20 ನೆಬೂಕದ್ನೆಚ್ಚರನು ಪ್ರಯಾಸದ ಕೆಲಸ ಮಾಡಿದ್ದರಿಂದ ನಾನು ಅವನಿಗೆ ಪ್ರತಿಫಲವಾಗಿ ಈಜಿಪ್ಟ್ ದೇಶವನ್ನು ಕೊಟ್ಟೆನು. ಯಾಕೆಂದರೆ ಅವರು ನನಗೋಸ್ಕರ ಪ್ರಯಾಸಪಟ್ಟರು.” ಇದು ಒಡೆಯನಾದ ಯೆಹೋವನ ನುಡಿ.
20 ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಈಜಿಪ್ಟ್ ದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಸೇವೆಮಾಡಿದ್ದಾರೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
ಯೆಹೋವನು ಯೇಹುವಿಗೆ, “ನೀನು ಒಳ್ಳೆಯದನ್ನು ಮಾಡಿದೆ. ನಾನು ಒಳ್ಳೆಯದೆಂದು ಹೇಳಿದ್ದನ್ನೇ ನೀನು ಮಾಡಿದೆ. ನನ್ನ ಅಪೇಕ್ಷೆಯಂತೆ ನೀನು ಅಹಾಬನ ಕುಟುಂಬವನ್ನು ನಾಶಗೊಳಿಸಿದೆ. ಆದ್ದರಿಂದ ನಿನ್ನ ಸಂತತಿಯವರು ಇಸ್ರೇಲನ್ನು ನಾಲ್ಕು ತಲೆಮಾರುಗಳವರೆಗೆ ಆಳುತ್ತಾರೆ” ಎಂದು ಹೇಳಿದನು.
ನೆಬೂಕದ್ನೆಚ್ಚರನು ಇಲ್ಲಿಗೆ ಬಂದು ಈಜಿಪ್ಟಿನ ಮೇಲೆ ಧಾಳಿ ಮಾಡುವನು. ಕೊಲ್ಲಬೇಕೆಂದು ಗೊತ್ತುಮಾಡಿದವರನ್ನು ಕೊಂದುಹಾಕುವನು; ಸೆರೆಹಿಡಿಯಬೇಕೆಂದು ಗೊತ್ತು ಮಾಡಿಕೊಂಡವರನ್ನು ಸೆರೆಹಿಡಿಯುವನು; ಖಡ್ಗದಿಂದ ಕೊಲೆಯಾಗಬೇಕೆಂದು ಗೊತ್ತುಪಡಿಸಿದವರ ಸಲುವಾಗಿ ಅವನು ಖಡ್ಗವನ್ನು ತರುವನು.