ಯೆಹೆಜ್ಕೇಲನು 28:9 - ಪರಿಶುದ್ದ ಬೈಬಲ್9 ಆ ಮನುಷ್ಯನು ನಿನ್ನನ್ನು ಕೊಂದುಹಾಕುವನು. ಆಗಲೂ ನೀನು “ನಾನು ದೇವರು” ಎಂದು ಹೇಳುವಿಯಾ? ಇಲ್ಲ. ಅವನು ನಿನ್ನನ್ನು ತನ್ನ ಅಧಿಕಾರದಲ್ಲಿರಿಸುವನು. ಆಗ ನೀನು “ಕೇವಲ ಮನುಷ್ಯನೇ” ಎಂದು ತಿಳಿಯುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀನು ನಿನ್ನನ್ನು ಸಂಹರಿಸುವವರ ಎದುರಿಗೆ ನಾನು ದೇವರು ಎಂದು ಹೇಳುವೆಯೋ? ನಿನ್ನನ್ನು ಸಂಹರಿಸುವವನ ಕೈಯಲ್ಲಿ ನೀನು ದೇವರಲ್ಲ, ನರಪ್ರಾಣಿಯೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಿನ್ನನ್ನು ಸಂಹರಿಸುವವನೆದುರಿಗೆ ನಿಂತು, ‘ನಾನು ದೇವರು’ ಎಂದು ಹೇಳಬಲ್ಲೆಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀನು ನಿನ್ನನ್ನು ಸಂಹರಿಸುವವನೆದುರಿಗೆ ನಾನು ದೇವರು ಎಂದು ಹೇಳುವಿಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು, “ನಾನು ದೇವರು,” ಎಂದು ಹೇಳುವೆಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರಪ್ರಾಣಿಯೇ; ಅಧ್ಯಾಯವನ್ನು ನೋಡಿ |
ಈ ನಿನೆವೆಯು ಸಂತೋಷಭರಿತ ನಗರಿಯಾಗಿದೆ. ಅದರ ನಿವಾಸಿಗಳು ತಾವು ಸುರಕ್ಷಿತರಾಗಿದ್ದೇವೆಂದು ತಿಳಿದಿದ್ದಾರೆ. ನಿನೆವೆಯು ಲೋಕದಲ್ಲಿ ಅತ್ಯಂತ ಮಹತ್ವಪೂರ್ಣ ಸ್ಥಳವೆಂದು ತಿಳಿದಿದ್ದಾರೆ. ಅವರು ಬಹಳ ಗರ್ವಪಡುತ್ತಾರೆ. ಆದರೆ ಆ ನಗರವು ನಾಶವಾಗುವದು. ಕಾಡುಮೃಗಗಳ ಹಕ್ಕೆಯಾಗುವದು. ದಾಟಿಹೋಗುವ ಜನರು, ತಮ್ಮ ಆಶ್ಚರ್ಯವನ್ನು ಸಿಳ್ಳುಹಾಕಿ ತಲೆಯಾಡಿಸಿ “ಎಂಥಾ ದುರ್ಗತಿ” ಎಂದು ಉದ್ಗರಿಸುವರು.