ಯೆಹೆಜ್ಕೇಲನು 29:1 - ಪರಿಶುದ್ದ ಬೈಬಲ್1 ಸೆರೆ ಒಯ್ಯಲ್ಪಟ್ಟ ಹತ್ತನೇ ವರ್ಷದ ಹತ್ತನೇ ತಿಂಗಳಿನ, ಹನ್ನೆರಡನೇ ದಿವಸದಲ್ಲಿ ನನ್ನ ಒಡೆಯನಾದ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಹತ್ತನೆಯ ವರ್ಷದ, ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 [ಯೆಹೋಯಾಖೀನನು ಸೆರೆಯಾದ] ಹತ್ತನೆಯ ವರುಷದ ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹನ್ನೆರಡನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು, ಅಧ್ಯಾಯವನ್ನು ನೋಡಿ |
ಈ ಸಂದೇಶವು ಈಜಿಪ್ಟ್ ಜನಾಂಗದ ಬಗ್ಗೆ ಇದೆ. ಈ ಸಂದೇಶವು ಫರೋಹನೆಕೋವಿನ ಸೈನ್ಯದ ಬಗ್ಗೆ ಇದೆ. ಫರೋಹನೆಕೋವು ಈಜಿಪ್ಟಿನ ರಾಜನಾಗಿದ್ದನು. ಅವನ ಸೈನ್ಯವನ್ನು ಕರ್ಕೆಮೀಷ್ ಪಟ್ಟಣದಲ್ಲಿ ಸೋಲಿಸಲಾಯಿತು. ಕರ್ಕೆಮೀಷ್ ಪಟ್ಟಣವು ಯೂಫ್ರೇಟೀಸ್ ನದಿಯ ದಂಡೆಯ ಮೇಲಿದೆ. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಹೂದದಲ್ಲಿ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಫರೋಹನೆಕೋವಿನ ಸೈನ್ಯವನ್ನು ಕರ್ಕೆಮೀಷಿನಲ್ಲಿ ಸೋಲಿಸಿದನು. ಯೆಹೋಯಾಕೀಮನು ರಾಜನಾದ ಯೋಷೀಯನ ಮಗನಾಗಿದ್ದನು. ಈಜಿಪ್ಟಿಗೆ ಯೆಹೋವನ ಸಂದೇಶ ಹೀಗಿತ್ತು: