ಯೆಹೆಜ್ಕೇಲನು 3:26 - ಪರಿಶುದ್ದ ಬೈಬಲ್26 ನಿನ್ನ ನಾಲಿಗೆಯು ಸೇದಿ ಹೋಗುವಂತೆ ಮಾಡುವೆನು. ನಿನಗೆ ಮಾತನಾಡಲು ಆಗದು. ಆದ್ದರಿಂದ ಅವರನ್ನು ಖಂಡಿಸಲು ಯಾರೂ ಇರುವದಿಲ್ಲ. ಯಾಕೆಂದರೆ ಆ ಜನರು ಯಾವಾಗಲೂ ನನ್ನ ವಿರುದ್ಧವಾಗಿ ವರ್ತಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಇದಲ್ಲದೆ ನಿನ್ನ ನಾಲಿಗೆಯು ಸೇದಿ ಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ನೀನು ಅವರನ್ನು ಖಂಡಿಸಲಾರೆ; ಅವರು ತಿರುಗಿ ಬೀಳುವ ಮನೆತನದವರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಇದಲ್ಲದೆ, ನಿನ್ನ ನಾಲಿಗೆ ಸೇದಿಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ದ್ರೋಹಿವಂಶದವರಾದ ಅವರನ್ನು ನೀನು ಖಂಡಿಸಲು ಸಾಧ್ಯವಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಇದಲ್ಲದೆ ನಿನ್ನ ನಾಲಿಗೆಯು ಸೇದಿಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ನೀನು ಅವರನ್ನು ಖಂಡಿಸದಿರುವಿ; ಅವರು ದ್ರೋಹಿವಂಶದವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇದಲ್ಲದೆ ನಾನು ನಿನ್ನ ನಾಲಿಗೆ ಸೇದಿ ಹೋಗುವಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವವನಾಗಲಾರೆ. ಅವರು ತಿರುಗಿಬೀಳುವ ಜನರಾಗಿದ್ದಾರೆ. ಅಧ್ಯಾಯವನ್ನು ನೋಡಿ |