ಯೆಹೆಜ್ಕೇಲನು 29:18 - ಪರಿಶುದ್ದ ಬೈಬಲ್18 “ನರಪುತ್ರನೇ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ತನ್ನ ಸೈನ್ಯವು ತೂರ್ ದೇಶದವರೊಂದಿಗೆ ಉಗ್ರವಾಗಿ ಹೋರಾಡುವಂತೆ ನಡೆಸಿದನು. ಪ್ರತಿ ಸೈನಿಕನ ತಲೆಯನ್ನು ಬೋಳಿಸಿದರು. ಪ್ರತಿಯೊಬ್ಬನ ಭುಜಗಳು ಭಾರ ಹೊತ್ತುಹೊತ್ತು ಸವೆದುಹೋಗಿದ್ದವು. ನೆಬೂಕದ್ನೆಚ್ಚರ್ ಮತ್ತು ಅವನ ಸೈನ್ಯವು ತೂರ್ ದೇಶವನ್ನು ಸೋಲಿಸಲು ಬಹಳವಾಗಿ ಪ್ರಯಾಸಪಡಬೇಕಾಗಿ ಬಂತು. ಆದರೆ ಅವರ ಪ್ರಯಾಸದ ಪ್ರತಿಫಲವಾಗಿ ಏನೂ ದೊರಕಲಿಲ್ಲ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ನರಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ, ತನ್ನ ಸೈನಿಕರಿಂದ ಅತಿ ಕ್ರೂರವಾಗಿ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲು ಸುಲಿದು ಹೋಗಿದೆ. ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ, ಅವನ ಸೈನಿಕರಿಗಾಗಲಿ ತೂರಿನಿಂದ ಪ್ರತಿಫಲವೇನೂ ಸಿಕ್ಕಲಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ನರಪುತ್ರನೇ, ಬಾಬಿಲೋನಿನ ನೆಬೂಕದ್ನೆಚ್ಚರನು ಟೈರಿಗೆ ಮುತ್ತಿಗೆ ಹಾಕಿ, ತನ್ನ ಸೈನಿಕರಿಂದ ಬಹು ಶ್ರಮದ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ. ಪ್ರತಿಯೊಬ್ಬನ ಹೆಗಲು ಕಾಯಿಕಟ್ಟಿದೆ; ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ ಅವನ ಸೈನಿಕರಿಗಾಗಲಿ ಟೈರಿನಿಂದ ಫಲವೇನೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನರಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆಹಾಕಿ ತನ್ನ ಸೈನಿಕರಿಂದ ಬಹುಶ್ರಮದ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲು ಕಾಯಿಕಟ್ಟಿದೆ; ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ ಅವನ ಸೈನಿಕರಿಗಾಗಲಿ ತೂರಿನಿಂದ ಸಂಬಳವೇನೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಮನುಷ್ಯಪುತ್ರನೇ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಟೈರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ ಅವನ ಸೈನಿಕರಿಗಾಗಲಿ ಟೈರನಿಂದ ಪ್ರತಿಫಲವೇನೂ ದೊರೆಯಲಿಲ್ಲ. ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.