ಯೆಹೆಜ್ಕೇಲನು 29:15 - ಪರಿಶುದ್ದ ಬೈಬಲ್15 ಅದು ಯಾವ ಮಹತ್ವವೂ ಇಲ್ಲದ ರಾಜ್ಯವಾಗಿರುವುದು. ಬೇರೆ ರಾಜ್ಯಗಳಿಗಿಂತ ಅದು ಎಂದಿಗೂ ಉನ್ನತಸ್ಥಾನದಲ್ಲಿರದು. ಅದು ಅಷ್ಟು ಚಿಕ್ಕ ರಾಜ್ಯವಾಗುವುದರಿಂದ ಬೇರೆ ದೇಶಗಳ ಮೇಲೆ ಅಧಿಕಾರ ನಡೆಸದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠವೆನಿಸಿಕೊಳ್ಳುವುದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಅದು ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣ ಸ್ಥಿತಿಗೆ ತರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆ ರಾಜ್ಯ ಸಮಸ್ತ ರಾಜ್ಯಗಳಲ್ಲಿ ಕನಿಷ್ಟವೆನಿಸಿಕೊಳ್ಳುವುದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಆ ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣಗತಿಗೆ ತರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ರಾಜ್ಯವು ಸಮಸ್ತರಾಜ್ಯಗಳಲ್ಲಿ ಕನಿಷ್ಠವೆನಿಸಿಕೊಳ್ಳುವದು; ವಿುಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಅದು ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣ ಗತಿಗೆ ತರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿಸಿಕೊಳ್ಳುವುದು. ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆ ಎತ್ತದು. ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗದಂತೆ ಅದನ್ನು ಕ್ಷೀಣಗತಿಗೆ ತರುವೆನು. ಅಧ್ಯಾಯವನ್ನು ನೋಡಿ |
“ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: “‘ಜನಾಂಗಗಳ ಮಧ್ಯೆ ಹೆಮ್ಮೆಯಿಂದ ನಡೆದಾಡುತ್ತಿರುವ ಮೃಗರಾಜನಂತೆ ನೀನಿರುವೆ ಎಂದು ನೀನು ಭಾವಿಸಿದ್ದೆ. ಆದರೆ ನಿಜವಾಗಿಯೂ ನೀನು ಸರೋವರದಲ್ಲಿರುವ ಪೇರ್ಮೊಸಳೆಯಾಗಿರುವೆ. ನೀರಿನ ಹೊಳೆಗಳಲ್ಲಿ ನೀನು ನಿನ್ನ ದಾರಿಯನ್ನು ಮಾಡುವೆ. ನಿನ್ನ ಕಾಲುಗಳಿಂದ ಆ ನೀರನ್ನು ನೀನು ಕೆಸರಾಗಿ ಮಾಡುವೆ. ನೀನು ಈಜಿಪ್ಟಿನ ಹೊಳೆಗಳನ್ನು ಕದಡಿಸುವೆ.’”