Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:12 - ಪರಿಶುದ್ದ ಬೈಬಲ್‌

12 ಆಗ ದೇವರಾತ್ಮವು ನನ್ನನ್ನು ಮೇಲಕ್ಕೆ ಎತ್ತಿತು. ಯೆಹೋವನ ಮಹಿಮೆಯು ತನ್ನ ಸ್ಥಳದಿಂದ ಮೇಲೇರಿದಾಗ ನನ್ನ ಹಿಂಭಾಗದಲ್ಲಿ ಮಹಾ ಗುಡುಗುವ ಶಬ್ದವನ್ನು ಕೇಳಿದೆನು. ಅದು ಯೆಹೋವನಿಗೆ ಆತನ ನಿವಾಸದಲ್ಲಿ ಸ್ತೋತ್ರವಾಗಲಿ ಎಂಬ ವಾಣಿಯೊಂದಿಗೆ ಕೇಳಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಮೇಲೆ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಗಲಾಗಿ, “ಮಹಿಮೆಯುಳ್ಳ ಯೆಹೋವನಿಗೆ ಆತನ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ” ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಮೇಲೆ ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. “ಮಹಿಮಾಭರಿತ ಸರ್ವೇಶ್ವರ ಸ್ವಾಮಿಗೆ ಆತನಾಲಯದಲ್ಲಿ ಸ್ತೋತ್ರ; ಸ್ತೋತ್ರ;” ಎಂಬ ಮಹಾಶಬ್ದ ನನ್ನ ಹಿಂದೆ ಭರಭರನೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಮೇಲೆ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಗಲಾಗಿ ಮಹಿಮೆಯಿಂದ ಕೂಡಿದ ಯೆಹೋವನಿಗೆ ಆತನ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ ಎಂಬ ಮಹಾಶಬ್ದವು ನನ್ನ ಹಿಂದೆ ಭರಭರನೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಮೇಲೆ ದೇವರಾತ್ಮರು ನನ್ನನ್ನು ಎತ್ತಿಕೊಂಡು ಹೋದರು. ಮಹಿಮೆಯಿಂದ ಕೂಡಿದ ಯೆಹೋವ ದೇವರ ಮಹಿಮೆಯು ಅವರ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:12
27 ತಿಳಿವುಗಳ ಹೋಲಿಕೆ  

ಅವರು ನೀರಿನಿಂದ ಮೇಲಕ್ಕೆ ಬಂದಾಗ ಪ್ರಭುವಿನ ಆತ್ಮನಿಂದ ಫಿಲಿಪ್ಪನು ಎತ್ತಲ್ಪಟ್ಟನು. ಅವನು ಫಿಲಿಪ್ಪನನ್ನು ಮತ್ತೆಂದೂ ನೋಡಲಿಲ್ಲ. ಅವನು ಬಹಳ ಸಂತೋಷದಿಂದ ತನ್ನ ಪ್ರಯಾಣವನ್ನು ಮುಂದುವರಿಸಿದನು.


ಆಗ ಅದು ಕೈಯಂತಿದ್ದ ಒಂದನ್ನು ಚಾಚಿ ನನ್ನ ತಲೆಯ ಕೂದಲನ್ನು ಹಿಡಿದುಕೊಂಡಿತು. ಬಳಿಕ ಆತ್ಮವು ನನ್ನನ್ನು ಮೇಲಕ್ಕೆ ಎತ್ತಿ ದಿವ್ಯದರ್ಶನದಲ್ಲಿ ಜೆರುಸಲೇಮಿಗೆ ಕೊಂಡೊಯ್ಯಿತು. ಅದು ನನ್ನನ್ನು ಒಳದ್ವಾರಕ್ಕೆ ಕೊಂಡೊಯ್ಯಿತು. ಇದು ಉತ್ತರ ದಿಕ್ಕಿನಲ್ಲಿತ್ತು. ದೇವರನ್ನು ಸಿಟ್ಟಿಗೆಬ್ಬಿಸುವ ವಿಗ್ರಹವು ಈ ದ್ವಾರದ ಬಳಿ ಇತ್ತು.


ಆಗ ಆತ್ಮವು ನನ್ನನ್ನು ಯೆಹೋವನಾಲಯದ ಪೂರ್ವದ ಬಾಗಿಲಿಗೆ ಕೊಂಡೊಯ್ಯಿತು. ಬಾಗಿಲಿನ ಪ್ರವೇಶ ಸ್ಥಳದಲ್ಲಿ ನಾನು ಇಪ್ಪತ್ತೈದು ಮಂದಿ ಜನರನ್ನು ನೋಡಿದೆನು. ಅವರಲ್ಲಿ ಅಜ್ಜೂರನ ಮಗನಾದ ಯಾಜನ್ಯನನ್ನು, ಬೆನಾಯನ ಮಗನಾದ ಪೆಲತ್ಯನನ್ನು ನಾನು ನೋಡಿದೆನು. ಅವರಿಬ್ಬರು ಜನರಿಗೆ ನಾಯಕರಾಗಿದ್ದರು.


ಆಗ, ಆಕಾಶದಿಂದ ಒಂದು ಶಬ್ದ ಇದ್ದಕ್ಕಿದ್ದಂತೆ ಬಂದಿತು. ಬಿರುಗಾಳಿ ಬೀಸುತ್ತಿದೆಯೋ ಎಂಬಂತಿತ್ತು ಆ ಶಬ್ದ. ಅವರು ಕುಳಿತುಕೊಂಡಿದ್ದ ಮನೆಯಲ್ಲೆಲ್ಲಾ ಆ ಶಬ್ದ ತುಂಬಿಕೊಂಡಿತು.


ಆತ್ಮವು ನನ್ನನ್ನು ಅಲ್ಲಿಂದ ಎತ್ತಿಕೊಂಡು ಹೋಯಿತು. ನಾನು ಆಗ ದುಃಖಗೊಂಡು ನನ್ನ ಆತ್ಮದಲ್ಲಿ ತತ್ತರಗೊಂಡೆನು. ಆದರೆ ಯೆಹೋವನ ಶಕ್ತಿಯು ನನ್ನನ್ನು ಸಂಪೂರ್ಣವಾಗಿ ತನ್ನ ಅಧೀನಕ್ಕೆ ತೆಗೆದುಕೊಂಡಿತು.


ನಂತರ ಅನೇಕಾನೇಕ ಜನರ ಮಹಾಶಬ್ದದಂತಿದ್ದ ಧ್ವನಿಯೊಂದು ನನಗೆ ಕೇಳಿಸಿತು. ಅದು ಪ್ರವಾಹದ ನೀರಿನ ಘೋಷದಂತೆಯೂ ಗಟ್ಟಿಯಾದ ಗುಡುಗಿನ ಶಬ್ದದಂತೆಯೂ ಇತ್ತು. ಆ ಜನರು ಹೀಗೆ ಹೇಳುತ್ತಿದ್ದರು: “ಹಲ್ಲೆಲೂಯಾ! ನಮ್ಮ ದೇವರಾದ ಪ್ರಭುವು ಆಳಲಾರಂಭಿಸಿದ್ದಾನೆ. ಆತನು ಸರ್ವಶಕ್ತನಾಗಿದ್ದಾನೆ.


ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತಿದ್ದವು; ಧ್ವನಿಯು ಹರಿಯುವ ನೀರಿನ ಘೋಷದಂತಿತ್ತು.


ಪ್ರಭುವಿನ ದಿನದಂದು ಪವಿತ್ರಾತ್ಮನು ನನ್ನನ್ನು ವಶಪಡಿಸಿಕೊಂಡನು. ಆಗ ನನ್ನ ಹಿಂಭಾಗದಲ್ಲಿ ಒಂದು ಮಹಾಶಬ್ದವನ್ನು ಕೇಳಿದೆನು. ಆ ಶಬ್ದವು ತುತೂರಿಯ ಧ್ವನಿಯಂತಿತ್ತು.


ಯೆಹೋವನ ಮಹಿಮೆಯು ಕೆರೂಬಿದೂತರ ಮೇಲಿನಿಂದ ಹೊರಟು ಆಲಯದ ಹೊಸ್ತಿಲಿಗೆ ಬಂದಿತು. ಆಗ ಮೋಡವು ಆಲಯದಲ್ಲಿ ತುಂಬಿಕೊಂಡಿತು. ಯೆಹೋವನ ಮಹಿಮೆಯ ಪ್ರಕಾಶವು ಇಡೀ ಅಂಗಳವನ್ನು ತುಂಬಿಕೊಂಡಿತು.


ಆಗ ಇಸ್ರೇಲರ ದೇವರ ಮಹಿಮೆಯು ತಾನು ಆಸನಾರೂಢನಾಗಿದ್ದ ಕೆರೂಬಿದೂತರ ಮೇಲಿನಿಂದ ಏರಿ ದೇವಾಲಯದ ಪ್ರವೇಶ ಸ್ಥಳಕ್ಕೆ ಹೋಯಿತು. ಆ ಮಹಿಮೆಯು ನಾರುಮಡಿಯನ್ನು ಧರಿಸಿದ್ದ, ಲೇಖಕನ ಸಾಮಾಗ್ರಿಯ ಚಿಕ್ಕ ಚೀಲವನ್ನು ಹೊಂದಿದ್ದ ಪುರುಷನನ್ನು ಕರೆಯಿತು.


ಆತನು ನನ್ನೊಂದಿಗೆ ಮಾತನಾಡುತ್ತಿರಲು, ಆತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಕಾಲೂರಿ ನಿಂತುಕೊಳ್ಳುವಂತೆ ಮಾಡಿತು. ಆತನು ನನ್ನೊಂದಿಗೆ ಮಾತಾಡುವುದು ನನಗೆ ಕೇಳಿಸಿತು.


ಪ್ರತಿಯೊಬ್ಬ ದೂತನು ಇನ್ನೊಬ್ಬ ದೂತನನ್ನು ಕರೆದು, “ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಸರ್ವಶಕ್ತನಾದ ಯೆಹೋವನು ಮಹಾ ಪರಿಶುದ್ಧನು. ಆತನ ಮಹಿಮೆಯು ಇಡೀ ಭೂಮಂಡಲವನ್ನು ಆವರಿಸಿಕೊಂಡಿದೆ” ಎಂದು ಗಟ್ಟಿಯಾದ ಸ್ವರದಲ್ಲಿ ಹೇಳುತ್ತಿದ್ದರು.


ಎಲ್ಲಾ ದೂತರುಗಳೇ, ಆತನಿಗೆ ಸ್ತೋತ್ರಮಾಡಿರಿ! ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ!


ಅವರು ಅವನಿಗೆ, “ನೋಡು, ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠ ಜನರಿದ್ದಾರೆ. ನಿನ್ನ ಒಡೆಯನನ್ನು ಹುಡುಕಲು ದಯವಿಟ್ಟು ಅವರಿಗೆ ಅವಕಾಶಕೊಡು. ಯೆಹೋವನ ಆತ್ಮವು ಎಲೀಯನನ್ನು ಮೇಲಕ್ಕೆ ಎತ್ತಿಕೊಂಡು ಹೋಗಿ ಯಾವುದಾದರೂ ಬೆಟ್ಟದ ಮೇಲಾಗಲಿ ಅಥವಾ ಕಣಿವೆಯಲ್ಲಾಗಲಿ ಬೀಳಿಸಿರಬೇಕು” ಎಂದು ಹೇಳಿದರು. ಆದರೆ ಎಲೀಷನು, “ಇಲ್ಲ, ಎಲೀಯನನ್ನು ಹುಡುಕಲು ಜನರನ್ನು ಕಳುಹಿಸಬೇಡಿ!” ಎಂದು ಉತ್ತರಿಸಿದನು.


ನಾನು ಹೋಗಿ ರಾಜನಾದ ಅಹಾಬನಿಗೆ ನೀನು ಇಲ್ಲಿರುವೆಯೆಂಬುದನ್ನು ತಿಳಿಸಿದರೆ, ನಂತರ ಯೆಹೋವನು ನಿನ್ನನ್ನು ಬೇರೊಂದು ಸ್ಥಳಕ್ಕೆ ಕರೆದೊಯ್ಯುವನು. ರಾಜನಾದ ಅಹಾಬನು ಇಲ್ಲಿಗೆ ಬಂದಾಗ, ನಿನ್ನನ್ನು ಕಂಡುಹಿಡಿಯಲು ಸಮರ್ಥನಾಗುವುದಿಲ್ಲ. ಆಗ ಅವನು ನನ್ನನ್ನು ಕೊಂದುಬಿಡುತ್ತಾನೆ! ನನ್ನ ಬಾಲ್ಯದಿಂದಲೂ ನಾನು ಯೆಹೋವನನ್ನೇ ಅನುಸರಿಸುತ್ತಿದ್ದೇನೆ.


ಬಳಿಕ ಸೆರೆವಾಸದಲ್ಲಿರುವ ನಿನ್ನ ಸ್ವಜನರ ಬಳಿಗೆ ಹೋಗು. ಅವರು ಕೇಳಲಿ, ಕೇಳದಿರಲಿ, ನೀನು ಅವರಿಗೆ, ‘ದೇವರಾದ ಯೆಹೋವನು ಹೀಗೆ ಹೇಳುತ್ತಾನೆ’” ಎಂದು ಹೇಳು.


ಯೆಹೋವನೇ, ನಿನ್ನ ಆಲಯವೂ ನಿನ್ನ ಮಹಿಮಾಗುಡಾರವೂ ನನಗೆ ಎಷ್ಟೋ ಪ್ರಿಯವಾಗಿವೆ.


ಯೆಹೋವನ ಮಹಿಮೆಯು ಪೂರ್ವದಿಕ್ಕಿನ ದ್ವಾರದ ಮೂಲಕ ಆಲಯದೊಳಗೆ ಬಂದಿತು.


ಆಗ ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಪ್ರಾಕಾರಕ್ಕೆ ತಂದಿತು. ಯೆಹೋವನ ಮಹಿಮೆಯು ಆಲಯವನ್ನು ತುಂಬಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು