ಯೆಹೆಜ್ಕೇಲನು 29:19 - ಪರಿಶುದ್ದ ಬೈಬಲ್19 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ರಾಜನಾದ ನೆಬೂಕದ್ನೆಚ್ಚರನಿಗೆ ನಾನು ಈಜಿಪ್ಟ್ ದೇಶವನ್ನು ಕೊಡುವೆನು. ನೆಬೂಕದ್ನೆಚ್ಚರನು ಈಜಿಪ್ಟಿನವರನ್ನು ಸೆರೆಹಿಡಿದು ಕೊಂಡೊಯ್ವನು. ಈಜಿಪ್ಟಿನ ಬೆಲೆಬಾಳುವ ವಸ್ತುಗಳನ್ನೆಲ್ಲಾ ದೋಚುವನು. ಇದು ಅವನ ಸೈನಿಕರ ಸಂಬಳವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತ ದೇಶವನ್ನು ಕೊಡುತ್ತೇನೆ; ಅವನು ಅದರ ಜನಸಮೂಹವನ್ನೂ, ಅದರ ಕೊಳ್ಳೆಯನ್ನೂ, ಅದರ ಸುಲಿಗೆಯನ್ನೂ ಸೂರೆಮಾಡುವನು; ಇದೇ ಅವನ ಸೈನ್ಯಕ್ಕೆ ಸಿಕ್ಕುವ ಪ್ರತಿಫಲವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ಬಾಬಿಲೋನಿನ ಅರಸ ನೆಬೂಕದ್ನೆಚ್ಚರನಿಗೆ ಈಜಿಪ್ಟ್ ದೇಶವನ್ನು ಕೊಡುವೆನು; ಅವನು ಅದರ ಜನರನ್ನೂ ಆಸ್ತಿಪಾಸ್ತಿಯನ್ನೂ ಒಯ್ದು, ಆ ದೇಶವನ್ನು ಸೂರೆಮಾಡಿ ಕೊಳ್ಳೆಹೊಡೆಯುವನು; ಅದೇ ಅವನ ಸೈನ್ಯಕ್ಕೆ ಸಿಕ್ಕುವ ಸಂಬಳ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುವೆನು; ಅವನು ಅದರ ಜನ ಯಾವತ್ತನ್ನು ಒಯ್ದು ಆ ದೇಶವನ್ನು ಸೂರೆಮಾಡಿ ಕೊಳ್ಳೆಹೊಡೆಯುವನು; ಅದೇ ಅವನ ಸೈನ್ಯಕ್ಕೆ ಸಂಬಳ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಈಜಿಪ್ಟ್ ದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಅದರ ಕೊಳ್ಳೆಯನ್ನೂ ಅದರ ಸುಲಿಗೆಯನ್ನೂ ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವುದು. ಅಧ್ಯಾಯವನ್ನು ನೋಡಿ |
ನಾನು ಅವರನ್ನು ಸೋಲಿಸಿ ಅವರ ಬಳಿಯಲ್ಲಿರುವ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದೋಚಿಕೊಳ್ಳುವೆನು. ಹಿಂದೆ ನಾಶವಾಗಿದ್ದು ಈಗ ಜನಭರಿತವಾಗಿರುವ ಆ ನಗರಗಳ ಮೇಲೆ ಯುದ್ಧ ಮಾಡುವೆನು. ಈಗ ಆ ಜನರಿಗೆ ದನಕರುಗಳೂ ಸ್ವತ್ತುಗಳೂ ಇವೆ. ಅವರು ಲೋಕದ ಕೇಂದ್ರ ಸ್ಥಳಗಳಲ್ಲಿ ವಾಸಿಸುತ್ತಿದ್ದಾರೆ. ಬಲಾಢ್ಯ ದೇಶಗಳು ಬೇರೆ ಬಲಾಢ್ಯ ದೇಶಗಳೊಂದಿಗೆ ಸಂಪರ್ಕಿಸಲು ಇವರ ಮೂಲಕ ಹೋಗಲೇಬೇಕು’ ಎಂದು ನೀನು ಹೇಳಿಕೊಳ್ಳುತ್ತಿರುವೆ.