Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:3 - ಪರಿಶುದ್ದ ಬೈಬಲ್‌

3 ಆ ದಿನವು ಹತ್ತಿರ ಬಂತು! ಹೌದು, ದೇವರು ನ್ಯಾಯತೀರಿಸುವ ದಿನ ಹತ್ತಿರ ಬಂತು. ಅದು ಮೋಡ ಕವಿದ ದಿನವಾಗಿರುವುದು. ಅದು ಜನಾಂಗಗಳಿಗೆ ನ್ಯಾಯತೀರಿಸುವ ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದಿನವು ಹತ್ತಿರವಾಯಿತು! ಹೌದು, ಯೆಹೋವನ ದಿನವು, ಕಾರ್ಮುಗಿಲಿನ ದಿನವು ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೌದು, ಸಮೀಪಿಸಿತು ಸರ್ವೇಶ್ವರನ ದಿನ, ಕಾರ್ಮುಗಿಲ ದಿನ ಅದು ರಾಷ್ಟ್ರಗಳಿಗೆ ನ್ಯಾಯತೀರಿಸತಕ್ಕ ಕಾಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದಿನವು ಹತ್ತಿರವಾಯಿತು; ಹೌದು, ಯೆಹೋವನ ದಿನ, ಕಾರ್ಮುಗಿಲಿನ ದಿನ ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯ ತೀರಿಸತಕ್ಕ ಕಾಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಆ ದಿನವು ಸಮೀಪವಾಯಿತು, ಯೆಹೋವ ದೇವರ ದಿನವು, ಆ ಕಾರ್ಮುಗಿಲಿನ ದಿನವು ಸಮೀಪವಾಯಿತು. ಅದೇ ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:3
35 ತಿಳಿವುಗಳ ಹೋಲಿಕೆ  

ಎಲ್ಲಾ ಜನಾಂಗಗಳವರಿಗೆ ಯೆಹೋವನ ದಿನವು ಬೇಗನೇ ಬರುವದು. ನೀನು ಬೇರೆಯವರಿಗೆ ಮಾಡಿದ ದುಷ್ಕೃತ್ಯಗಳನ್ನು ಅವರು ನಿನ್ನ ಮೇಲೆಯೇ ನಡೆಸುವರು. ಅದೇ ದುಷ್ಕೃತ್ಯಗಳು ನಿನ್ನ ತಲೆ ಮೇಲೆ ಬೀಳುವವು.


ತಪ್ಪಿಹೋದ ಕುರಿಗಳಿಗಾಗಿ ಹುಡುಕುವ ಕುರುಬನಂತೆ ನನ್ನ ಕುರಿಗಳನ್ನು ಹುಡುಕಿ ರಕ್ಷಿಸುವೆನು. ಮೋಡ ಕವಿದ ಕಾರ್ಗತ್ತಲೆಯ ದಿನದಲ್ಲಿ ತಪ್ಪಿಸಿಕೊಂಡ ಅವುಗಳನ್ನು ಹುಡುಕಿ ತರುವೆನು.


ನಾನು ಈಜಿಪ್ಟಿನ ನೊಗವನ್ನು ಮುರಿದಾಗ ತಹಪನೇಸ್‌ನಲ್ಲಿ ಕತ್ತಲೆಯ ದಿನವಾಗಿರುವುದು. ಈಜಿಪ್ಟಿನ ಅಧಿಕಾರಕ್ಕೆ ಅಂತ್ಯ ಬರುವುದು. ಈಜಿಪ್ಟಿನ ಮೇಲೆ ಮೋಡವು ಕವಿಯುವುದು. ಅದರ ಪಟ್ಟಣಗಳ ಜನರು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು.


“ಆ ಶಿಕ್ಷೆಯ ಸಮಯವು ಬಂತು. ಆ ದಿವಸವು ಇಲ್ಲಿಯೇ ಇದೆ. ವಸ್ತುಗಳನ್ನು ಕೊಂಡುಕೊಳ್ಳುವ ಜನರು ಸಂತೋಷಪಡಕೂಡದು. ವಸ್ತುಗಳನ್ನು ಮಾರುವವರು ಮಾರುವದಕ್ಕೆ ದುಃಖಿಸಕೂಡದು. ಯಾಕೆಂದರೆ ಆ ಭಯಂಕರ ಶಿಕ್ಷೆಯು ಎಲ್ಲರಿಗೂ ಉಂಟಾಗುವುದು.


ಇಸ್ರೇಲ್ ದೇಶದಲ್ಲಿ ವಾಸಿಸುವ ಜನರೇ, ನಿಮಗೆ ಆಪತ್ತು ಬರುವುದು, ಸಮಯವು ಬರುತ್ತಿದೆ. ದಿನವು ಸಮೀಪಿಸಿದೆ. ಬೆಟ್ಟಗಳ ಮೇಲೆ ಆನಂದ ಬೋಷಗಳ ಬದಲು ಯುದ್ಧದ ಕೂಗಾಟಗಳು ಇರುತ್ತವೆ.


ಯೆಹೋವನ ನ್ಯಾಯತೀರ್ಪಿನ ದಿನವು ಬೇಗನೇ ಬರುತ್ತದೆ; ಅತ್ಯಂತ ವೇಗವಾಗಿ ಬರುತ್ತಿದೆ. ಆ ದಿನದಂದು ಜನರು ಬಹಳವಾಗಿ ದುಃಖಿಸುವರು. ಧೈರ್ಯಶಾಲಿಗಳಾದ ಸೈನಿಕರೂ ಅಳುವರು.


ದೇವರಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ. ಯಾಕೆಂದರೆ ಯೆಹೋವನು ಜನರಿಗೆ ನ್ಯಾಯತೀರಿಸುವ ದಿನವು ಹತ್ತಿರವಾಯಿತು. ಯೆಹೋವನು ತನ್ನ ಯಜ್ಞವನ್ನು ತಯಾರು ಮಾಡಿ ತನ್ನ ಆಮಂತ್ರಿತರನ್ನು ಸಿದ್ಧವಾಗಿರಲು ಹೇಳಿದ್ದಾನೆ.


ಶೋಕಿಸಿರಿ. ಯಾಕೆಂದರೆ ಯೆಹೋವನ ಮಹಾದಿನವು ಹತ್ತಿರ ಬಂತು. ಆ ಸಮಯದಲ್ಲಿ ಸರ್ವಶಕ್ತನಾದ ದೇವರ ಸನ್ನಿಧಾನದಿಂದ ದಂಡನೆಯು ಬರುವುದು.


ನೀನು ಕಾಣೆಯಾಗುವಂತೆ ನಾನು ಮಾಡುವೆನು. ಆಕಾಶವನ್ನು ಮುಚ್ಚಿ ನಕ್ಷತ್ರಗಳನ್ನು ಹೊಳೆಯದಂತೆ ಮಾಡುವೆನು. ಸೂರ್ಯನನ್ನು ಮೋಡವು ಮುಚ್ಚುವಂತೆ ಮಾಡುವೆನು. ಚಂದ್ರನು ಪ್ರಕಾಶಿಸದಂತೆ ಮಾಡುವೆನು.


ಆತನ ಕೋಪವು ಪ್ರಕಟವಾಗುವ ಮಹಾದಿನವು ಬಂದುಬಿಟ್ಟಿದೆ. ಆ ಕೋಪದ ಎದುರಿನಲ್ಲಿ ನಿಲ್ಲಲು ಯಾರಿಗೂ ಸಾಧ್ಯವಿಲ್ಲ” ಎಂದು ಹೇಳಿದರು.


ಸಹೋದರ ಸಹೋದರಿಯರೇ, ಒಬ್ಬರ ಮೇಲೊಬ್ಬರು ದೂರದಿರಿ. ನೀವು ದೂರುವುದನ್ನು ನಿಲ್ಲಿಸದಿದ್ದರೆ ದೋಷಿಗಳೆಂದು ನಿಮಗೆ ತೀರ್ಪು ನೀಡಲಾಗುವುದು. ನ್ಯಾಯಧಿಪತಿಯು ಬರಲು ಸಿದ್ಧನಾಗಿದ್ದಾನೆ!


ನಿಮ್ಮ ಮೃದುಸ್ವಭಾವವನ್ನೂ ಕರುಣೆಯನ್ನೂ ಜನರೆಲ್ಲರೂ ನೋಡುವಂತಾಗಲಿ. ಪ್ರಭುವು ಬೇಗನೆ ಬರುತ್ತಾನೆ.


ನಾನು ನಿಮಗೆ ಹೇಳಿದ ಈ ಸಂಗತಿಗಳಿಗೂ ಅದು ಅನ್ವಯಿಸುತ್ತದೆ. ಈ ಸಂಗತಿಗಳೆಲ್ಲಾ ಸಂಭವಿಸುತ್ತಿರುವುದನ್ನು ನೀವು ನೋಡುವಾಗ ಆ ಸಮಯ ಹತ್ತಿರವಾಯಿತೆಂದೂ ಬರುವುದಕ್ಕೆ ಸಿದ್ಧವಾಗಿದೆಯೆಂದೂ ತಿಳಿದುಕೊಳ್ಳುವಿರಿ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ.


ನಾನು ಈಜಿಪ್ಟನ್ನು ನಾಶಮಾಡುತ್ತೇನೆ. ಅದರ ನಗರಗಳು ನಲವತ್ತು ವರ್ಷಗಳ ತನಕ ನಿರ್ಜನವಾಗಿರುವದು. ಈಜಿಪ್ಟ್ ಜನರನ್ನು ಬೇರೆ ದೇಶಗಳಿಗೆ ಅಟ್ಟಿಬಿಡುವೆನು. ಪರದೇಶಗಳಲ್ಲಿ ಅವರು ಪ್ರವಾಸಿಗಳಂತಿರುವರು.”


ಅವರು ತಮ್ಮ ಬೆಳ್ಳಿಯ ವಿಗ್ರಹಗಳನ್ನು ರಸ್ತೆಗೆ ಬಿಸಾಡುವರು, ಅವರು ಬಂಗಾರದ ವಿಗ್ರಹವನ್ನು ಅಶುದ್ಧ ವಸ್ತುವಿನಂತೆ ನೋಡುವರು. ಯೆಹೋವನು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರಗಳ ವಿಗ್ರಹಗಳು ಅವರನ್ನು ರಕ್ಷಿಸಲಾರವು. ಅವು ಅವರ ಹಸಿವನ್ನು ನೀಗಿಸಲಾರವು ಅಥವಾ ಅವರ ಹೊಟ್ಟೆಗಳನ್ನು ತುಂಬಿಸಲಾರವು. ಜನರು ಪಾಪದಲ್ಲಿ ಬೀಳುವಂತೆ ಅವು ಮಾಡಿದವು.


ಈಜಿಪ್ಟಿನ ವಿಷಯವಾಗಿ ದುಃಖಕರವಾದ ಸಂದೇಶ: ಯೆಹೋವನು ವೇಗವಾಗಿ ಬರುವ ಮೋಡದೊಂದಿಗೆ ಬರುತ್ತಿದ್ದಾನೆ. ಆತನು ಈಜಿಪ್ಟನ್ನು ಪ್ರವೇಶಿಸುವಾಗ ಈಜಿಪ್ಟಿನ ಸುಳ್ಳುದೇವರುಗಳೆಲ್ಲಾ ಹೆದರಿ ನಡುಗುವವು. ಈಜಿಪ್ಟು ಧೈರ್ಯಶಾಲಿ ದೇಶವಾಗಿದ್ದರೂ, ಅದರ ಧೈರ್ಯ ಮೇಣದಂತೆ ಕರಗಿಹೋಗುವದು.


ಆತನು ಜನಾಂಗಗಳಿಗೆ ತೀರ್ಪು ಮಾಡುವನು. ರಣರಂಗವು ಅವರ ಹೆಣಗಳಿಂದ ತುಂಬಿಹೋಗುವುದು. ಬಲಿಷ್ಠ ರಾಷ್ಟ್ರಗಳ ನಾಯಕರನ್ನು ಆತನು ದಂಡಿಸುವನು.


ಆದರೆ ನಮ್ಮ ಒಡೆಯನು ಆ ದುಷ್ಟರನ್ನು ನೋಡಿ ನಗುವನು. ಅವರಿಗೆ ಬರಲಿರುವ ಆಪತ್ತುಗಳು ಆತನಿಗೆ ತಿಳಿದಿವೆ.


ಬೆಳಗಿನ ಜಾವ ಇನ್ನೂ ಮೊಬ್ಬಿರುವಾಗ, ಯೆಹೋವನು ಎತ್ತರವಾದ ಮೇಘಸ್ತಂಭದಿಂದ ಮತ್ತು ಅಗ್ನಿಸ್ತಂಭದಿಂದ ಈಜಿಪ್ಟಿನ ಸೈನ್ಯವನ್ನು ದೃಷ್ಟಿಸಿದನು. ಆಗ ಯೆಹೋವನು ಅವರ ಮೇಲೆ ಧಾಳಿಮಾಡಿ ಅವರ ಪಾಳೆಯದಲ್ಲಿ ಗಲಿಬಿಲಿಮಾಡಿದನು.


ಹೀಗೆ ಮೋಡವು ಈಜಿಪ್ಟಿನವರಿಗೂ ಇಸ್ರೇಲರಿಗೂ ನಡುವೆ ನಿಂತಿತು. ಅಲ್ಲಿ ಇಸ್ರೇಲರಿಗೆ ಬೆಳಕಿತ್ತು. ಆದರೆ ಈಜಿಪ್ಟಿನವರಿಗೆ ಕತ್ತಲಿತ್ತು. ಆದ್ದರಿಂದ ಈಜಿಪ್ಟಿನವರು ಆ ರಾತ್ರಿ ಇಸ್ರೇಲರ ಸಮೀಪಕ್ಕೆ ಬರಲಿಲ್ಲ.


ಯೆಹೋವನ ದಿನವು ಹತ್ತಿರವಾಗಿದೆ. ಆದ್ದರಿಂದ ದುಃಖಿಸಿರಿ, ರೋಧಿಸಿರಿ. ವೈರಿಯು ಬಂದು ನಿಮ್ಮ ಐಶ್ವರ್ಯವನ್ನು ಸೂರೆಮಾಡುವ ಸಮಯವು ಬರುತ್ತದೆ. ಸರ್ವಶಕ್ತನಾದ ದೇವರು ಅದನ್ನು ನೆರವೇರಿಸುವನು.


ಗೋಡೆಗಳು ಬಿದ್ದುಹೋದ ಸ್ಥಳಗಳನ್ನು ನೀವು (ಪ್ರವಾದಿಗಳು) ಕಾವಲು ಕಾಯುವದಿಲ್ಲ. ಇಸ್ರೇಲ್ ಜನರಿಗೋಸ್ಕರ ನೀವು ಗೋಡೆಗಳನ್ನು ಕಟ್ಟುವುದಿಲ್ಲ. ಆದ್ದರಿಂದ ಯೆಹೋವನಿಂದ ದಂಡನೆಯ ದಿನವು ಬಂದಾಗ ಜನರು ಯುದ್ಧದಲ್ಲಿ ಸೋತು ಹೋಗುವರು.


ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭಯಂಕರವಾದ ದಿನವಾಗಿದೆ. ದೇವರು ಅತ್ಯಂತ ಕೋಪದಿಂದ ದೇಶವನ್ನೆಲ್ಲಾ ನಾಶಮಾಡುವನು; ದುಷ್ಟಜನರನ್ನೆಲ್ಲಾ ದೇಶವನ್ನು ಬಿಟ್ಟುಹೋಗುವಂತೆ ಮಾಡುವನು.


ಆ ಧ್ವನಿಯು ಭೂಲೋಕದ ಎಲ್ಲಾ ಕಡೆಗೂ ಹಬ್ಬುತ್ತದೆ. ಈ ಧ್ವನಿಯೆಲ್ಲಾ ಏತಕ್ಕೆ? ಯೆಹೋವನು ಎಲ್ಲಾ ಜನಾಂಗದ ಜನರನ್ನು ದಂಡಿಸುತ್ತಿದ್ದಾನೆ. ಯೆಹೋವನು ಜನರ ವಿರುದ್ಧ ತನ್ನ ವಾದವನ್ನು ಹೇಳಿದನು. ಜನರ ಬಗ್ಗೆ ತೀರ್ಪನ್ನು ಕೊಟ್ಟನು. ಆತನು ದುಷ್ಟರನ್ನು ಖಡ್ಗದಿಂದ ಕೊಲ್ಲುತ್ತಿದ್ದಾನೆ.’” ಈ ಸಂದೇಶವು ಯೆಹೋವನಿಂದ ಬಂದದ್ದು.


“ಆ ಶಿಕ್ಷೆಯ ಸಮಯವು ಬಂದಿದೆ. ಆಪತ್ತು ಬರುತ್ತಿದೆ. ಹಿಂಸೆಯು ಅರಳಿದೆ. ದುರಹಂಕಾರವು ಮೊಗ್ಗು ಬಿಟ್ಟಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು