Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:18 - ಪರಿಶುದ್ದ ಬೈಬಲ್‌

18 ನೀನು ಅನೇಕ ತಪ್ಪುಗಳನ್ನು ಮಾಡಿದೆ. ನೀನು ಮೋಸಗಾರನಾದ ವ್ಯಾಪಾರಿ. ಇದರಿಂದಾಗಿ ನೀನು ಪವಿತ್ರಸ್ಥಳವನ್ನು ಹೊಲೆ ಮಾಡಿರುವಿ. ಆದ್ದರಿಂದ ನಿನ್ನೊಳಗೆ ಬೆಂಕಿಯನ್ನು ಬರಮಾಡಿ ಅದು ನಿನ್ನನ್ನು ದಹಿಸುವಂತೆ ಮಾಡಿದೆನು. ನೀನು ಸುಟ್ಟ ಬೂದಿಯಾದೆ. ಈಗ ಎಲ್ಲರೂ ನಿನ್ನ ಲಜ್ಜಾತನವನ್ನು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿನ್ನ ಅಪಾರವಾದ ಅಪರಾಧಗಳಿಂದಲೂ, ಅನ್ಯಾಯವಾದ ವ್ಯಾಪಾರದಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ; ಆದುದರಿಂದ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿತು, ನೋಡುವವರೆಲ್ಲರ ಕಣ್ಣೆದುರಿಗೆ ನಿನ್ನನ್ನು ಬೂದಿ ಮಾಡಿಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಪಾರ ಅಪರಾಧಗಳಿಂದ, ಅನ್ಯಾಯ ವ್ಯಾಪಾರಗಳಿಂದ ನಿನ್ನಲ್ಲಿನ ಪವಿತ್ರಾಲಯ ಅಶುದ್ಧವಾಯಿತು ನಿನ್ನಿಂದ. ಎಂದೇ, ನಾ ಬರಮಾಡಿದೆ ಬೆಂಕಿಯನು ನಿನ್ನೊಳಗಿಂದ ನೋಡ್ವರೆಲ್ಲರ ಮುಂದೆ ಸುಟ್ಟು ಭಸ್ಮ ಮಾಡಿತು ನಿನ್ನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನ್ನ ಅಪಾರವಾದ ಅಪರಾಧಗಳಿಂದಲೂ ಅನ್ಯಾಯವಾದ ವ್ಯಾಪಾರದಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸುಮಾಡಿದಿ; ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿತು, ನೋಡುವವರೆಲ್ಲರ ಕಣ್ಣೆದುರಿಗೆ ನಿನ್ನನ್ನು ಬೂದಿಮಾಡಿಬಿಟ್ಟೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿನ್ನ ಅಪಾರವಾದ ಪಾಪಗಳಿಂದಲೂ ಅನ್ಯಾಯವಾದ ವ್ಯಾಪಾರಗಳಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸುಮಾಡಿದೆ. ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿಬಿಟ್ಟಿತು. ನೋಡುವವರೆಲ್ಲರ ಮುಂದೆ ನಿನ್ನನ್ನು ಬೂದಿಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:18
17 ತಿಳಿವುಗಳ ಹೋಲಿಕೆ  

ಆಗ ನೀವು ದುಷ್ಟಜನರ ಮೇಲೆ ನಡೆದುಕೊಂಡು ಹೋಗುವಿರಿ; ಅವರು ನಿಮ್ಮ ಕಾಲುಗಳ ಕೆಳಗೆ ಬೂದಿಯಂತಿರುವರು. ನ್ಯಾಯತೀರ್ಪಿನ ಸಮಯದಲ್ಲಿ ನಾನು ಹಾಗೆ ಮಾಡುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ಆದ್ದರಿಂದ ಅವಳಿಗೆ ಮರಣ, ಗೋಳಾಟ, ಭೀಕರ ಕ್ಷಾಮ ಎಂಬ ಉಪದ್ರವಗಳು ಒಂದೇ ದಿನದಲ್ಲಿ ಬರುತ್ತವೆ. ಅವಳಿಗೆ ತೀರ್ಪು ನೀಡಿದ ದೇವರಾಗಿರುವ ಪ್ರಭುವು ಬಲಿಷ್ಠನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುತ್ತಾಳೆ.”


ನಿನ್ನ ವ್ಯಾಪಾರವು ನಿನಗೆ ಐಶ್ವರ್ಯವನ್ನು ತಂದಿತು. ಆದರೆ ಅದರೊಂದಿಗೆ ನಾನಾ ದುಷ್ಟತ್ವಗಳು ನಿನ್ನೊಳಗೆ ಬಂದು ನೀನು ಪಾಪ ಮಾಡಿದೆ. ಆಗ ನಾನು ನಿನ್ನನ್ನು ಅಶುದ್ಧನೆಂದು ಪರಿಗಣಿಸಿ ನಿನ್ನನ್ನು ದೇವರ ಪರ್ವತದಿಂದ ದಬ್ಬಿಬಿಟ್ಟೆನು. ನೀನು ನನ್ನ ಕೆರೂಬಿಯರಲ್ಲಿ ವಿಶೇಷವಾದವನಾಗಿದ್ದೆ. ನಿನ್ನ ರೆಕ್ಕೆಗಳು ನನ್ನ ಸಿಂಹಾಸನದ ಮೇಲೆ ಚಾಚಿರುತ್ತಿದ್ದವು. ಆದರೆ ಬೆಂಕಿಯಂತೆ ಹೊಳೆಯುವ ರತ್ನಾಭರಣಗಳನ್ನೆಲ್ಲಾ ತೆಗೆದಿಡಲು ನಿನ್ನನ್ನು ಬಲವಂತಪಡಿಸಿದೆ.


“ನರಪುತ್ರನೇ, ತೂರಿನ ರಾಜನಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “‘ನೀನು ಬಹಳ ಹೆಮ್ಮೆಯುಳ್ಳವನು. “ನಾನು ದೇವರು ಎಂದು ಹೇಳುವೆ. ಸಾಗರದ ಮಧ್ಯದಲ್ಲಿ ದೇವರುಗಳ ಸಿಂಹಾಸನದಲ್ಲಿ ನಾನು ಕೂತಿರುತ್ತೇನೆ ಎಂದು ಅನ್ನುವೆ.” “‘ಆದರೆ ನೀನು ಮನುಷ್ಯನು, ದೇವರಲ್ಲ. ನೀನು ದೇವರೆಂದು ನೀನೇ ನೆನಸಿಕೊಳ್ಳುವೆ.


ದೇವರು ಸೊದೋಮ್, ಗೊಮೋರ ಎಂಬ ಕೆಟ್ಟ ಪಟ್ಟಣಗಳನ್ನು ದಂಡಿಸಿದನು. ಆತನು ಆ ಪಟ್ಟಣಗಳಲ್ಲಿ ಏನೂ ಉಳಿಯದಂತೆ, ಸುಟ್ಟು ಬೂದಿಮಾಡಿದನು. ತನಗೆ ವಿರುದ್ಧವಾಗಿರುವ ಜನರಿಗೆ ಏನಾಗುತ್ತದೆ ಎಂಬುದಕ್ಕೆ ಆತನು ಆ ಪಟ್ಟಣಗಳನ್ನು ನಿದರ್ಶನಗಳನ್ನಾಗಿ ಇಟ್ಟಿದ್ದಾನೆ.


ಒಬ್ಬನು ಪ್ರಪಂಚವನ್ನೆಲ್ಲಾ ಸಂಪಾದಿಸಿಕೊಂಡು ತನ್ನ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅದರಿಂದ ಅವನಿಗೆ ಪ್ರಯೋಜನವೇನು?


ಆದ್ದರಿಂದ ನಾನು ಯೆಹೂದದಲ್ಲಿ ಬೆಂಕಿಯನ್ನು ಹಚ್ಚುವೆನು; ಆ ಬೆಂಕಿಯು ಜೆರುಸಲೇಮಿನ ಉನ್ನತ ಬುರುಜುಗಳನ್ನು ನಾಶಮಾಡುವದು.”


ಆದ್ದರಿಂದ ಮೋವಾಬಿನಲ್ಲಿ ನಾನು ಬೆಂಕಿಯನ್ನು ಹಾಕುವೆನು. ಅದು ಕೆರಿಯೋತಿನ ಉನ್ನತ ಗೋಪುರಗಳನ್ನು ನಾಶಮಾಡುವದು. ಅಲ್ಲಿ ಭಯಂಕರವಾದ ಕೂಗಾಟವೂ ತುತ್ತೂರಿಯ ಧ್ವನಿಯೂ ಇರುತ್ತದೆ. ಆಗ ಮೋವಾಬು ಸಾಯುವದು.


ಆದ್ದರಿಂದ ನಾನು ರಬ್ಬದ ಗೋಡೆಗಳಲ್ಲಿ ಬೆಂಕಿ ಹಾಕುವೆನು. ಆ ಬೆಂಕಿಯು ರಬ್ಬದ ಉನ್ನತ ಗೋಪುರಗಳನ್ನು ನಾಶಮಾಡುವದು; ಹಗಲಿನ ಯುದ್ಧದ ಕೂಗಾಟದಂತೆಯೂ ಸುಂಟರಗಾಳಿಯಂತೆಯೂ ಸಂಕಟವು ಅವರ ದೇಶಕ್ಕೆ ಬರುವದು.


ಬಳಿಕ ಕೂದಲಲ್ಲಿ ಸ್ವಲ್ಪವನ್ನು ಮತ್ತೆ ತೆಗೆದುಕೊಂಡು ಬೆಂಕಿಯಲ್ಲಿ ಹಾಕಿ ಸುಟ್ಟುಬಿಡು. ಅಲ್ಲಿಂದ ಬೆಂಕಿಯು ಹಬ್ಬಿ ಇಡೀ ಇಸ್ರೇಲ್ ಜನಾಂಗವನ್ನು ನಾಶಮಾಡುವುದು.”


ಆದರೆ ನೀವು ಮಾಡಿದ್ದು ಸರಿಯಾಗಿರದ ಪಕ್ಷದಲ್ಲಿ ಶೆಕೆಮಿನ ಹಿರಿಯರಾದ ನಿಮ್ಮನ್ನೂ ಮಿಲ್ಲೋ ಕೋಟೆಯವರನ್ನೂ ಅಬೀಮೆಲೆಕನು ನಾಶಮಾಡಲಿ. ಅಬೀಮೆಲೆಕನು ಕೂಡ ನಾಶಹೊಂದಲಿ” ಎಂದನು.


“ಆ ಮುಳ್ಳುಪೊದೆಯು, ‘ನೀವು ನಿಜವಾಗಿಯೂ ನನ್ನನ್ನು ನಿಮ್ಮ ಅರಸನನ್ನಾಗಿ ಮಾಡಬೇಕೆಂದು ಇಚ್ಛೆಪಟ್ಟರೆ, ನೀವು ಬಂದು ನನ್ನ ನೆರಳಿನಲ್ಲಿ ಆಶ್ರಯಪಡೆಯಿರಿ; ನೀವು ಹೀಗೆ ಮಾಡಲು ಒಪ್ಪದಿದ್ದರೆ ನನ್ನಿಂದ ಬೆಂಕಿ ಹೊರಡಲಿ. ಆ ಬೆಂಕಿಯು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡಲಿ’ ಎಂದಿತು.


ನಾನು ನಿನ್ನನ್ನು ಸೃಷ್ಟಿಸಿದಾಗ ನೀನು ಸದ್ಗುಣಿಯಾಗಿ ನಿರ್ದೋಷಿಯಾಗಿದ್ದಿ. ಆದರೆ ನೀನು ದುಷ್ಟನಾಗುತ್ತಾ ಬಂದೆ.


ಆದರೆ ನಮ್ಮ ಒಡೆಯನಾದ ಯೆಹೋವನು ಅದೆಲ್ಲವನ್ನು ತೆಗೆದುಕೊಳ್ಳುವನು. ಆಕೆಯ ನೌಕಾಬಲವನ್ನು ಮುರಿದುಬಿಡುವನು. ಮತ್ತು ಆ ನಗರವು ಬೆಂಕಿಯಿಂದ ನಾಶವಾಗುವದು.


ಯೆಹೋವನು ಜನರಿಗೆ ನ್ಯಾಯತೀರ್ಪು ಮಾಡುವನು. ಆ ಬಳಿಕ ಯೆಹೋವನು ಜನರನ್ನು ಬೆಂಕಿಯಿಂದಲೂ ಖಡ್ಗದಿಂದಲೂ ನಾಶಮಾಡುವನು. ಯೆಹೋವನು ಅನೇಕಾನೇಕ ಜನರನ್ನು ನಾಶಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು