ಯೆಹೆಜ್ಕೇಲನು 29:5 - ಪರಿಶುದ್ದ ಬೈಬಲ್5 ನಾನು ನಿನ್ನನ್ನೂ ನಿನ್ನ ಮೀನುಗಳನ್ನೂ ನೀರಿನೊಳಗಿಂದ ಹೊರಕ್ಕೆತ್ತಿ ಒಣನೆಲದ ಮೇಲೆ ಹಾಕುವೆನು. ನೀನು ನೆಲದ ಮೇಲೆ ಬೀಳುವೆ. ಯಾರೂ ನಿನ್ನನ್ನು ಮೇಲಕ್ಕೆ ಎತ್ತುವುದೂ ಇಲ್ಲ ಹೂಣಿಡುವುದೂ ಇಲ್ಲ. ನಾನು ನಿನ್ನನ್ನು ಕಾಡುಪ್ರಾಣಿಗಳಿಗೂ ಪಕ್ಷಿಗಳಿಗೂ ಕೊಡುವೆನು. ಅವರಿಗೆ ನೀನು ಆಹಾರವಾಗುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿನ್ನನ್ನೂ, ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಅರಣ್ಯದ ಪಾಲು ಮಾಡುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಹೂಣಿಡುವುದೂ ಇಲ್ಲ, ಸೇರಿಸುವುದೂ ಇಲ್ಲ; ನಾನು ನಿನ್ನನ್ನು ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿನ್ನನ್ನೂ ನಿನ್ನ ಎಲ್ಲ ಮೀನುಗಳನ್ನೂ ಕಾಡುಪಾಲು ಮಾಡುವೆನು; ನೀನು ಬಯಲಿನಲ್ಲಿ ಬಿದ್ದಿರುವೆ; ನಿನ್ನನ್ನು ಯಾರೂ ಹೊರರು, ಹೂಣಿಡರು; ನಿನ್ನನ್ನು ಭೂಜಂತುಗಳಿಗೂ ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಿನ್ನನ್ನೂ ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಕಾಡಿನ ಪಾಲುಮಾಡುವೆನು; ನೀನು ಬೈಲಿನಲ್ಲಿ ಬಿದ್ದಿರುವಿ; ನಿನ್ನನ್ನು ಯಾರೂ ಹೊರರು, ಹೂಣಿಡರು; ನಾನು ನಿನ್ನನ್ನು ಭೂಜಂತುಗಳಿಗೂ ಆಕಾಶಪಕ್ಷಿಗಳಿಗೂ ಆಹಾರ ಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿನ್ನನ್ನೂ ನಿನ್ನ ನದಿಗಳ ಮೀನುಗಳನ್ನೂ ಅರಣ್ಯದಲ್ಲಿ ಹಾಕುವೆನು. ನೀನು ಬಯಲುಗಳ ಮೇಲೆ ಬಿದ್ದಿರುವೆ; ನಿನ್ನನ್ನು ಯಾರೂ ಹೊರುವುದೂ ಇಲ್ಲ, ಸೇರಿಸುವುದೂ ಇಲ್ಲ. ನಿನ್ನನ್ನೂ ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಕಾಡಿನ ಪಾಲುಮಾಡುವೆನು. ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರವನ್ನಾಗಿ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |
“ಈಜಿಪ್ಟೇ, ಏದೆನಿನಲ್ಲಿ ಎಷ್ಟೋ ದೊಡ್ಡ, ಬಲಶಾಲಿಯಾಗಿರುವ ಮರಗಳಿವೆ. ಅದರ ಯಾವ ಮರಕ್ಕೆ ನಿನ್ನನ್ನು ಹೋಲಿಸಲಿ? ಅವೆಲ್ಲವೂ ಭೂಮಿಯ ಕೆಳಗೆ ಪಾತಾಳವನ್ನು ಸೇರಿದವು. ನೀನು ಕೂಡಾ ಆ ಪರದೇಶಸ್ಥರೊಂದಿಗೆ ಆ ಸ್ಥಳಕ್ಕೆ ಸೇರುವೆ. ರಣರಂಗದಲ್ಲಿ ಸತ್ತವರೊಂದಿಗೆ ನೀನು ಬಿದ್ದುಕೊಳ್ಳುವೆ. “ಹೌದು, ಈ ರೀತಿಯಾಗಿ ಫರೋಹನಿಗೂ ಅವನೊಂದಿಗಿರುವ ಜನರ ಗುಂಪಿಗೂ ಆಗುವದು.” ಇದು ಒಡೆಯನಾದ ಯೆಹೋವನ ನುಡಿ.
ನಾನು ನೋಡಿದಾಗ, ನನ್ನ ಮುಂದೆ ಒಂದು ಬೂದುಬಣ್ಣದ ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲೆ ಕುಳಿತಿದ್ದ ಸವಾರನೇ ಮೃತ್ಯು. ಅವನ ಹಿಂದೆ ಪಾತಾಳ ಎಂಬುವನು ಬಂದನು. ಅವರಿಗೆ ಭೂಮಿಯ ಕಾಲುಭಾಗದ ಮೇಲೆ ಅಧಿಕಾರವನ್ನು ನೀಡಲಾಯಿತು. ಕತ್ತಿಯಿಂದಲೂ ಬರಗಾಲದಿಂದಲೂ ರೋಗಗಳಿಂದಲೂ ಮತ್ತು ಲೋಕದ ಮೇಲಿರುವ ಕಾಡುಮೃಗಗಳಿಂದಲೂ ಜನರನ್ನು ಕೊಲ್ಲುವ ಅಧಿಕಾರವನ್ನು ಅವರಿಗೆ ನೀಡಲಾಯಿತು.