24 “‘ಇಸ್ರೇಲಿನ ಸುತ್ತಲಿರುವ ರಾಜ್ಯಗಳು ಅದನ್ನು ಹಗೆ ಮಾಡಿದರು. ಆ ರಾಜ್ಯಗಳಿಗೆ ಬಹು ದೊಡ್ಡ ಕಂಟಕವು ಬಂದೊದಗುವದು. ಆಗ ಹರಿತವಾದ ಮುಳ್ಳಾಗಲಿ ಮುಳ್ಳಿನ ಪೊದೆಗಳಾಗಲಿ ಇಸ್ರೇಲಿನ ಜನರನ್ನು ಬಾಸಿ ಮಾಡಲು ಇರುವದಿಲ್ಲ. ಆಗ ನಾನು ಅವರ ಒಡೆಯನಾದ ಯೆಹೋವನು ಎಂದು ಅವರು ತಿಳಿಯುವರು.’”
24 “ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನು ಮೇಲೆ ಇರುವುದಿಲ್ಲ; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆಯು ಇನ್ನು ಆಗುವುದಿಲ್ಲ; ನಾನೇ ಕರ್ತನಾದ ಯೆಹೋವನು” ಎಂದು ಅವರಿಗೆ ತಿಳಿಯುವುದು.
ನಿಮ್ಮ ದೇವರಾದ ಯೆಹೋವನು ಶತ್ರುಗಳನ್ನು ಸೋಲಿಸಲು ನಿಮಗೆ ಸಹಾಯ ಮಾಡುವುದಿಲ್ಲ, ಅವರು ನಿಮಗೆ ಉರುಲಿನಂತಾಗುತ್ತಾರೆ. ಹೊಗೆ ಮತ್ತು ಧೂಳು ನಿಮ್ಮ ಕಣ್ಣಿಗೆ ನೋವನ್ನುಂಟು ಮಾಡುವಂತೆ ಅವರು ನಿಮಗೆ ನೋವನ್ನುಂಟು ಮಾಡುತ್ತಾರೆ; ಈ ಒಳ್ಳೆಯ ದೇಶದಿಂದ ನಿಮ್ಮನ್ನು ಬಲಾತ್ಕಾರದಿಂದ ಹೊರಗಟ್ಟಲಾಗುವುದು. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆ. ಆದರೆ ಯೆಹೋವನ ಆಜ್ಞೆಯನ್ನು ಪಾಲಿಸದಿದ್ದಲ್ಲಿ ನೀವು ಇದನ್ನು ಕಳೆದುಕೊಳ್ಳಬೇಕಾಗುತ್ತದೆ.
“ನೀವು ಆ ದೇಶದ ನಿವಾಸಿಗಳನ್ನು ಹೊರಡಿಸದೆ ಹೋದರೆ, ಅವರು ಉಳಿದುಕೊಂಡು ನಿಮ್ಮ ಕಣ್ಣುಗಳಲ್ಲಿ ಮರದ ಚೂರಿನಂತೆಯೂ ನಿಮ್ಮ ಪಕ್ಕೆಗಳಲ್ಲಿ ಮುಳ್ಳುಗಳಂತೆಯೂ ಇರುವರು. ನೀವು ವಾಸಿಸುವ ದೇಶದಲ್ಲಿ ನಿಮಗೆ ತೊಂದರೆ ಮಾಡುವರು.
ಆದರೆ ನನಗೆ ತೋರಿಸಲ್ಪಟ್ಟ ಆಶ್ಚರ್ಯಕರವಾದ ಸಂಗತಿಗಳ ಬಗ್ಗೆ ನಾನು ಬಹು ಹೆಮ್ಮೆಪಡಕೂಡದು. ಆದ್ದರಿಂದಲೇ ಬಾಧೆಯ ಸಮಸ್ಯೆಯೊಂದು ನನಗೆ ಕೊಡಲ್ಪಟ್ಟಿತು. ಸೈತಾನನಿಂದ ಬಂದ ದೂತನೇ ಈ ಸಮಸ್ಯೆ. ಬಹಳವಾಗಿ ಹೆಮ್ಮೆಪಡದಂತೆ ನನ್ನನ್ನು ಹೊಡೆಯುವುದಕ್ಕಾಗಿ ಅದನ್ನು ಕಳುಹಿಸಲಾಗಿತ್ತು.
“ನರಪುತ್ರನೇ, ಆ ಜನರು ನಿನ್ನನ್ನು ವಿರೋಧಿಸಿದರೂ ನೀನು ಅವರಿಗೆ ಭಯಪಡಬೇಡ ಮತ್ತು ಅವರು ಹೇಳುವ ಮಾತುಗಳಿಗೆ ನೀನು ಹೆದರಬೇಡ. ಮುಳ್ಳುಗಳೂ ಮುಳ್ಳುಪೊದೆಗಳೂ ನಿನಗೆ ಒತ್ತುವಂತೆಯೂ ನೀನು ಚೇಳುಗಳ ಮೇಲೆ ಕುಳಿತುಕೊಂಡಿರುವಂತೆಯೂ ಅದು ಇರುವದು. ಆದರೆ ಅವರಾಡುವ ಮಾತುಗಳಿಗೆ ಭಯಪಡಬೇಡ. ಅವರು ದಂಗೆಕೋರರು.
ಪೊದೆಗಳು ಇದ್ದ ಸ್ಥಳಗಳಲ್ಲಿ ಎತ್ತರವಾದ ದೇವದಾರು ಮರಗಳು ಬೆಳೆಯುವವು. ಹಣಜಿಯಿರುವ ಸ್ಥಳಗಳಲ್ಲಿ ಸುಗಂಧ ಮರಗಳು ಬೆಳೆಯುವವು. ಇವು ಯೆಹೋವನಾಮವನ್ನು ಪ್ರಸಿದ್ಧಿಪಡಿಸುವವು. ಯೆಹೋವನೇ ಸರ್ವಶಕ್ತನೆಂದು ಇವು ತೋರಿಸುವವು. ಈ ಸಾಕ್ಷಿಯು ಎಂದಿಗೂ ನಾಶವಾಗುವದಿಲ್ಲ.”
ದೇವರು ಅವರ ಕಣ್ಣೀರನ್ನೆಲ್ಲ ಒರಸಿ ಬಿಡುವನು. ಅಲ್ಲಿ ಇನ್ನು ಮರಣವಿರುವುದಿಲ್ಲ, ದುಃಖವಿರುವುದಿಲ್ಲ, ಗೋಳಾಟವಿರುವುದಿಲ್ಲ ಮತ್ತು ನೋವಿರುವುದಿಲ್ಲ. ಹಳೆಯ ಮಾರ್ಗಗಳೆಲ್ಲ ಹೋಗಿಬಿಟ್ಟವು” ಎಂದು ಹೇಳಿತು.
ಅವರಲ್ಲಿರುವ ಉತ್ತಮರೂ ಸಹ ಮುಳ್ಳಿನ ಪೊದೆಯಂತಿದ್ದಾರೆ. ಅವರಲ್ಲಿರುವ ಉತ್ತಮರೂ ಸಹ ಡೊಂಕುಡೊಂಕಾಗಿರುವ ಮುಳ್ಳುಪೊದೆಗಿಂತಲೂ ಡೊಂಕಾಗಿದ್ದಾರೆ. ನಿನ್ನ ಪ್ರವಾದಿಗಳು ಈ ದಿನವು ಬರುತ್ತಿದೆ ಎಂದು ಹೇಳುತ್ತಿದ್ದಾರೆ. ನಿನ್ನ ಪ್ರವಾದಿಗಳ ದಿವಸವು ಬಂದದೆ. ಈಗ ನೀನು ಶಿಕ್ಷಿಸಲ್ಪಡುವೆ. ನೀನು ಈಗ ಗಲಿಬಿಲಿಗೆ ಒಳಗಾಗುವೆ!
ನಾನು ಅವರ ಒಡೆಯನಾದ ಯೆಹೋವನೆಂದು ತಿಳಿಯುವರು. ಯಾಕೆಂದರೆ ನಾನು, ಅವರನ್ನು ಅವರ ಸ್ವದೇಶವನ್ನು ಬಿಟ್ಟು ಸೆರೆಹಿಡಿಯಲ್ಪಟ್ಟವರಾಗಿ ಬೇರೆ ದೇಶಗಳಿಗೆ ಹೋಗುವಂತೆ ಮಾಡಿದೆನು. ಆಮೇಲೆ ತಿರುಗಿ ಅವರನ್ನು ಒಟ್ಟುಗೂಡಿಸಿ ಅವರ ದೇಶಕ್ಕೆ ಹಿಂದಕ್ಕೆ ಕರೆಸಿದೆನು.
ಆ ದೇಶದಲ್ಲಿ ಅವರು ಸುರಕ್ಷಿತವಾಗಿ ವಾಸಿಸುವರು; ಮನೆಗಳನ್ನು ಕಟ್ಟಿ ದ್ರಾಕ್ಷಿತೋಟಗಳನ್ನು ಮಾಡುವರು. ಅವರನ್ನು ದ್ವೇಷಿಸಿದ ರಾಜ್ಯಗಳನ್ನು ದಂಡಿಸುವೆನು. ಆಗ ಇಸ್ರೇಲ್ ಜನರು ಸುರಕ್ಷಿತವಾಗಿ ಜೀವಿಸುವರು; ನಾನೇ ದೇವರಾದ ಯೆಹೋವನು ಎಂದು ತಿಳಿದುಕೊಳ್ಳುವರು.”
ಚೀದೋನಿಗೆ ನಾನು ರೋಗಮರಣಗಳನ್ನು ಕಳುಹಿಸುವೆನು. ನಗರದೊಳಗೆ ವಾಸಿಸುವ ಅನೇಕ ಮಂದಿ ಸಾಯುವರು. ನಗರದ ಹೊರಗೆ ಖಡ್ಗವು ಅನೇಕರನ್ನು ಕೊಲ್ಲುವದು, ಆಗ ಅವರು ನಾನು ಯೆಹೋವನೆಂದು ತಿಳಿಯುವರು.’”
ಯೆಹೋವನು ಹೀಗೆ ಹೇಳುತ್ತಾನೆ: “ಇಸ್ರೇಲ್ ಪ್ರದೇಶದ ಸುತ್ತಮುತ್ತ ವಾಸಮಾಡುವ ಜನರಿಗಾಗಿ ನಾನು ಏನು ಮಾಡುವೆನೆಂಬುದನ್ನು ನಿಮಗೆ ಹೇಳುವೆನು. ಆ ಜನರು ತುಂಬ ದುಷ್ಟರಾಗಿದ್ದಾರೆ. ನಾನು ಇಸ್ರೇಲಿನ ಜನರಿಗೆ ಕೊಟ್ಟ ಪ್ರದೇಶವನ್ನು ಅವರು ಹಾಳು ಮಾಡಿದರು. ನಾನು ಆ ಜನರನ್ನು ಅವರ ಪ್ರದೇಶದಿಂದ ಹೊರಗೆ ಎಸೆಯುವೆನು. ನಾನು ಅವರೊಂದಿಗೆ ಯೆಹೂದದ ಜನರನ್ನೂ ಎಸೆಯುವೆನು.
“ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ‘ಈ ಪ್ರದೇಶವನ್ನು ಬಿಟ್ಟುಹೋಗುವಂತೆ ನಾನು ಈ ಜನರನ್ನು ಬಲವಂತ ಮಾಡುವುದಿಲ್ಲ. ಈ ಜನರು ನಿಮಗೊಂದು ಸಮಸ್ಯೆಯಾಗುತ್ತಾರೆ. ಅವರು ನಿಮಗೊಂದು ಉರುಲಾಗುತ್ತಾರೆ. ಅವರ ಸುಳ್ಳುದೇವರುಗಳು ನಿಮಗೆ ಬಲೆಯಂತೆ ಉರುಲಾಗುತ್ತವೆ.’”