Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:15 - ಪರಿಶುದ್ದ ಬೈಬಲ್‌

15 ಕೆಬಾರ್ ಕಾಲುವೆ ಪಕ್ಕದಲ್ಲಿದ್ದ ತೇಲ್ ಆಬೀಬ್‌ನಲ್ಲಿ ಸೆರೆಯಾಳುಗಳಾಗಿದ್ದ ಇಸ್ರೇಲ್ ಜನರ ಬಳಿಗೆ ನಾನು ಒಯ್ಯಲ್ಪಟ್ಟೆನು. ಅಲ್ಲಿದ್ದ ಜನರ ಮಧ್ಯೆ ನಾನು ಏಳು ದಿವಸ ಸ್ತಬ್ಧನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಸೆರೆಯಾಗಿ ಒಯ್ಯಲ್ಪಟ್ಟು ಕೆಬಾರ್ ನದಿಯ ಹತ್ತಿರ ತೇಲ್ ಆಬೀಬಿನಲ್ಲಿ ವಾಸವಾಗಿದ್ದವರ ಬಳಿಗೆ ಬಂದು, ಅವರು ಕುಳಿತುಕೊಂಡಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆನು; ಏಳು ದಿನಗಳವರೆಗೂ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ಧನಾಗಿ ಉಳಿದುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅನಂತರ ಕೆಬಾರ್ ನದಿಯ ಹತ್ತಿರ ತೇಲ್ ಅಬೀಬ್‍ನಲ್ಲಿ ವಾಸವಾಗಿದ್ದ ಗಡೀಪಾರಾಗಿ ಸೆರೆಯಾಳುಗಳಾಗಿದ್ದವರ ಬಳಿಗೆ ಬಂದೆ. ಅವರು ಕೂತಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆ; ಏಳು ದಿವಸ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ದನಾಗಿ ಇದ್ದುಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಸೆರೆಯಾಗಿ ಒಯ್ಯಲ್ಪಟ್ಟು ಕೆಬಾರ್ ನದಿಯ ಹತ್ತಿರ ತೇಲ್ ಆಬೀಬಿನಲ್ಲಿ ವಾಸವಾಗಿದ್ದವರ ಬಳಿಗೆ ಬಂದು ಅವರು ಕೂತಿದ್ದ ಸ್ಥಳದಲ್ಲಿಯೇ ಕೂತುಕೊಂಡೆನು; ಏಳು ದಿವಸ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ಧನಾಗಿ ಇದ್ದುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಮೇಲೆ ನಾನು ಕೆಬಾರ್ ನದಿಯ ದಡದಲ್ಲಿ ವಾಸಿಸುತ್ತಿದ್ದ ತೆಲ್ ಅಬೀಬಿನ ಸೆರೆಯವರ ಬಳಿಗೆ ಬಂದೆನು. ನಾನು ಬಹು ದುಃಖಿತನಾಗಿ ಅವರು ಕುಳಿತಿದ್ದ ಕಡೆಗೆ ನಾನು ಏಳು ದಿನಗಳ ಕಾಲ ಅವರ ಜೊತೆಗೆ ಕುಳಿತುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:15
10 ತಿಳಿವುಗಳ ಹೋಲಿಕೆ  

ನಾವು ಬಾಬಿಲೋನ್ ದೇಶದ ನದಿಗಳ ಬಳಿಯಲ್ಲಿ ಕುಳಿತುಕೊಂಡು ಚೀಯೋನನ್ನು ನೆನಸಿಕೊಳ್ಳುತ್ತಾ ಅತ್ತೆವು.


ಬಳಿಕ ಆ ಮೂವರು ಸ್ನೇಹಿತರು ಏಳುದಿನ ಹಗಲಿರುಳು ಯೋಬನೊಂದಿಗೆ ನೆಲದ ಮೇಲೆ ಕುಳಿತುಕೊಂಡಿದ್ದರು. ಯೋಬನು ವಿಪರೀತ ನೋವಿನಲ್ಲಿದ್ದ ಕಾರಣ ಅವರು ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ.


ನಾನು ಯಾಜಕನಾಗಿದ್ದೇನೆ. ನಾನು ಬೂಜಿಯ ಮಗನಾದ ಯೆಹೆಜ್ಕೇಲ. ನಾನು ಬಾಬಿಲೋನಿನಲ್ಲಿ ಯೆಹೂದ್ಯರೊಂದಿಗೆ ಸೆರೆಯಲ್ಲಿದ್ದೆ. ನಾನು ಕೆಬಾರ್ ಕಾಲುವೆಯ ಬಳಿಯಲ್ಲಿದ್ದಾಗ ಆಕಾಶ ತೆರೆದಿರುವದನ್ನು ಕಂಡೆನು. ನನಗೆ ದೇವದರ್ಶನವಾಯಿತು. ಇದು ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆ ದಿವಸದಲ್ಲಾಯಿತು. ಒಡೆಯನಾದ ಯೆಹೋಯಾಖೀನನು ಸೆರೆಯಲ್ಲಿದ್ದ ಐದನೆಯ ವರ್ಷದ ನಾಲ್ಕನೆ ತಿಂಗಳಿನ ಐದನೆಯ ದಿನದಲ್ಲಿ ಯೆಹೋವನ ವಾಕ್ಯವು ಯೆಹೆಜ್ಕೇಲನಿಗೆ ಬಂದಿತು. ಆ ಸ್ಥಳದಲ್ಲಿ ಯೆಹೋವನ ಆತ್ಮನಿಂದ ಅವನು ಪರವಶನಾದನು.


ಅವರು ಗೋರೆನ್‌ಅಟಾದ್ ಎಂಬಲ್ಲಿಗೆ ಬಂದರು. ಅದು ಜೋರ್ಡನ್ ನದಿಯ ಪೂರ್ವದಲ್ಲಿತ್ತು. ಆ ಸ್ಥಳದಲ್ಲಿ ಅವರು ತುಂಬ ಸಮಯದವರೆಗೆ ಶೋಕಿಸಿದರು. ಆ ಶೋಕವು ಏಳು ದಿನಗಳವರೆಗೆ ಮುಂದುವರೆಯಿತು.


ಆ ವಿಷಯವನ್ನು ಕೇಳಿದಾಗ ನನ್ನ ಶರೀರವೆಲ್ಲಾ ನಡುಗಿತು. ಆಶ್ಟರ್ಯದಿಂದ ನಾನು ಸಿಳ್ಳುಹಾಕಿದೆ. ನನ್ನ ಎಲುಬುಗಳ ಬಲಹೀನತೆಯಿಂದ ನಾನು ನಡುಗುವವನಾಗಿ ನಿಂತೆನು. ಅವರು ಜನರ ಮೇಲೆ ಬೀಳಲು ಬರುವಾಗ ನಾನು ಅವರ ನಾಶನದ ದಿವಸವನ್ನು ಎದುರುನೋಡುತ್ತಿದ್ದೇನೆ.


ಈ ಜೀವಿಗಳು ಮೊದಲು ನಾನು ಕೆಬಾರ್ ನದಿಯ ಬಳಿ ಕಂಡ ದರ್ಶನದಲ್ಲಿದ್ದ ಕೆರೂಬಿಯರೇ ಆಗಿರಬೇಕು ಎಂದು ಆಗ ನನಗೆ ಮನದಟ್ಟಾಯಿತು. ಬಳಿಕ ಕೆರೂಬಿಗಳು ಮೇಲಕ್ಕೆ ಏರಿದವು.


ಪ್ರವಾದಿಗಳಿಗೊಂದು ಸಂದೇಶ. ನಾನು ಬಹಳ ದುಃಖಿತನಾಗಿದ್ದೇನೆ. ನನ್ನ ಹೃದಯ ಒಡೆದುಹೋಗಿದೆ. ನನ್ನ ಎಲುಬುಗಳೆಲ್ಲಾ ನಡುಗುತ್ತಿವೆ. ನಾನು ಅಮಲೇರಿದವನಂತಿದ್ದೇನೆ. ಯೆಹೋವನೂ ಆತನ ಪರಿಶುದ್ಧ ನುಡಿಗಳೂ ಇದಕ್ಕೆ ಕಾರಣ.


ನಾನೆದ್ದು ಬಯಲು ಸೀಮೆಗೆ ಹೋದೆನು. ಕೆಬಾರ್ ನದಿಯ ಪಕ್ಕದಲ್ಲಿ ನಾನು ಕಂಡ ಮಹಿಮೆಯಂತಿದ್ದ ಯೆಹೋವನ ಮಹಿಮೆಯು ಅಲ್ಲಿ ಇತ್ತು. ನಾನು ನನ್ನ ಮುಖವನ್ನು ನೆಲಕ್ಕೆ ತಾಗಿಸಿ ಬಗ್ಗಿ ನಮಸ್ಕರಿಸಿದೆ.


ನಾನು ನೋಡಿದ ದರ್ಶನವು ಕೆಬಾರ್ ಕಾಲುವೆಯ ಬಳಿ ಕಂಡ ದರ್ಶನದಂತಿತ್ತು. ನಾನು ಸಾಷ್ಟಾಂಗವೆರಗಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು