದ್ದವು. ನೀನು ಸೃಷ್ಟಿಸಲ್ಪಟ್ಟ ದಿನದಲ್ಲಿ ಈ ಸೌಂದರ್ಯವು ನಿನಗೆ ಕೊಡಲ್ಪಟ್ಟಿತು. ದೇವರು ನಿನ್ನನ್ನು ಬಲಾಢ್ಯನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೀನಿದ್ದೆ ದೇವರ ಉದ್ಯಾನವನದ ಏದೆನಿನೊಳು ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ಬೆರುಲ್ಲ, ವೈಡೂರ್ಯ, ನೀಲ, ಕೆಂಪರಲು, ಸ್ಫಟಿಕವೆಂಬ ನವರತ್ನಗಳಿಂದ ಭೂಷಿತನಾಗಿದ್ದೆ ನೀನು. ನಿನ್ನ ಕಿವಿಯೋಲೆ ಆಭರಣಗಳು ಸುವರ್ಣಖಚಿತವಾಗಿದ್ದವು. ನಿನ್ನ ಸೃಷ್ಟಿಯ ದಿನದಂದೇ ಸಿದ್ಧವಾಗಿದ್ದವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದಿ; ಮಾಣಿಕ್ಯ ಪುಷ್ಯರಾಗ ಪಚ್ಚೆ ಪೀತರತ್ನ ಬೆರುಲ್ಲ ವೈಡೂರ್ಯ ನೀಲಕೆಂಪರಲು ಸ್ಫಟಿಕ ಈ ನವರತ್ನಗಳಿಂದ ಭೂಷಿತವಾಗಿದ್ದಿ; ನಿನ್ನಲ್ಲಿನ [ಈ ರತ್ನಗಳ] ಗೂಡುಗಳೂ ಮನೆಗಳೂ ಸುವರ್ಣ ರಚಿತವಾಗಿದ್ದವು; ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇವರ ತೋಟವಾದ ಏದೆನಿನಲ್ಲಿ ನೀನಿದ್ದೆ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು, ಸ್ಪಟಿಕ ಚಿನ್ನ ಈ ಅಮೂಲ್ಯವಾದವುಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:13
25 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನು ಸೃಷ್ಟಿಸಿದಾಗ ನೀನು ಸದ್ಗುಣಿಯಾಗಿ ನಿರ್ದೋಷಿಯಾಗಿದ್ದಿ. ಆದರೆ ನೀನು ದುಷ್ಟನಾಗುತ್ತಾ ಬಂದೆ.


ನಿನ್ನಲ್ಲಿ ಅನೇಕ ಬೆಲೆಬಾಳುವ ವಸ್ತುಗಳಿದ್ದುದರಿಂದ ಅರಾಮ್ ನಿನ್ನೊಂದಿಗೆ ವ್ಯಾಪಾರ ಮಾಡಿತು. ಅವರು ಇಂದ್ರನೀಲ, ಧೂಮ್ರ ಬಣ್ಣದ ಬಟ್ಟೆ, ಕಸೂತಿ ಕೆಲಸ, ನಯವಾದ ಬಟ್ಟೆ, ಹವಳ, ಕೆಂಪು ಹರಳು ಇತ್ಯಾದಿಗಳನ್ನು ಕೊಟ್ಟು ವಸ್ತುಗಳನ್ನು ನಿನ್ನಿಂದ ಕೊಂಡುಕೊಂಡರು.


ದೇವರಾದ ಯೆಹೋವನು ಪೂರ್ವ ದಿಕ್ಕಿನಲ್ಲಿದ್ದ ಏದೆನ್ ಸೀಮೆಯಲ್ಲಿ ಒಂದು ತೋಟವನ್ನು ಮಾಡಿ ತಾನು ಸೃಷ್ಟಿಸಿದ ಮನುಷ್ಯನನ್ನು ಆ ತೋಟದಲ್ಲಿರಿಸಿದನು.


ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.


‘ಹಿಂದಿನ ಕಾಲದಲ್ಲಿ ದೇಶವು ಹಾಳಾಗಿ ಹೋಗಿತ್ತು. ಈಗ ಇದು ಏದೆನ್ ತೋಟದಂತಿದೆ. ಪಟ್ಟಣಗಳು ನಾಶವಾಗಿದ್ದವು, ಬರಿದಾಗಿದ್ದವು. ಈಗಲಾದರೋ ಅವು ಸುರಕ್ಷಿತವಾಗಿದ್ದು ಜನಭರಿತವಾಗಿವೆ’” ಎಂದು ಜನರು ಅನ್ನುವರು.


ಅಶ್ಶೂರವನ್ನು ಆತನು ಹೊಡೆಯುವಾಗ ಹಾರ್ಪ್‌ವಾದ್ಯಗಳನ್ನು ಮತ್ತು ದಮ್ಮಡಿಗಳನ್ನು ಬಾರಿಸಿದಂತಾಗುವದು. ಯೆಹೋವನು ಅಶ್ಶೂರವನ್ನು ತನ್ನ ಮಹಾಶಕ್ತಿಯಿಂದ ಸೋಲಿಸುವನು.


“ಪುರುಷರು ಮರೆತಿರುವ ವೇಶ್ಯೆಯೇ, ನಿನ್ನ ಕಿನ್ನರಿಯನ್ನು ತೆಗೆದುಕೊಂಡು ಊರೊಳಗೆ ಹೋಗಿ ನಿನ್ನ ಹಾಡನ್ನು ನುಡಿಸು, ಮತ್ತೆಮತ್ತೆ ಹಾಡು. ಆಗ ಯಾರಾದರೂ ನಿನ್ನನ್ನು ನೆನಪುಮಾಡಿಕೊಳ್ಳಬಹುದೇನೋ.”


ನಿನ್ನ ಜಂಬವು ಪಾತಾಳಕ್ಕೆ ಕಳುಹಿಸಲಾಗಿದೆ. ನಿನ್ನ ಹಾರ್ಪ್‌ವಾದ್ಯದ ಸ್ವರವು ನಿನ್ನ ಅಹಂಕಾರದ ಆತ್ಮವನ್ನು ಸಾರಿಹೇಳುತ್ತವೆ. ಹುಳಗಳು ನಿನ್ನ ಶರೀರವನ್ನು ತಿಂದುಬಿಡುವವು. ಹಾಸಿಗೆಯೋ ಎಂಬಂತೆ ನೀನು ಅವುಗಳ ಮೇಲೆ ಮಲಗಿಕೊಳ್ಳುವೆ. ಹುಳಗಳು ನಿನ್ನ ಶರೀರವನ್ನು ಕಂಬಳಿಯಂತೆ ಮುಚ್ಚಿಕೊಳ್ಳುವವು.


ಆ ಸ್ತ್ರೀಯು ಧೂಮ್ರ ವರ್ಣದ ಮತ್ತು ಕೆಂಪು ಬಣ್ಣದ ಬಟ್ಟೆಗಳನ್ನು ಧರಿಸಿದ್ದಳು. ಅವಳು ತಾನು ತೊಟ್ಟಿದ್ದ ಚಿನ್ನ, ರತ್ನ, ಮುತ್ತು, ಮುಂತಾದವುಗಳಿಂದ ಪ್ರಕಾಶಿಸುತ್ತಿದ್ದಳು. ಅವಳು ತನ್ನ ಕೈಯಲ್ಲಿ ಚಿನ್ನದ ಬಟ್ಟಲನ್ನು ಹಿಡಿದಿದ್ದಳು. ಆ ಬಟ್ಟಲು ಅಸಹ್ಯವಾದವುಗಳಿಂದ ಮತ್ತು ಅವಳ ಲೈಂಗಿಕ ಪಾಪಗಳ ಅಶುದ್ಧತೆಯಿಂದ ತುಂಬಿಹೋಗಿತ್ತು.


“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಯಾವನು ಜಯಗಳಿಸುತ್ತಾನೋ ಅವನಿಗೆ ತಿನ್ನಲು ಜೀವದಾಯಕ ಮರದ ಹಣ್ಣನ್ನು ಕೊಡುತ್ತೇನೆ. ಈ ಮರವು ದೇವರ ತೋಟದಲ್ಲಿದೆ.


ಶೆಬ ಮತ್ತು ರಗ್ಮದ ವ್ಯಾಪಾರಿಗಳು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ನಿನಗೆ ಸಂಬಾರ ಜೀನಸು, ರತ್ನಗಳು ಮತ್ತು ಚಿನ್ನವನ್ನು ಬದಲಿಕೊಟ್ಟರು.


ನಿನ್ನ ಸಂತಸದ ಹಾಡುಗಳನ್ನು ನಾನು ನಿಲ್ಲಿಸಿಬಿಡುವೆನು. ನಿನ್ನ ಕಿನ್ನರಿ ಸ್ವರವನ್ನು ಜನರು ಇನ್ನೆಂದೂ ಕೇಳರು.


“‘ಬಾಬಿಲೋನೇ, ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು. ನೀನು ಎಲ್ಲಿ ನಿರ್ಮಿಸಲ್ಪಟ್ಟಿದ್ದೆಯೋ, ಎಲ್ಲಿ ನೀನು ಜನ್ಮತಾಳಿದೆಯೋ ಅಲ್ಲಿ ನಿನ್ನ ನ್ಯಾಯತೀರಿಸುವೆನು.


ಲೋಟನು ಕಣ್ಣೆತ್ತಿ ನೋಡಿದಾಗ ಜೋರ್ಡನ್ ಕಣಿವೆಯೆಲ್ಲಾ ಕಾಣಿಸಿತು. ಅಲ್ಲಿ ಬೇಕಾದಷ್ಟು ನೀರಿರುವುದನ್ನು ಲೋಟನು ನೋಡಿದನು. (ಆ ಕಾಲದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳು ಯೆಹೋವನಿಂದ ನಾಶವಾಗಿರಲಿಲ್ಲ. ಆ ಕಾಲದಲ್ಲಿ ಜೋರ್ಡನ್ ಕಣಿವೆಯು ಚೋಗರ್ ತನಕ ಯೆಹೋವನ ತೋಟದಂತಿತ್ತು. ಅದು ಈಜಿಪ್ಟಿನ ಭೂಮಿಯಂತೆ ಫಲವತ್ತಾಗಿತ್ತು.)


ಆ ಸೈನ್ಯವು ಸುಡುವ ಬೆಂಕಿಯಂತೆ ದೇಶವನ್ನು ನಾಶಮಾಡುವದು. ಏದೆನ್ ತೋಟದಂತೆ ಕಂಗೊಳಿಸುತ್ತಿದ್ದ ದೇಶವು ಸೈನ್ಯವು ಬಂದ ಮೇಲೆ ಬೆಂಗಾಡಿನಂತಿರುವದು. ಅವರಿಂದ ಯಾರೂ ತಪ್ಪಿಸಿಕೊಳ್ಳಲಾರರು.


ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವದಿಲ್ಲ. ಸಂತಸದ ಗದ್ದಲವು ಕೇಳಿಸುವದಿಲ್ಲ. ಆ ಶಬ್ದಗಳೆಲ್ಲಾ ನಿಂತುಹೋಗಿವೆ. ಹಾರ್ಪ್‌ವಾದ್ಯದ ಮತ್ತು ದಮ್ಮಡಿಗಳ ಶಬ್ದವು ನಿಂತಿದೆ.


ನೀನು ಆರಿಸಲ್ಪಟ್ಟ ಕೆರೂಬಿಯರಲ್ಲಿ ಒಬ್ಬನಾಗಿದ್ದೆ. ನಿನ್ನ ರೆಕ್ಕೆಗಳು ನನ್ನ ಸಿಂಹಾಸನದ ಮೇಲೆ ಚಾಚಿದ್ದವು. ನಾನು ನಿನ್ನನ್ನು ದೇವರ ಪವಿತ್ರ ಪರ್ವತದಲ್ಲಿಟ್ಟೆನು. ನೀನು ಬೆಂಕಿಯಂತೆ ಹೊಳೆಯುವ ರತ್ನಗಳ ಮೇಲೆ ನಡೆದಾಡಿದೆ.


ಇಥಿಯೋಪಿಯಾ ದೇಶದ ಪುಷ್ಯರಾಗವೂ ಜ್ಞಾನದಷ್ಟು ಅಮೂಲ್ಯವಲ್ಲ. ಶುದ್ಧಬಂಗಾರವನ್ನು ಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲು ಅಸಾಧ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು