ಯೆಹೆಜ್ಕೇಲನು 3:19 - ಪರಿಶುದ್ದ ಬೈಬಲ್19 “ಒಂದುವೇಳೆ ನೀನು ಒಬ್ಬ ದುಷ್ಟಮನುಷ್ಯನನ್ನು ಎಚ್ಚರಿಸಿ ಅವನು ಪಾಪ ಮಾಡದಂತೆ ಮತ್ತು ಅವನ ಜೀವಿತವನ್ನು ಬದಲಾವಣೆ ಮಾಡಲು ಹೇಳಿದ್ದಲ್ಲಿ ಆ ಮನುಷ್ಯನು ನಿನ್ನ ಮಾತುಗಳನ್ನು ಕೇಳಲು ನಿರಾಕರಿಸಿದರೆ, ಅವನು ಪಾಪ ಮಾಡುವುದರಿಂದ ಸಾಯುವನು. ಆದರೆ ನೀನು ನಿನ್ನ ಜೀವವನ್ನು ರಕ್ಷಿಸಿಕೊಳ್ಳುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀನು ದುಷ್ಟನನ್ನು ಎಚ್ಚರಿಸಿದರೂ, ಅವನು ತನ್ನ ದುಷ್ಟತನವನ್ನೂ, ಕೆಟ್ಟಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನೀನು ಆ ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ ದುರ್ಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧಕ್ಕಾಗಿ ಸಾಯುವನು; ನೀನಾದರೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀನು ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ ದುರ್ಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದರೆ ನೀನು ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ, ದುರ್ಮಾರ್ಗವನ್ನೂ ಬಿಟ್ಟು ತಿರುಗಿಕೊಳ್ಳದೆ ಹೋದರೆ, ಅವನು ತನ್ನ ಪಾಪಗಳಿಂದಲೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ. ಅಧ್ಯಾಯವನ್ನು ನೋಡಿ |
ನಾನು ದುಷ್ಟನಿಗೆ, ‘ನೀನು ಸಾಯುವೆ’ ಎಂದು ಹೇಳುವಾಗ, ನೀನು ಅವನನ್ನು ಎಚ್ಚರಿಸಬೇಕು. ಅವನು ತನ್ನ ಪ್ರಾಣವನ್ನು ರಕ್ಷಿಸಿಕೊಳ್ಳುವದಕ್ಕಾಗಿ ತನ್ನ ಜೀವಿತವನ್ನು ಮಾರ್ಪಡಿಸಿಕೊಂಡು ದುಷ್ಕೃತ್ಯ ನಿಲ್ಲಿಸಬೇಕೆಂದು ನೀನು ಅವನಿಗೆ ಹೇಳಬೇಕು. ನೀನು ಅವನನ್ನು ಎಚ್ಚರಿಸದಿದ್ದರೆ ಅವನು ತನ್ನ ಪಾಪದ ದೆಸೆಯಿಂದ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೇ ಹೊಣೆಗಾರನನ್ನಾಗಿ ಮಾಡುತ್ತೇನೆ.