Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:24 - ಪರಿಶುದ್ದ ಬೈಬಲ್‌

24 ಆಗ ಆತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಕಾಲೂರಿ ನಿಂತುಕೊಳ್ಳುವಂತೆ ಮಾಡಿತು. ಬಳಿಕ ಆತನು ನನಗೆ, “ನೀನು ನಿನ್ನ ಮನೆಯೊಳಗೆ ಹೋಗಿ ಒಳಗಿನಿಂದ ಕದವನ್ನು ಹಾಕಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ದೇವರಾತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಎದ್ದು ನಿಂತುಕೊಳ್ಳುವಂತೆ ಮಾಡಿದ ಮೇಲೆ ಆತನು ನನಗೆ ಹೀಗೆ ಹೇಳಿದನು, “ನೀನು ಹೋಗಿ ನಿನ್ನ ಮನೆಯೊಳಗೆ ಅಡಗಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ದೇವರಾತ್ಮ ನನ್ನೊಳಗೆ ಹೊಕ್ಕು ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು. ಆಮೇಲೆ ಅವರು ನನಗೆ ಹೀಗೆ ಹೇಳಿದರು: ನೀನು ಹೋಗಿ ನಿನ್ನ ಮನೆಯೊಳಗೆ ಅಡಗಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ದೇವರಾತ್ಮವು ನನ್ನೊಳಗೆ ಹೊಕ್ಕು ನಾನು ಎದ್ದು ನಿಂತುಕೊಳ್ಳುವಂತೆ ಮಾಡಿದ ಮೇಲೆ ಆತನು ನನಗೆ ಹೀಗೆ ಹೇಳಿದನು - ನೀನು ಹೋಗಿ ನಿನ್ನ ಮನೆಯೊಳಗೆ ಅಡಗಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಮೇಲೆ ದೇವರಾತ್ಮ ನನ್ನೊಳಗೆ ಪ್ರವೇಶಿಸಿ, ನನ್ನನ್ನು ನನ್ನ ಪಾದದ ಮೇಲೆ ನಿಲ್ಲಿಸಿ ಮಾತನಾಡಿ, ನನಗೆ ಹೇಳಿದ್ದೇನೆಂದರೆ, “ಹೋಗು, ನಿನ್ನ ಮನೆಯಲ್ಲಿ ನೀನು ಅಡಗಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:24
6 ತಿಳಿವುಗಳ ಹೋಲಿಕೆ  

ಆತನು ನನ್ನೊಂದಿಗೆ ಮಾತನಾಡುತ್ತಿರಲು, ಆತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಕಾಲೂರಿ ನಿಂತುಕೊಳ್ಳುವಂತೆ ಮಾಡಿತು. ಆತನು ನನ್ನೊಂದಿಗೆ ಮಾತಾಡುವುದು ನನಗೆ ಕೇಳಿಸಿತು.


ಆಗ ಆತನು “ದಾನಿಯೇಲನೇ, ಭಯಪಡಬೇಡ. ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ಸಮಾಧಾನ ತಂದುಕೊ. ಈಗ ನೀನು ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಆತನು ನನ್ನೊಂದಿಗೆ ಮಾತನಾಡಿದ ಮೇಲೆ ನನಗೆ ಬಲಬಂದಿತು. ಆಗ ನಾನು, “ಸ್ವಾಮೀ, ನೀವು ನನಗೆ ಬಲವನ್ನು ನೀಡಿದಿರಿ. ಈಗ ನೀವು ಮಾತನಾಡಬಹುದು” ಎಂದು ಹೇಳಿದೆ.


ನಾನು ಯೆಹೋವನ ಪರವಾಗಿ ಗಾಳಿಗೆ ಆತನು ಹೇಳಿದಂತೆಯೇ ಹೇಳಿದೆನು. ಆಗ ನಿರ್ಜೀವ ದೇಹಗಳೊಳಗೆ ಶ್ವಾಸವು ಹೊಕ್ಕಿತು. ಅವುಗಳಿಗೆ ಜೀವಬಂದು ನಿಂತುಕೊಂಡವು. ಅಲ್ಲಿ ಅನೇಕ ಜನರಿದ್ದರು. ಒಂದು ದೊಡ್ಡ ಸೈನ್ಯದ ತರಹ ಜನಸಮೂಹವು ಅಲ್ಲಿತ್ತು.


ತಮಾಷೆ ಮಾಡಿಕೊಂಡು ನಗುತ್ತಲಿದ್ದ ಗುಂಪಿನಲ್ಲಿ ನಾನೆಂದೂ ಸೇರಲಿಲ್ಲ. ನನ್ನ ಮೇಲೆ ಆದ ನಿನ್ನ ಪ್ರಭಾವದಿಂದ ನಾನೊಬ್ಬನೇ ಕುಳಿತುಕೊಂಡಿರುತ್ತಿದ್ದೆ. ನನ್ನ ಸುತ್ತಮುತ್ತಲಿನ ದುಷ್ಟತನದ ಮೇಲೆ ನನ್ನಲ್ಲಿ ರೋಷವನ್ನು ತುಂಬಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು