ಯೆಹೆಜ್ಕೇಲನು 28:4 - ಪರಿಶುದ್ದ ಬೈಬಲ್4 ನಿನ್ನ ಜ್ಞಾನ ಮತ್ತು ತಿಳುವಳಿಕೆಯಿಂದ ನೀನು ಐಶ್ವರ್ಯವನ್ನು ಕೂಡಿಹಾಕಿದ್ದೀ. ನಿನ್ನ ಖಜಾನೆಯಲ್ಲಿ ಬೆಳ್ಳಿಬಂಗಾರವನ್ನು ಶೇಖರಿಸಿದ್ದೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿನ್ನ ಜ್ಞಾನದಿಂದಲೂ, ನಿನ್ನ ವಿವೇಕದಿಂದಲೂ ನೀನು ಐಶ್ವರ್ಯವನ್ನು ಹೆಚ್ಚಿಸಿಕೊಂಡಿರುವೆ. ನಿನ್ನ ಭಂಡಾರಗಳಲ್ಲಿ ಬೆಳ್ಳಿಯನ್ನೂ, ಬಂಗಾರವನ್ನು ತುಂಬಿಸಿಕೊಂಡಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿನ್ನ ಜ್ಞಾನವಿವೇಕಗಳಿಂದ ಐಶ್ವರ್ಯವನ್ನು ಗಳಿಸಿ, ನಿನ್ನ ಬೊಕ್ಕಸಗಳಲ್ಲಿ ಬೆಳ್ಳಿಬಂಗಾರವನ್ನು ತುಂಬಿಸಿಕೊಂಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿನ್ನ ಜ್ಞಾನವಿವೇಕಗಳಿಂದ ನೀನು ಐಶ್ವರ್ಯವನ್ನು ಗಳಿಸಿ ನಿನ್ನ ಬೊಕ್ಕಸಗಳಲ್ಲಿ ಬೆಳ್ಳಿಬಂಗಾರವನ್ನು ತುಂಬಿಸಿಕೊಂಡಿದ್ದೀ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಿನ್ನ ಜ್ಞಾನದಿಂದಲೂ ನಿನ್ನ ವಿವೇಕದಿಂದಲೂ ನಿನಗೆ ಐಶ್ವರ್ಯವನ್ನು ಗಳಿಸಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ. ಅಧ್ಯಾಯವನ್ನು ನೋಡಿ |
ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ. ದೇವರ ಜ್ಞಾನಕ್ಕೆ ಸಮಾನವಾದ ಜ್ಞಾನವೂ ಬುದ್ಧಿಯೂ ರಹಸ್ಯವನ್ನು ತಿಳಿದುಕೊಳ್ಳುವ ಶಕ್ತಿಯೂ ತನಗಿರುವುದಾಗಿ ಅವನು ನಿನ್ನ ತಂದೆಯ ಕಾಲದಲ್ಲಿಯೇ ತೋರಿಸಿಕೊಟ್ಟಿದ್ದಾನೆ. ನಿನ್ನ ತಂದೆಯಾದ ನೆಬೂಕದ್ನೆಚ್ಚರನು ಈ ಮನುಷ್ಯನನ್ನು ಎಲ್ಲ ವಿದ್ವಾಂಸರ ಅಧ್ಯಕ್ಷನನ್ನಾಗಿ ನೇಮಿಸಿದ್ದನು. ಎಲ್ಲ ಜೋಯಿಸರಿಗೆ, ಮಂತ್ರವಾದಿಗಳಿಗೆ, ಶಾಕುನಿಕರಿಗೆ ಮತ್ತು ಪಂಡಿತರಿಗೆ ಇವನು ಮುಖ್ಯಸ್ಥನಾಗಿದ್ದನು.