ಯೆಹೆಜ್ಕೇಲನು 3:20 - ಪರಿಶುದ್ದ ಬೈಬಲ್20 “ಒಳ್ಳೆಯವನು ತನ್ನ ಒಳ್ಳೆಯತನವನ್ನು ತೊರೆದು ಕೆಟ್ಟದ್ದನ್ನು ಮಾಡಿದರೆ, ನಾನು ಅವನ ಹಾದಿಗೆ ತಡೆಯನ್ನು ಹಾಕಿ ಅವನು ಬೀಳುವಂತೆ ಮಾಡುವೆನು; ಅವನು ಸಾಯುವನು. ನೀನು ಅವನನ್ನು ಎಚ್ಚರಿಸಲಿಲ್ಲವಾದ್ದರಿಂದ ಅವನು ತನ್ನ ಪಾಪದ ನಿಮಿತ್ತ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೆ ಹೊಣೆಗಾರನನ್ನಾಗಿ ಮಾಡುತ್ತೇನೆ. ಜನರು ಅವನ ಒಳ್ಳೆಯ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇದಲ್ಲದೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯಮಾಡುವವನಾದರೆ, ಆಗ ನಾನು ಅವನ ಮುಂದೆ ಅಡಚಣೆಯನ್ನು ಒಡ್ಡುವೆನು, ಎಡವಿದರೆ ಅವನು ಸಾಯುವನು; ನೀನು ಅವನನ್ನು ಎಚ್ಚರಿಸದೆ ಹೋದಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಒಳ್ಳೆಕಾರ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಮರಣಕ್ಕೆ ನೀನು ಹೊಣೆಯಾಗುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇದಲ್ಲದೆ, ಸಜ್ಜನನೊಬ್ಬನು ತನ್ನ ಸನ್ನಡತೆಯನ್ನು ಬಿಟ್ಟು ಅಧರ್ಮಮಾಡುವಲ್ಲಿ, ನಾನು ಅವನ ಮುಂದೆ ಒಡ್ಡುವ ಆತಂಕವನ್ನು ಎಡವಿ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆಬಾರವು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇದಲ್ಲದೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ನಾನು ಅವನ ಮುಂದೆ ಒಡ್ಡಿದ ಆಟಂಕವನ್ನು ಎಡವಿದರೆ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆ ಬಾರವು; ಅವನ ಮರಣಕ್ಕಾಗಿ ನಿನಗೇ ಮುಯ್ಯಿತೀರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡತಡೆಯನ್ನು ಇಡುವೆನು, ಅವನು ಸಾಯುವನು. ನೀನು ಅವನನ್ನು ಎಚ್ಚರಿಸದೆ ಇದ್ದುದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು. ಅವನು ಮಾಡಿರುವ ಸುಕೃತ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಸಾವಿಗೆ ನೀನೇ ಹೊಣೆಯಾಗುವೆ. ಅಧ್ಯಾಯವನ್ನು ನೋಡಿ |
ನಾನು ದುಷ್ಟನಿಗೆ, ‘ನೀನು ಸಾಯುವೆ’ ಎಂದು ಹೇಳುವಾಗ, ನೀನು ಅವನನ್ನು ಎಚ್ಚರಿಸಬೇಕು. ಅವನು ತನ್ನ ಪ್ರಾಣವನ್ನು ರಕ್ಷಿಸಿಕೊಳ್ಳುವದಕ್ಕಾಗಿ ತನ್ನ ಜೀವಿತವನ್ನು ಮಾರ್ಪಡಿಸಿಕೊಂಡು ದುಷ್ಕೃತ್ಯ ನಿಲ್ಲಿಸಬೇಕೆಂದು ನೀನು ಅವನಿಗೆ ಹೇಳಬೇಕು. ನೀನು ಅವನನ್ನು ಎಚ್ಚರಿಸದಿದ್ದರೆ ಅವನು ತನ್ನ ಪಾಪದ ದೆಸೆಯಿಂದ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೇ ಹೊಣೆಗಾರನನ್ನಾಗಿ ಮಾಡುತ್ತೇನೆ.