Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:5 - ಪರಿಶುದ್ದ ಬೈಬಲ್‌

5 ನೀನು ಕಷ್ಟಕರವಾದ ಭಾಷೆಯನ್ನು ಅರ್ಥಮಾಡಿಕೊಳ್ಳುವುದಕ್ಕಾಗಲಿ ಮಾತನಾಡುವುದಕ್ಕಾಗಲಿ ಪರದೇಶಿಯರ ಬಳಿಗೆ ನಾನು ಕಳುಹಿಸುತ್ತಿಲ್ಲ. ನಾನು ಇಸ್ರೇಲ್ ವಂಶದವರ ಬಳಿಗೆ ನಿನ್ನನ್ನು ಕಳುಹಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಬಳಿಗೆ ಕಳುಹಿಸುತ್ತೇನೆಯೇ ಹೊರತು ಕಷ್ಟಕರವಾದ ಅನ್ಯಭಾಷೆಯ ಜನರ ಬಳಿಗೆ ಕಳುಹಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಾನು ನಿನ್ನನ್ನು ಇಸ್ರಯೇಲ್ ವಂಶದವರ ಬಳಿಗೆ ಕಳುಹಿಸುತ್ತೇನೆಯೇ ಹೊರತು ಕಷ್ಟಕರವಾದ ಅನ್ಯಭಾಷೆಯನ್ನಾಡುವ ಜನರ ಬಳಿಗೆ ಕಳುಹಿಸುತ್ತಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಬಳಿಗೆ ಕಳುಹಿಸುತ್ತೇನೆಯೇ ಹೊರತು ಕಷ್ಟಕರವಾದ ಅನ್ಯಭಾಷೆಯ ಜನರ ಬಳಿಗೆ ಕಳುಹಿಸುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿನ್ನನ್ನು ಅಸ್ಪಷ್ಟ ಭಾಷೆಯ ಮತ್ತು ಅನ್ಯಭಾಷೆಯ ಜನರ ಬಳಿಗೆ ಕಳುಹಿಸದೆ, ಇಸ್ರಾಯೇಲಿನ ಜನರ ಬಳಿಗೆ ಕಳುಹಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:5
10 ತಿಳಿವುಗಳ ಹೋಲಿಕೆ  

“ನಿನೆವೆಯು ಮಹಾದೊಡ್ಡ ನಗರ. ಅಲ್ಲಿಯ ಜನರ ಅನೇಕ ತರದ ದುಷ್ಕೃತ್ಯಗಳನ್ನು ನೋಡಿದ್ದೇನೆ. ಆದ್ದರಿಂದ ನೀನು ಆ ನಗರಕ್ಕೆ ಹೋಗಿ ಅಲ್ಲಿಯ ಜನರಿಗೆ ದುಷ್ಟತನವನ್ನು ನಿಲ್ಲಿಸಿರಿ ಎಂದು ಹೇಳು.”


ಭಾಷೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟಕರವಾದ ಅಥವಾ ಮಾತಾಡಲು ಕಷ್ಟವಾದ ಅಥವಾ ಪದಗಳನ್ನು ಅರ್ಥಮಾಡಿಕೊಳ್ಳಲು ನಿನಗೆ ಸಾಧ್ಯವಾಗದ ಅನೇಕ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತಿಲ್ಲ. ಆ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸಿದರೆ ಅವರು ಖಂಡಿತವಾಗಿಯೂ ಕಿವಿಗೊಡುವರು.


ಯೆಹೋವನು ಅವರ ಸಂಗಡ ವಿಚಿತ್ರವಾಗಿಯೂ ಅನ್ಯಭಾಷೆಗಳಲ್ಲಿಯೂ ಮಾತನಾಡುತ್ತಾನೆ.


ಆತನು ಯೋಸೇಫನನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಾಗ ಅವನೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡನು. ಈಜಿಪ್ಟಿನಲ್ಲಿ ನಾವು ಕೇಳಿದ್ದು ನಮಗೆ ಅರ್ಥವಾಗದ ಭಾಷೆಯನ್ನೇ!


ಪೌಲನು ಮಾಡಿದ ಈ ಕಾರ್ಯವನ್ನು ಕಂಡ ಜನರು ತಮ್ಮ ಸ್ವಂತ ಲುಕವೋನಿಯ ಭಾಷೆಯಲ್ಲಿ “ದೇವರುಗಳು ಮನುಷ್ಯರೂಪ ಧರಿಸಿ ನಮ್ಮ ಬಳಿಗೆ ಇಳಿದು ಬಂದಿದ್ದಾರೆ!” ಎಂದು ಆರ್ಭಟಿಸಿದರು.


ಆಗ ದೇವರು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇಸ್ರೇಲ್ ವಂಶದವರ ಬಳಿಗೆ ಹೋಗಿ ನನ್ನ ಮಾತುಗಳನ್ನು ಅವರಿಗೆ ತಿಳಿಸು.


ಆಗ ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಪ್ರಾಕಾರಕ್ಕೆ ತಂದಿತು. ಯೆಹೋವನ ಮಹಿಮೆಯು ಆಲಯವನ್ನು ತುಂಬಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು