ಯೆಹೆಜ್ಕೇಲನು 28:5 - ಪರಿಶುದ್ದ ಬೈಬಲ್5 ನಿನ್ನ ವ್ಯಾಪಾರದ ಜಾಣತನದಿಂದ ನಿನ್ನ ಐಶ್ವರ್ಯವು ಬೆಳೆಯುವಂತೆ ಮಾಡಿದ್ದೀ. ಆ ಐಶ್ವರ್ಯದ ಕಾರಣದಿಂದ ನೀನು ಹೆಮ್ಮೆಯಿಂದ ತುಂಬಿರುತ್ತೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೀನು ನಿನ್ನ ಅಧಿಕ ಜ್ಞಾನದಿಂದ ವ್ಯಾಪಾರದಲ್ಲಿ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಕೊಂಡಿದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿನ್ನ ಅಧಿಕ ಜ್ಞಾನದಿಂದ ಹಾಗು ವ್ಯಾಪಾರದಿಂದ ಸಿರಿಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ಆದುದರಿಂದ ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಹೋಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀನು ನಿನ್ನ ಅಧಿಕಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರಲು ನಿನ್ನ ಮನಸ್ಸು ನಿನ್ನ ಆಸ್ತಿಯ ನಿವಿುತ್ತ ಉಬ್ಬಿಕೊಂಡಿದೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ವ್ಯಾಪಾರದಲ್ಲಿ ನಿನ್ನ ಅಧಿಕ ಚಾತುರ್ಯದಿಂದಲೂ ನಿನ್ನ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯ ಗರ್ವಪಟ್ಟಿದೆ. ಅಧ್ಯಾಯವನ್ನು ನೋಡಿ |