ಯೆಹೆಜ್ಕೇಲನು 28:22 - ಪರಿಶುದ್ದ ಬೈಬಲ್22 ನನ್ನ ಒಡೆಯನಾದ ಯೆಹೋವನು ಈ ಮಾತುಗಳನ್ನು ಹೇಳಿದನೆಂದು ಅವನಿಗೆ ತಿಳಿಸು: “‘ಚೀದೋನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನ್ನ ಜನರು ನನ್ನನ್ನು ಗೌರವಿಸಲು ಕಲಿಯುವರು. ನಾನು ಚೀದೋನನ್ನು ಶಿಕ್ಷಿಸಿದಾಗ ನಾನೇ ಯೆಹೋವನೆಂದು ಜನರಿಗೆ ಗೊತ್ತಾಗುವದು. ನಾನು ಪವಿತ್ರನು ಎಂದು ಅವರು ತಿಳಿದು ಆ ರೀತಿಯಾಗಿ ಅವರು ನನ್ನೊಂದಿಗೆ ವರ್ತಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಚೀದೋನೇ, ನಾನು ನಿನ್ನ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣದಲ್ಲಿ ನ್ಯಾಯ ತೀರಿಸಿ, ನಾನು ಮಹಿಮೆಯನ್ನು ಹೊಂದುವಾಗ ನಾನೇ ಯೆಹೋವನು’ ಎಂದು ಎಲ್ಲರಿಗೂ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಹಾ, ಸಿದೋನೇ, ನಾನು ನಿನಗೆ ವಿರುದ್ಧನಾಗಿ ನಿನ್ನ ಮಧ್ಯದಲ್ಲೆ ಪ್ರಖ್ಯಾತಿಗೊಳ್ಳುವೆನು ; ನಾನು ಈ ಪಟ್ಟಣವನ್ನು ದಂಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ, ನಾನೇ ಸರ್ವೇಶ್ವರ ಎಂದು ಎಲ್ಲರಿಗು ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಚೀದೋನೇ, ನಾನು ನಿನಗೆ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣವನ್ನು ದಂಡಿಸಿ ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ ನಾನೇ ಯೆಹೋವನು ಎಂದು ಎಲ್ಲರಿಗೂ ಗೊತ್ತಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನೀನು ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಸೀದೋನೇ ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧವಾಗುವಾಗ ನಾನೇ ಯೆಹೋವ ದೇವರೆಂದು ತಿಳಿಯುವರು. ಅಧ್ಯಾಯವನ್ನು ನೋಡಿ |
ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕಿದ್ದೇನೆಂದು ಅವರು ಕಾದು ನೋಡುವರು.’”