Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:1 - ಪರಿಶುದ್ದ ಬೈಬಲ್‌

1 ತಿರುಗಿ ಯೆಹೋವನ ಸಂದೇಶ ನನಗೆ ಬಂತು, ಆತನು ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸಿದರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ವಾಕ್ಯವು ನನಗೆ ಬಂದಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:1
9 ತಿಳಿವುಗಳ ಹೋಲಿಕೆ  

ಯೆಹೋಯಾಖೀನನು ಸೆರೆಹಿಡಿಯಲ್ಪಟ್ಟ ಇಪ್ಪತ್ತೇಳನೇ ವರ್ಷದ, ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆಹೋವನ ಮಾತುಗಳು ನನಗೆ ಬಂದವು. ಆತನು ಹೇಳಿದ್ದೇನೆಂದರೆ,


“ಆ ದಿವಸದಲ್ಲಿ ಇಸ್ರೇಲ್ ವಂಶವನ್ನು ನಾನು ಬಲಪಡಿಸುವೆನು. ಯೆಹೆಜ್ಕೇಲನೇ, ನೀನು ಅವರೊಂದಿಗೆ ಮಾತನಾಡುವಂತೆ ಮಾಡುವೆನು. ಆಗ ಅವರು ನಾನೇ ಯೆಹೋವನೆಂದು ತಿಳಿದುಕೊಳ್ಳುವರು.”


“ನರಪುತ್ರನೇ, ನನ್ನ ಪರವಾಗಿ ಮಾತನಾಡು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ’ ಎಂದು ಹೇಳು. “‘ಅಳುತ್ತಾ, “ಭಯಂಕರ ದಿವಸಗಳು ಬರುತ್ತವೆ” ಎಂದು ಹೇಳು.


ಆ ಸಮಯದಲ್ಲಿ ಈಜಿಪ್ಟಿನ ಮಧ್ಯದಲ್ಲಿ ಯೆಹೋವನಿಗಾಗಿ ಒಂದು ವೇದಿಕೆ ಇರುವದು. ಈಜಿಪ್ಟಿನ ಗಡಿಯಲ್ಲಿ ಯೆಹೋವನ ಗೌರವಾರ್ಥವಾಗಿ ಸ್ಮಾರಕಸ್ತಂಭ ಇರುವದು.


ತಹಪನೇಸ್ ಊರಿನಲ್ಲಿ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಬಂದಿತು:


ನೆಬೂಕದ್ನೆಚ್ಚರನು ಇಲ್ಲಿಗೆ ಬಂದು ಈಜಿಪ್ಟಿನ ಮೇಲೆ ಧಾಳಿ ಮಾಡುವನು. ಕೊಲ್ಲಬೇಕೆಂದು ಗೊತ್ತುಮಾಡಿದವರನ್ನು ಕೊಂದುಹಾಕುವನು; ಸೆರೆಹಿಡಿಯಬೇಕೆಂದು ಗೊತ್ತು ಮಾಡಿಕೊಂಡವರನ್ನು ಸೆರೆಹಿಡಿಯುವನು; ಖಡ್ಗದಿಂದ ಕೊಲೆಯಾಗಬೇಕೆಂದು ಗೊತ್ತುಪಡಿಸಿದವರ ಸಲುವಾಗಿ ಅವನು ಖಡ್ಗವನ್ನು ತರುವನು.


ಈ ಸಂದೇಶಗಳು ಪ್ರವಾದಿಯಾದ ಯೆರೆಮೀಯನಿಗೆ ಬಂದವು. ಈ ಸಂದೇಶಗಳು ವಿವಿಧ ಜನಾಂಗಗಳ ಬಗ್ಗೆ ಇವೆ.


“ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನ ಕಡೆಗೆ ಮುಖಮಾಡು. ಅವನಿಗೂ ಈಜಿಪ್ಟಿಗೂ ವಿರುದ್ಧವಾಗಿ ನನ್ನ ಪರವಾಗಿ ಮಾತನಾಡು.


“ಫರೋಹನು ತನ್ನ ಕಾಲದಲ್ಲಿ ಜನರನ್ನು ಭಯಗೊಳಿಸಿದ್ದನು. ಈಗಲಾದರೋ, ಫರೋಹನೂ ಅವನ ಸೈನಿಕರೂ ಪರದೇಶದವರೊಂದಿಗೆ ಮತ್ತು ಯುದ್ಧದಲ್ಲಿ ಹತರಾದವರೊಂದಿಗೆ ಬಿದ್ದುಕೊಳ್ಳುವರು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು