Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:10 - ಪರಿಶುದ್ದ ಬೈಬಲ್‌

10 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ; “ಈಜಿಪ್ಟಿನ ಜನರನ್ನು ನಾಶಮಾಡುವುದಕ್ಕಾಗಿ ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಉಪಯೋಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಐಗುಪ್ತದ ಅಸಂಖ್ಯಾತ ಪ್ರಜೆಯನ್ನು ಕೊನೆಗಾಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಯಿಂದ ಈಜಿಪ್ಟಿನ ಅಸಂಖ್ಯಾತ ಪ್ರಜೆಯನ್ನು ಕೊನೆಗಾಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಐಗುಪ್ತದ ಅಸಂಖ್ಯಾತಪ್ರಜೆಯನ್ನು ಕೊನೆಗಾಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ : “ ‘ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಈಜಿಪ್ಟಿನ ಜನಸಮೂಹವನ್ನು ಕೊನೆಗಾಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:10
8 ತಿಳಿವುಗಳ ಹೋಲಿಕೆ  

ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ರಾಜನಾದ ನೆಬೂಕದ್ನೆಚ್ಚರನಿಗೆ ನಾನು ಈಜಿಪ್ಟ್ ದೇಶವನ್ನು ಕೊಡುವೆನು. ನೆಬೂಕದ್ನೆಚ್ಚರನು ಈಜಿಪ್ಟಿನವರನ್ನು ಸೆರೆಹಿಡಿದು ಕೊಂಡೊಯ್ವನು. ಈಜಿಪ್ಟಿನ ಬೆಲೆಬಾಳುವ ವಸ್ತುಗಳನ್ನೆಲ್ಲಾ ದೋಚುವನು. ಇದು ಅವನ ಸೈನಿಕರ ಸಂಬಳವಾಗುವುದು.


“ನರಪುತ್ರನೇ, ಇದನ್ನು ಈಜಿಪ್ಟಿನ ರಾಜನಾದ ಫರೋಹನಿಗೂ ಅವನ ಜನರಿಗೂ ಹೇಳು: “‘ನೀನು ಅತ್ಯಂತ ಪ್ರಭಾವಶಾಲಿ, ನಿನ್ನನ್ನು ಯಾರಿಗೆ ಹೋಲಿಸಲಿ?


ಆಗ ನಾನು ಒಬ್ಬ ಬಲಾಢ್ಯನಾದ ರಾಜನು ಬಂದು ಆ ಮರವನ್ನು ತೆಗೆದುಕೊಳ್ಳುವಂತೆ ಮಾಡಿದೆನು. ಆ ರಾಜನು ಮರವು ಮಾಡಿದ ದುಷ್ಕೃತ್ಯಗಳಿಗಾಗಿ ಅದನ್ನು ಶಿಕ್ಷಿಸಿದನು. ಆ ಮರವನ್ನು ನಾನು ನನ್ನ ತೋಟದಿಂದ ತೆಗೆದು ಹಾಕಿದೆನು.


ನೆಬೂಕದ್ನೆಚ್ಚರನು ಇಲ್ಲಿಗೆ ಬಂದು ಈಜಿಪ್ಟಿನ ಮೇಲೆ ಧಾಳಿ ಮಾಡುವನು. ಕೊಲ್ಲಬೇಕೆಂದು ಗೊತ್ತುಮಾಡಿದವರನ್ನು ಕೊಂದುಹಾಕುವನು; ಸೆರೆಹಿಡಿಯಬೇಕೆಂದು ಗೊತ್ತು ಮಾಡಿಕೊಂಡವರನ್ನು ಸೆರೆಹಿಡಿಯುವನು; ಖಡ್ಗದಿಂದ ಕೊಲೆಯಾಗಬೇಕೆಂದು ಗೊತ್ತುಪಡಿಸಿದವರ ಸಲುವಾಗಿ ಅವನು ಖಡ್ಗವನ್ನು ತರುವನು.


ನಿನಗೆ ವಿರುದ್ಧವಾಗಿ ಯುದ್ಧ ಮಾಡಲು ಅಪರಿಚಿತರನ್ನು ಕರೆತರುವೆನು. ಅವರು ಎಲ್ಲಾ ಜನಾಂಗಗಳವರಿಗಿಂತ ಕ್ರೂರರು, ಅವರು ತಮ್ಮ ಖಡ್ಗವನ್ನು ಎಳೆದು ನಿನ್ನ ಜ್ಞಾನದಿಂದ ಕೊಂಡುಕೊಂಡಿದ್ದ ಎಲ್ಲಾ ಬೆಲೆಬಾಳುವ ಅಪೂರ್ವ ವಸ್ತುಗಳನ್ನು ನಾಶಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು