Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:18 - ಪರಿಶುದ್ದ ಬೈಬಲ್‌

18 ನಾನು ದುಷ್ಟನಿಗೆ, ‘ನೀನು ಸಾಯುವೆ’ ಎಂದು ಹೇಳುವಾಗ, ನೀನು ಅವನನ್ನು ಎಚ್ಚರಿಸಬೇಕು. ಅವನು ತನ್ನ ಪ್ರಾಣವನ್ನು ರಕ್ಷಿಸಿಕೊಳ್ಳುವದಕ್ಕಾಗಿ ತನ್ನ ಜೀವಿತವನ್ನು ಮಾರ್ಪಡಿಸಿಕೊಂಡು ದುಷ್ಕೃತ್ಯ ನಿಲ್ಲಿಸಬೇಕೆಂದು ನೀನು ಅವನಿಗೆ ಹೇಳಬೇಕು. ನೀನು ಅವನನ್ನು ಎಚ್ಚರಿಸದಿದ್ದರೆ ಅವನು ತನ್ನ ಪಾಪದ ದೆಸೆಯಿಂದ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೇ ಹೊಣೆಗಾರನನ್ನಾಗಿ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ದುಷ್ಟನಿಗೆ, ‘ನೀನು ಖಂಡಿತವಾಗಿ ಸಾಯುವೆ’ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ, ಅವನು ತನ್ನ ಕೆಟ್ಟಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವುದು; ಅವನ ಮರಣಕ್ಕೆ ನೀನು ಹೊಣೆಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಾನು ದುಷ್ಟನಿಗೆ, “ನೀನು ಖಂಡಿತವಾಗಿ ಸಾಯುವೆ,” ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆ ಹಾಗು ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆ ಇದ್ದರೆ, ಆ ದುಷ್ಟನು ತನ್ನ ಅಪರಾಧಕ್ಕಾಗಿ ಸಾಯಬೇಕಾಗುವುದು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾನು ದುಷ್ಟನಿಗೆ - ಸತ್ತೇ ಸಾಯುವಿ ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆಯೂ ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆಯೂ ಇದ್ದರೆ ಆ ದುಷ್ಟನು ತನ್ನ ಅಪರಾಧದಿಂದ ಸಾಯಬೇಕಾಗುವದು; ಅವನ ಮರಣಕ್ಕಾಗಿ ನಿನಗೇ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ದುಷ್ಟನಿಗೆ, ‘ನೀನು ನಿಶ್ಚಯವಾಗಿ ಸಾಯುವೆ,’ ಎಂದು ಹೇಳುವಾಗ, ನೀನು ಅವನನ್ನು ಎಚ್ಚರಿಸದೆ, ಅವನು ತನ್ನ ದುರ್ಮಾರ್ಗಗಳನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ನೀನು ಅವನಿಗೆ ಬುದ್ಧಿಹೇಳದೆ ಹೋದರೆ, ಆ ದುಷ್ಟ ಮನುಷ್ಯನು ತನ್ನ ಪಾಪಗಳಿಂದಲೇ ಸಾಯಬೇಕಾಗುವದು; ಆದರೆ ಅವನ ಸಾವಿಗೆ ನಿನ್ನನ್ನೇ ಹೊಣೆಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:18
31 ತಿಳಿವುಗಳ ಹೋಲಿಕೆ  

“‘ಆದರೆ ವೈರಿಯು ಬರುವಂತದ್ದನ್ನು ಆ ಕಾವಲುಗಾರನು ಕಂಡರೂ, ಜನರನ್ನು ಎಚ್ಚರಿಸಲು ತುತ್ತೂರಿಯನ್ನು ಊದದಿದ್ದರೆ ವೈರಿಯು ಅವರನ್ನು ಸೆರೆಹಿಡಿದು ಕೈದಿಗಳನ್ನಾಗಿ ಮಾಡಿ ಕೊಂಡೊಯ್ಯುವನು. ಆ ಮನುಷ್ಯನು ಪಾಪಮಾಡಿದ್ದರಿಂದ ಆ ಶಿಕ್ಷೆಯು ಅವನಿಗೆ ದೊರಕಿತು. ಆದರೆ, ಕಾವಲುಗಾರನು ಕೂಡಾ ಅವನ ಮರಣಕ್ಕೆ ಕಾರಣನಾಗುವನು.’


“ಒಳ್ಳೆಯವನು ತನ್ನ ಒಳ್ಳೆಯತನವನ್ನು ತೊರೆದು ಕೆಟ್ಟದ್ದನ್ನು ಮಾಡಿದರೆ, ನಾನು ಅವನ ಹಾದಿಗೆ ತಡೆಯನ್ನು ಹಾಕಿ ಅವನು ಬೀಳುವಂತೆ ಮಾಡುವೆನು; ಅವನು ಸಾಯುವನು. ನೀನು ಅವನನ್ನು ಎಚ್ಚರಿಸಲಿಲ್ಲವಾದ್ದರಿಂದ ಅವನು ತನ್ನ ಪಾಪದ ನಿಮಿತ್ತ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೆ ಹೊಣೆಗಾರನನ್ನಾಗಿ ಮಾಡುತ್ತೇನೆ. ಜನರು ಅವನ ಒಳ್ಳೆಯ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.


ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, “ಈ ದುಷ್ಟ ಸಂತತಿಯಿಂದ ತಪ್ಪಿಸಿಕೊಳ್ಳಿ” ಎಂದು ಬೇಡಿಕೊಂಡನು.


ಅವರು ಅಂತಹ ಪಾಪಿಗಳಾಗಿರಲಿಲ್ಲ! ಆದರೆ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ಅವರಂತೆಯೇ ನಾಶವಾಗುವಿರಿ ಎಂದು ನಾನು ನಿಮಗೆ ಹೇಳುತ್ತೇನೆ!” ಎಂದು ಉತ್ತರಿಸಿದನು.


ನಿನ್ನ ಜೀವನದಲ್ಲಿಯೂ ನಿನ್ನ ಬೋಧನೆಯಲ್ಲಿಯೂ ಎಚ್ಚರಿಕೆಯಿಂದಿರು. ಯೋಗ್ಯವಾದ ರೀತಿಯಲ್ಲಿ ಜೀವಿಸುತ್ತಾ ಬೋಧಿಸು. ಆಗ ನೀನು, ನಿನ್ನನ್ನೂ ನಿನ್ನ ಬೋಧನೆ ಕೇಳುವವರನ್ನೂ ರಕ್ಷಿಸುವೆ.


ಯೇಸು ಅವರಿಗೆ, “ನಾನು ನಿಮ್ಮನ್ನು ಬಿಟ್ಟುಹೋಗುತ್ತೇನೆ. ನೀವು ನನ್ನನ್ನು ಹುಡುಕುವಿರಿ. ಆದರೆ ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದು ಹೇಳಿದನು.


ಯಾರು ಪಾಪ ಮಾಡುತ್ತಾರೋ ಅವರೇ ಮರಣಶಿಕ್ಷೆ ಹೊಂದುವರು. ತಂದೆಯ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ಮಗನು ಹೊತ್ತುಕೊಳ್ಳುವುದಿಲ್ಲ. ಮತ್ತು ಮಗನ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ತಂದೆಯು ಹೊತ್ತುಕೊಳ್ಳುವದಿಲ್ಲ. ಒಬ್ಬ ಒಳ್ಳೆ ಮನುಷ್ಯನ ನೀತಿಯು ಅವನಿಗೇ ಸೇರಿದ್ದು. ಕೆಟ್ಟ ಮನುಷ್ಯನ ದುಷ್ಟತ್ವವೂ ಆ ಕೆಟ್ಟ ಮನುಷ್ಯನಿಗೆ ಸೇರಿದ್ದಾಗಿದೆ.


ನೀವು ನಿಮ್ಮ ಪಾಪಗಳಲ್ಲೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆ. ಹೌದು, ನಾನೇ ಆತನೆಂಬುದನ್ನು ನೀವು ನಂಬದಿದ್ದರೆ ನಿಮ್ಮ ಪಾಪಗಳಲ್ಲಿಯೇ ನೀವು ಸಾಯುವಿರಿ” ಎಂದು ಹೇಳಿದನು.


ಯೆಹೋವನು ಹೇಳುವುದೇನೆಂದರೆ, “ನಾನು ಆ ಕುರುಬರಿಗೆ ವಿರುದ್ಧವಾಗಿದ್ದೇನೆ. ಅವರ ಕೈಯಿಂದ ನನ್ನ ಕುರಿಗಳ ಬಗ್ಗೆ ವಿಚಾರಿಸುವೆನು. ನಾನು ಅವರನ್ನು ತೊಲಗಿಸಿ ಬಿಡುವೆನು. ಇನ್ನು ಮುಂದೆ ಅವರು ನನ್ನ ಕುರುಬರಾಗಿರುವುದಿಲ್ಲ. ಇನ್ನು ಅವರಿಗೆ ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ಸಾಧ್ಯವಿಲ್ಲ. ನನ್ನ ಕುರಿಗಳನ್ನು ಅವರ ಬಾಯಿಂದ ತಪ್ಪಿಸುವೆನು. ಆಗ ನನ್ನ ಕುರಿಗಳು ಅವರಿಗೆ ಆಹಾರವಾಗುವುದಿಲ್ಲ.”


ಎಲ್ಲಾ ಪ್ರಾಣಗಳು ನನ್ನವೇ. ತಂದೆಯ ಪ್ರಾಣವೂ ಮಗನ ಪ್ರಾಣವೂ ನನ್ನವೇ. ಪಾಪಮಾಡುವವನು ಮಾತ್ರ ಸಾಯುವನು.


ದುಷ್ಟನು ತನ್ನ ಕೆಡುಕಿನಿಂದಲೇ ಸೋತುಹೋಗುವನು; ಆದರೆ ಒಳ್ಳೆಯವನು ಮರಣದ ಸಮಯದಲ್ಲೂ ಜಯಶಾಲಿಯಾಗುವನು.


ನೀನು ನಿನ್ನ ಹಸ್ತಗಳನ್ನು ಯಾರ ಮೇಲಾದರೂ ಇಟ್ಟು ಅವನನ್ನು ಸಭಾಹಿರಿಯನನ್ನಾಗಿ ನೇಮಿಸುವುದಕ್ಕಿಂತ ಮೊದಲೇ ಗಮನವಿಟ್ಟು ಆಲೋಚನೆಮಾಡು. ಇತರ ಜನರ ಪಾಪಗಳಲ್ಲಿ ಪಾಲುಗಾರನಾಗದೆ ಶುದ್ಧನಾಗಿರು.


ಆದ್ದರಿಂದ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿ. ಆಗ ಆತನು ನಿಮ್ಮ ಪಾಪಗಳನ್ನು ಕ್ಷಮಿಸುವನು.


ಇಲ್ಲ! ಅವರು ಅಂತಹ ಪಾಪಿಗಳಾಗಿರಲಿಲ್ಲ! ಆದರೆ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ಅವರಂತೆಯೇ ನಾಶವಾಗುವಿರಿ!


ಆ ಕೆಟ್ಟ ಮಗನಿಂದ ಯಾರಾದರೂ ಸಾಲ ತೆಗೆದುಕೊಂಡಿದ್ದರೆ ಅವನು ಅವರಿಂದ ಬಡ್ಡಿಯನ್ನು ಕಡ್ಡಾಯವಾಗಿ ವಸೂಲು ಮಾಡಿದ್ದಿರಬಹುದು. ಹೀಗಿರುವದರಿಂದ ಆ ಕೆಟ್ಟ ಮಗನು ಹೆಚ್ಚುಕಾಲ ಬದುಕುವುದಿಲ್ಲ. ಅವನು ಭಯಂಕರ ಕೃತ್ಯಗಳನ್ನು ಮಾಡಿರುವದರಿಂದ ಕೊಲ್ಲಲ್ಪಡುವನು. ಅವನ ಮರಣಕ್ಕೆ ಅವನೇ ಜವಾಬ್ದಾರನು.


ಆದರೆ ದುಷ್ಟರ ಗತಿಯನ್ನು ಏನು ಹೇಳಲಿ. ದುಷ್ಟರಿಗೆ ಕೆಡುಕು ಸಂಭವಿಸುವದು. ಅವರಿಗೆ ಬಹಳ ಸಂಕಟಗಳು ಬಂದೊದಗುವವು. ಅವರು ಮಾಡಿರುವ ಎಲ್ಲಾ ದುಷ್ಟಕ್ರಿಯೆಗಳಿಗೆ ಶಿಕ್ಷೆ ಕೊಡಲ್ಪಡುವದು.


ರಾಜನಾದ ಅಹಜ್ಯನಿಗೆ ಈ ಸಂಗತಿಗಳನ್ನು ತಿಳಿಸಿ: ಬಾಳ್ಜೆಬೂಬನಿಂದ ಪ್ರಶ್ನೆಗಳನ್ನು ಕೇಳುವುದಕ್ಕೆ ನೀನು ಸಂದೇಶಕರನ್ನು ಕಳುಹಿಸಿದೆ. ನೀನು ಈ ಕಾರ್ಯವನ್ನು ಮಾಡಿದುದರಿಂದ, ಯೆಹೋವನು ಹೀಗೆನ್ನುವನು: ನೀನು ನಿನ್ನ ಹಾಸಿಗೆಯಿಂದ ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ’ ಎಂದು ತಿಳಿಸು” ಎಂಬುದಾಗಿ ಹೇಳಿದನು. ಎಲೀಯನು ಅಹಜ್ಯನ ಸೇವಕರಿಗೆ ಈ ಮಾತುಗಳನ್ನು ಹೇಳಿ ಅಲ್ಲಿಂದ ಹೊರಟುಹೋದನು.


ಆದರೆ ಒಳ್ಳೆಯದು ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರದ ಹಣ್ಣನ್ನು ಮಾತ್ರ ನೀನು ತಿನ್ನಕೂಡದು. ಒಂದುವೇಳೆ ಆ ಮರದ ಹಣ್ಣನ್ನು ತಿಂದರೆ ನೀನು ಸಾಯುವೆ!” ಎಂದು ಆಜ್ಞಾಪಿಸಿದನು.


ದುಷ್ಟರಾದ ನೀವು ಇಂದು ಒಬ್ಬ ನೀತಿವಂತನನ್ನು ಅವನ ಸ್ವಂತ ಮನೆಯಲ್ಲಿ ಅವನ ಸ್ವಂತ ಹಾಸಿಗೆಯ ಮೇಲೆಯೇ ಕೊಂದಿರುವುದರಿಂದ ನಿಮ್ಮನ್ನೂ ನಾನು ಕೊಂದು ನಿರ್ಮೂಲ ಮಾಡಬೇಕು” ಎಂದನು.


ಯೆಹೋವನು ಅವರೆಲ್ಲರೂ ಮರುಭೂಮಿಯಲ್ಲಿಯೇ ಸಾಯುವರೆಂದು ಹೇಳಿದ್ದನು. ಆದ್ದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.


ಅದಕ್ಕೆ ರೂಬೇನನು ಅವರಿಗೆ, “ಆ ಹುಡುಗನಿಗೆ ಕೇಡು ಮಾಡಬೇಡಿ ಎಂದು ನಾನು ನಿಮಗೆ ಹೇಳಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ. ಆದ್ದರಿಂದ ಈಗ ನಾವು ಅವನ ಮರಣಕ್ಕೆ ತಕ್ಕ ಶಿಕ್ಷೆ ಹೊಂದುತ್ತಿದ್ದೇವೆ” ಎಂದು ಹೇಳಿದನು.


ಆದ್ದರಿಂದ ಜನರ ಮಾತಿಗೆ ಕಿವಿಗೊಟ್ಟು ಅವರು ಹೇಳಿದಂತೆ ಮಾಡು. ಆದರೆ ಅವರಿಗೆ ಎಚ್ಚರಿಕೆಕೊಡು. ರಾಜನಾದವನು ಜನರಿಗೆ ಏನು ಮಾಡುತ್ತಾನೆ ಎಂಬುದನ್ನು ಅವರಿಗೆ ತಿಳಿಸಿ ಹೇಳು! ರಾಜನಾದವನು ಜನರನ್ನು ಹೇಗೆ ಆಳುತ್ತಾನೆಂಬುದನ್ನೂ ಅವರಿಗೆ ತಿಳಿಸಿಕೊಡು” ಎಂದು ಹೇಳಿದನು.


“ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು: ‘ಒಬ್ಬನು ಒಳ್ಳೆಯವನಾಗಿದ್ದುಕೊಂಡು ನಂತರ ದುಷ್ಟತನವನ್ನು ನಡಿಸಿದರೆ ಅವನ ಸತ್ಕಾರ್ಯಗಳು ಅವನನ್ನು ರಕ್ಷಿಸಲಾರವು. ಒಬ್ಬನು ದುಷ್ಕೃತ್ಯಗಳನ್ನು ಮಾಡಿ ತನ್ನ ದುಷ್ಟತ್ವದಿಂದ ತಿರುಗಿದರೆ ಅವನು ನಾಶವಾಗುವದಿಲ್ಲ. ಆದ್ದರಿಂದ ಹಿಂದೆ ಮಾಡಿದ್ದ ಪುಣ್ಯಕಾರ್ಯಗಳು ಒಬ್ಬ ಪಾಪಿಯನ್ನು ರಕ್ಷಿಸಲಾರದೆಂಬುದನ್ನು ಜ್ಞಾಪಕದಲ್ಲಿಟ್ಟುಕೊ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು