ಯೆಹೆಜ್ಕೇಲನು 29:2 - ಪರಿಶುದ್ದ ಬೈಬಲ್2 “ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನ ಕಡೆಗೆ ಮುಖಮಾಡು. ಅವನಿಗೂ ಈಜಿಪ್ಟಿಗೂ ವಿರುದ್ಧವಾಗಿ ನನ್ನ ಪರವಾಗಿ ಮಾತನಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ಕಡೆಗೆ ಮುಖಮಾಡಿ ಅವನ ವಿಷಯದಲ್ಲಿಯೂ, ಐಗುಪ್ತ್ಯರೆಲ್ಲರ ವಿಷಯದಲ್ಲಿಯೂ ಹೀಗೆ ಪ್ರವಾದಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನ ಕಡೆಗೆ ಮುಖಮಾಡಿ ಅವನನ್ನು ಹಾಗು ಈಜಿಪ್ಟಿನವರೆಲ್ಲರನ್ನು ಕುರಿತು ಹೀಗೆ ನುಡಿ - ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ಕಡೆಗೆ ಮುಖಮಾಡಿ ಅವನ ವಿಷಯದಲ್ಲಿಯೂ ಐಗುಪ್ತ್ಯರೆಲ್ಲರ ವಿಷಯದಲ್ಲಿಯೂ ಹೀಗೆ ನುಡಿ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನರಪುತ್ರನೇ, ನೀನು ಈಜಿಪ್ಟಿನ ಅರಸನಾದ ಫರೋಹನ ಕಡೆಗೆ ಮುಖಮಾಡಿ ಅವನಿಗೂ ಸಮಸ್ತ ಈಜಿಪ್ಟಿಗೂ ವಿರೋಧವಾಗಿ ಪ್ರವಾದಿಸು. ಅಧ್ಯಾಯವನ್ನು ನೋಡಿ |
ನಾನು ಹೇಳಿದಂತೆ ಮಾಡುವೆನೆಂಬುದಕ್ಕೆ ಪ್ರಮಾಣ ಇದು. ಯೆಹೋವನು ಹೀಗೆ ಹೇಳಿದನು: ‘ಫರೋಹ ಹೊಫ್ರನೆಂಬುವನು ಈಜಿಪ್ಟಿನ ರಾಜನಾಗಿದ್ದಾನೆ. ಅವನ ಶತ್ರುಗಳು ಅವನನ್ನು ಕೊಲ್ಲಬಯಸುತ್ತಾರೆ. ನಾನು ಫರೋಹ ಹೊಫ್ರನನ್ನು ಅವನ ಶತ್ರುಗಳಿಗೆ ಒಪ್ಪಿಸುತ್ತೇನೆ. ಚಿದ್ಕೀಯನು ಯೆಹೂದದ ರಾಜನಾಗಿದ್ದನು. ನೆಬೂಕದ್ನೆಚ್ಚರನು ಚಿದ್ಕೀಯನ ವೈರಿಯಾಗಿದ್ದನು. ನಾನು ಚಿದ್ಕೀಯನನ್ನು ಅವನ ಶತ್ರುವಿನ ಕೈಗೆ ಒಪ್ಪಿಸಿದೆ. ಅದೇ ರೀತಿ ನಾನು ಫರೋಹ ಹೊಫ್ರನನ್ನು ಅವನ ವೈರಿಯ ಕೈಗೆ ಒಪ್ಪಿಸುತ್ತೇನೆ.’”