ಯೆಹೆಜ್ಕೇಲನು 28:7 - ಪರಿಶುದ್ದ ಬೈಬಲ್7 ನಿನಗೆ ವಿರುದ್ಧವಾಗಿ ಯುದ್ಧ ಮಾಡಲು ಅಪರಿಚಿತರನ್ನು ಕರೆತರುವೆನು. ಅವರು ಎಲ್ಲಾ ಜನಾಂಗಗಳವರಿಗಿಂತ ಕ್ರೂರರು, ಅವರು ತಮ್ಮ ಖಡ್ಗವನ್ನು ಎಳೆದು ನಿನ್ನ ಜ್ಞಾನದಿಂದ ಕೊಂಡುಕೊಂಡಿದ್ದ ಎಲ್ಲಾ ಬೆಲೆಬಾಳುವ ಅಪೂರ್ವ ವಸ್ತುಗಳನ್ನು ನಾಶಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದುದರಿಂದ ನಾನು ನಿನ್ನ ಮೇಲೆ ಭಯಂಕರವಾದ ಜನಾಂಗದವರಾದ ಮ್ಲೇಚ್ಛರನ್ನು ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ‘ಆದುದರಿಂದ ನಾನು ಅತಿಭಯಂಕರ ಜನಾಂಗದವರಾದ ಮ್ಲೇಚ್ಛರನ್ನು ನಿನ್ನ ಮೇಲೆ ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ಕತ್ತಿ ಹಿರಿದು, ನಿನ್ನ ಹೊಳಪನ್ನು ಹೊಲಸುಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನು ನಿನ್ನ ಮೇಲೆ ಅತಿ ಭಯಂಕರ ಜನಾಂಗದವರಾದ ಮ್ಲೇಚ್ಫರನ್ನು ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ಕತ್ತಿಹಿರಿದು ನಿನ್ನ ಹೊಳಪನ್ನು ಹೊಲಸುಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದ್ದರಿಂದ ಭಯಂಕರ ಜನಾಂಗದವರಾದ ವಿದೇಶಿಯರನ್ನು ನಾನು ನಿನ್ನ ಮೇಲೆ ಬೀಳಮಾಡುವೆನು. ಅವರು ನಿನ್ನ ಸೌಂದರ್ಯ ಮತ್ತು ಜ್ಞಾನದ ವಿರುದ್ಧವಾಗಿ ಖಡ್ಗವನ್ನು ಹಿರಿಯುವರು; ನಿನ್ನ ಹೊಳೆಯುವ ವೈಭವವನ್ನು ಕೆಡಿಸುವರು. ಅಧ್ಯಾಯವನ್ನು ನೋಡಿ |
“ನನಗಾದ ರಾತ್ರಿಯ ದರ್ಶನದಲ್ಲಿ ನಾಲ್ಕನೆ ಮೃಗವನ್ನು ಕಂಡೆ. ಅದು ಅತ್ಯಂತ ಬಲಿಷ್ಠವಾಗಿತ್ತು ಮತ್ತು ಭಯಂಕರವಾಗಿತ್ತು. ಅದು ಅತಿ ಶಕ್ತಿಶಾಲಿಯಾಗಿತ್ತು. ಅದಕ್ಕೆ ದೊಡ್ಡದೊಡ್ಡ ಕಬ್ಬಿಣದ ಹಲ್ಲುಗಳಿದ್ದವು. ಈ ಪ್ರಾಣಿಯು ತಾನು ಬೇಟೆಯಾಡಿದ ಪಶುವನ್ನು ತಂಡುತುಂಡು ಮಾಡುತ್ತಾ ತಿನ್ನುತ್ತಿತ್ತು; ಮಿಕ್ಕಿದ್ದನ್ನು ಅದು ತುಳಿಯುತ್ತಿತ್ತು. ಈ ನಾಲ್ಕನೆಯ ಪ್ರಾಣಿಯು ನಾನು ಅದಕ್ಕೂ ಮುಂಚೆ ನೋಡಿದ ಮೃಗಗಳಿಗಿಂತ ಭಿನ್ನವಾಗಿತ್ತು. ಈ ಮೃಗಕ್ಕೆ ಹತ್ತು ಕೊಂಬುಗಳಿದ್ದವು.