Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:11 - ಪರಿಶುದ್ದ ಬೈಬಲ್‌

11 ಬಳಿಕ ಸೆರೆವಾಸದಲ್ಲಿರುವ ನಿನ್ನ ಸ್ವಜನರ ಬಳಿಗೆ ಹೋಗು. ಅವರು ಕೇಳಲಿ, ಕೇಳದಿರಲಿ, ನೀನು ಅವರಿಗೆ, ‘ದೇವರಾದ ಯೆಹೋವನು ಹೀಗೆ ಹೇಳುತ್ತಾನೆ’” ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸೆರೆಯಾಗಿರುವ ನಿನ್ನ ಸ್ವಂತ ಜನರ ಬಳಿಗೆ ಹೋಗಿ ಅವರು ಕೇಳಿದರೂ, ಕೇಳದೆ ಹೋದರೂ ಅವರನ್ನು ಉದ್ದೇಶಿಸಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಅವರಿಗೆ ಸಾರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸೆರೆಯಾಗಿರುವ ನಿನ್ನ ಸ್ವಜನರ ಬಳಿಗೆಹೋಗಿ ಅವರು ಕೇಳಲಿ ಅಥವಾ ಕೇಳದೆಹೋಗಲಿ ಅವರನ್ನು ಪ್ರಭೋಧಿಸು; ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ,’ ಎಂದು ಅವರಿಗೆ ಸಾರಿಹೇಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೆರೆಯಾಗಿರುವ ನಿನ್ನ ಸ್ವಜನರ ಬಳಿಗೆ ಹೋಗಿ ಅವರು ಕೇಳಿದರೂ ಕೇಳದೆಹೋದರೂ ಅವರನ್ನು ಪ್ರಬೋಧಿಸಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ಅವರಿಗೆ ಸಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸೆರೆಯಾಗಿರುವ ನಿನ್ನ ಜನರ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು. ಅವರು ಕೇಳಿದರೂ ಕೇಳದಿದ್ದರೂ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ,’ ಎಂದು ಅವರಿಗೆ ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:11
20 ತಿಳಿವುಗಳ ಹೋಲಿಕೆ  

ಅವರು ಕೇಳಲಿ, ಕೇಳದಿರಲಿ, ನಾನು ಹೇಳುವದನ್ನು ಅವರಿಗೆ ತಿಳಿಸು; ಯಾಕೆಂದರೆ ಅವರು ದಂಗೆಕೋರರು.


ಆದರೆ ನಾನು ನಿನ್ನೊಂದಿಗೆ ಮಾತನಾಡುವಾಗ, ನಿನ್ನನ್ನು ಮಾತನಾಡಲಾಗುವಂತೆ ಮಾಡುವೆನು. ಆಗ ನೀನು ಅವರಿಗೆ, ‘ನಮ್ಮ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ’ ಎಂದು ಹೇಳಬೇಕು. ಕೆಲವರು ಕಿವಿಗೊಡುವರು; ಕೆಲವರು ಕಿವಿಗೊಡರು; ಯಾಕೆಂದರೆ ಅವರು ಯಾವಾಗಲೂ ನನಗೆ ವಿರುದ್ಧವಾಗಿಯೇ ಇರುವರು.


“‘ನರಪುತ್ರನೇ, ನಿನ್ನ ವಿಷಯದಲ್ಲಿ ನಿನ್ನ ಜನರು ಗೋಡೆಗೆ ಒರಗಿಕೊಂಡೂ ಬಾಗಿಲಿನ ನಡುವೆ ನಿಂತುಕೊಂಡೂ ಮಾತನಾಡಿಕೊಳ್ಳುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು, “ಬನ್ನಿ, ಯೆಹೋವನು ಹೇಳುವುದನ್ನು ನಾವು ಹೋಗಿ ಕೇಳೋಣ”


“ಆದರೆ ನಿನ್ನ ಜನರು, ‘ಅದು ನ್ಯಾಯವಲ್ಲ. ನನ್ನ ಒಡೆಯನಾದ ಯೆಹೋವನು ಹಾಗೆ ಮಾಡಲಾರನು’ ಎಂದು ಹೇಳುವರು. “ಅಂಥ ಜನರೇ ನ್ಯಾಯವಂತರಲ್ಲ. ಅವರೇ ಬದಲಾಗಬೇಕು.


“ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು: ‘ಒಬ್ಬನು ಒಳ್ಳೆಯವನಾಗಿದ್ದುಕೊಂಡು ನಂತರ ದುಷ್ಟತನವನ್ನು ನಡಿಸಿದರೆ ಅವನ ಸತ್ಕಾರ್ಯಗಳು ಅವನನ್ನು ರಕ್ಷಿಸಲಾರವು. ಒಬ್ಬನು ದುಷ್ಕೃತ್ಯಗಳನ್ನು ಮಾಡಿ ತನ್ನ ದುಷ್ಟತ್ವದಿಂದ ತಿರುಗಿದರೆ ಅವನು ನಾಶವಾಗುವದಿಲ್ಲ. ಆದ್ದರಿಂದ ಹಿಂದೆ ಮಾಡಿದ್ದ ಪುಣ್ಯಕಾರ್ಯಗಳು ಒಬ್ಬ ಪಾಪಿಯನ್ನು ರಕ್ಷಿಸಲಾರದೆಂಬುದನ್ನು ಜ್ಞಾಪಕದಲ್ಲಿಟ್ಟುಕೊ.’


“ನರಪುತ್ರನೇ, ನಿನ್ನ ಜನರೊಂದಿಗೆ ಮಾತನಾಡು. ಅವರಿಗೆ ಹೀಗೆ ಹೇಳು, ‘ನಾನು ಈ ದೇಶದೊಂದಿಗೆ ಯುದ್ಧ ಮಾಡಲು ಶತ್ರು ಸೈನಿಕರನ್ನು ಬರಮಾಡುತ್ತೇನೆ. ಈ ಸಮಯದಲ್ಲಿ ಜನರು ಒಬ್ಬ ಕಾವಲುಗಾರನನ್ನು ಆರಿಸುವರು.


ಜನರು ನಿನ್ನ ಮಾತನ್ನು ಕೇಳಬಹುದು ಅಥವಾ ಕೇಳದಿರಬಹುದು: ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ. ನನ್ನ ಮುಂದೆ ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರು ಯಾವಾಗಲೂ ನನ್ನ ವಿರುದ್ಧ ದಂಗೆ ಏಳುವರು. ಆದ್ದರಿಂದ ನಾನು ತಿಳಿಸಿದ್ದನ್ನೆ ನೀನು ಹೇಳಬೇಕು. ಆಗ ಅವರು ತಮ್ಮ ಮಧ್ಯೆ ಒಬ್ಬ ಪ್ರವಾದಿ ಇದ್ದಾನೆಂದು ಗ್ರಹಿಸಿಕೊಳ್ಳುವರು.


“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.


ಆಗ ಅವರು ರಾಜನಿಗೆ, “ದಾನಿಯೇಲನೆಂಬ ಆ ಮನುಷ್ಯ ನಿನ್ನ ಕಡೆಗೆ ಎಳ್ಳಷ್ಟೂ ಗಮನ ಕೊಡುತ್ತಿಲ್ಲ. ಅವನು ಯೆಹೂದದ ಸೆರೆಯಾಳುಗಳಲ್ಲೊಬ್ಬನು. ನೀನು ರುಜುಹಾಕಿದ ಶಾಸನಕ್ಕೆ ಅವನು ಸ್ವಲ್ಪವಾದರೂ ಬೆಲೆಕೊಡುತ್ತಿಲ್ಲ. ದಾನಿಯೇಲನು ಈಗಲೂ ದಿನಕ್ಕೆ ಮೂರು ಸಲ ತನ್ನ ದೇವರಲ್ಲಿ ಪ್ರಾರ್ಥಿಸುತ್ತಾನೆ” ಎಂದು ಹೇಳಿದರು.


“ನಿನ್ನ ಜನರು ಅದು ಏನು ಎಂದು ವಿವರಿಸಲು ಹೇಳುವರು.


ಕೆಬಾರ್ ಕಾಲುವೆ ಪಕ್ಕದಲ್ಲಿದ್ದ ತೇಲ್ ಆಬೀಬ್‌ನಲ್ಲಿ ಸೆರೆಯಾಳುಗಳಾಗಿದ್ದ ಇಸ್ರೇಲ್ ಜನರ ಬಳಿಗೆ ನಾನು ಒಯ್ಯಲ್ಪಟ್ಟೆನು. ಅಲ್ಲಿದ್ದ ಜನರ ಮಧ್ಯೆ ನಾನು ಏಳು ದಿವಸ ಸ್ತಬ್ಧನಾಗಿದ್ದೆನು.


ಆಗ ಆತನು ನನಗೆ, ‘ಎದ್ದು ಬೇಗನೆ ಕೆಳಗಿಳಿ. ಯಾಕೆಂದರೆ ನೀನು ಈಜಿಪ್ಟಿನಿಂದ ಬಿಡಿಸಿತಂದ ಜನರು ತಮ್ಮನ್ನು ತಾವೇ ಕೆಡಿಸಿಕೊಂಡಿದ್ದಾರೆ. ಇಷ್ಟು ಬೇಗನೆ ಅವರು ನನ್ನ ಆಜ್ಞೆಗಳನ್ನು ಮೀರಿದ್ದಾರೆ. ಅವರು ಬಂಗಾರವನ್ನು ಕರಗಿಸಿ ತಮಗಾಗಿ ವಿಗ್ರಹವನ್ನು ಮಾಡಿಕೊಂಡಿದ್ದಾರೆ’ ಎಂದು ಹೇಳಿದನು.


ಅದೇ ಸಮಯದಲ್ಲಿ ಯೆಹೋವನು ಮೋಶೆಗೆ, “ಬೆಟ್ಟದಿಂದ ಇಳಿದುಹೋಗು. ನೀನು ಈಜಿಪ್ಟಿನಿಂದ ಕರೆದುಕೊಂಡು ಬಂದ ನಿನ್ನ ಜನರು ಭಯಂಕರವಾದ ಪಾಪ ಮಾಡಿದ್ದಾರೆ.


ದೇವರು ನನಗೆ ಮತ್ತೇ ಹೇಳಿದ್ದೇನೆಂದರೆ, “ನರಪುತ್ರನೇ, ನಾನು ಹೇಳುವ ಪ್ರತಿಯೊಂದು ಮಾತನ್ನು ನೀನು ಕಿವಿಗೊಟ್ಟು ಕೇಳಬೇಕು. ಆ ಮಾತುಗಳನ್ನು ನೀನು ಜ್ಞಾಪಕದಲ್ಲಿಟ್ಟುಕೊಳ್ಳಬೇಕು.


ಆಗ ದೇವರಾತ್ಮವು ನನ್ನನ್ನು ಮೇಲಕ್ಕೆ ಎತ್ತಿತು. ಯೆಹೋವನ ಮಹಿಮೆಯು ತನ್ನ ಸ್ಥಳದಿಂದ ಮೇಲೇರಿದಾಗ ನನ್ನ ಹಿಂಭಾಗದಲ್ಲಿ ಮಹಾ ಗುಡುಗುವ ಶಬ್ದವನ್ನು ಕೇಳಿದೆನು. ಅದು ಯೆಹೋವನಿಗೆ ಆತನ ನಿವಾಸದಲ್ಲಿ ಸ್ತೋತ್ರವಾಗಲಿ ಎಂಬ ವಾಣಿಯೊಂದಿಗೆ ಕೇಳಿಸುತ್ತಿತ್ತು.


ಆದ್ದರಿಂದ ನರಪುತ್ರನೇ, ಇಸ್ರೇಲ್ ಜನಾಂಗದವರೊಂದಿಗೆ ಮಾತನಾಡು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ನಿಮ್ಮ ಪೂರ್ವಿಕರು ನನಗೆ ಅಪಮಾನ ಮಾಡಿದರು ಮತ್ತು ದ್ರೋಹ ಮಾಡಿದರು.


“ನೀವು ಬಂಧಿಗಳು. ನಾನು ನಿಮ್ಮನ್ನು ಜೆರುಸಲೇಮ್ ಬಿಟ್ಟು ಬಾಬಿಲೋನಿಗೆ ಹೋಗುವಂತೆ ಒತ್ತಾಯಿಸಿದೆ. ಆದ್ದರಿಂದ ಯೆಹೋವನ ಸಂದೇಶವನ್ನು ಕೇಳಿರಿ.”


ಆ ಜನರೊಂದಿಗೆ ಮಾತನಾಡಲು ನಾನು ನಿನ್ನನ್ನು ಕಳುಹಿಸುತ್ತಿದ್ದೇನೆ. ಅವರು ಬಹಳವಾಗಿ ಪ್ರತಿಭಟಿಸುವವರೂ ಮೊಂಡರೂ ಆಗಿದ್ದಾರೆ. ಆದರೆ ನೀನು ಅವರೊಂದಿಗೆ ಮಾತಾಡಿ, ‘ನಮ್ಮ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ’ ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು