ಯೆಹೆಜ್ಕೇಲನು 28:23 - ಪರಿಶುದ್ದ ಬೈಬಲ್23 ಚೀದೋನಿಗೆ ನಾನು ರೋಗಮರಣಗಳನ್ನು ಕಳುಹಿಸುವೆನು. ನಗರದೊಳಗೆ ವಾಸಿಸುವ ಅನೇಕ ಮಂದಿ ಸಾಯುವರು. ನಗರದ ಹೊರಗೆ ಖಡ್ಗವು ಅನೇಕರನ್ನು ಕೊಲ್ಲುವದು, ಆಗ ಅವರು ನಾನು ಯೆಹೋವನೆಂದು ತಿಳಿಯುವರು.’” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ‘ನಾನು ಅದರಲ್ಲಿ ವ್ಯಾಧಿಯನ್ನೂ, ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟು ಮಾಡುವೆನು, ಖಡ್ಗವು ಸುತ್ತುಮುತ್ತಲೂ ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಯೆಹೋವನು’ ಎಂದು ಅವರಿಗೆ ತಿಳಿದು ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಾನು ಅದರಲ್ಲಿ ವ್ಯಾಧಿಯನ್ನೂ ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು; ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ತಿಳಿದುಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಾನು ಅದರಲ್ಲಿ ವ್ಯಾಧಿಯನ್ನೂ ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು; ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರಲು ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿದುಬರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಾನು ಅದರಲ್ಲಿ ವ್ಯಾಧಿಯನ್ನೂ ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು, ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು, ಆಗ ನಾನೇ ಯೆಹೋವ ದೇವರು ಎಂದು ಅವರಿಗೆ ತಿಳಿದುಬರುವುದು. ಅಧ್ಯಾಯವನ್ನು ನೋಡಿ |
‘ನಾವು ಎಲ್ಲಿಗೆ ಹೋಗಬೇಕು’ ಎಂದು ಅವರು ಕೇಳಬಹುದು. ಯೆಹೋವನು ಹೀಗೆ ಹೇಳಿದ್ದಾನೆ ಎಂದು ನೀನು ಅವರಿಗೆ ಹೇಳು. “‘ಕೆಲವು ಜನರು ಮರಣಹೊಂದಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಮರಣಹೊಂದುತ್ತಾರೆ. ಕೆಲವು ಜನರು ಖಡ್ಗಗಳಿಂದ ಕೊಲ್ಲಲ್ಪಡಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಖಡ್ಗಗಳಿಗೆ ಬಲಿಯಾಗುತ್ತಾರೆ. ಕೆಲವು ಜನರು ಹೊಟ್ಟೆಗೆ ಅನ್ನವಿಲ್ಲದೆ ಸಾಯಬೇಕು ಎಂದು ನಾನು ಗೊತ್ತುಮಾಡಿದ್ದೇನೆ. ಅವರು ಹಸಿವಿನಿಂದ ಸಾಯುತ್ತಾರೆ. ಕೆಲವು ಜನರನ್ನು ಶತ್ರುಗಳು ಸೆರೆಹಿಡಿದು ಪರದೇಶಕ್ಕೆ ತೆಗೆದುಕೊಂಡು ಹೋಗಲಿ ಎಂದು ಗೊತ್ತುಮಾಡಿದ್ದೇನೆ. ಅವರು ಪರದೇಶದಲ್ಲಿ ಸೆರೆಯಾಳುಗಳಾಗಿ ಇರುವರು.