ಯೆಹೆಜ್ಕೇಲನು 30:4 - ಪರಿಶುದ್ದ ಬೈಬಲ್4 ಈಜಿಪ್ಟಿಗೆ ವಿರುದ್ಧವಾಗಿ ಒಂದು ಖಡ್ಗವು ಬರುವದು! ಈಜಿಪ್ಟ್ ಬೀಳುವಾಗ ಇಥಿಯೋಪ್ಯವು ಭಯದಿಂದ ನಡುಗುವದು. ಬಾಬಿಲೋನಿನ ಸೈನ್ಯವು ಈಜಿಪ್ಟಿನವರನ್ನು ಸೆರೆ ಹಿಡಿದುಕೊಂಡು ಹೋಗುವದು. ಈಜಿಪ್ಟಿನ ಅಡಿಪಾಯಗಳು ಒಡೆದುಹೋಗುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಖಡ್ಗವು ಐಗುಪ್ತದ ಮೇಲೆ ಬೀಳುವುದು; ಅಲ್ಲಿನ ಪ್ರಜೆಗಳು ಹತರಾಗಲು ಕೂಷಿನಲ್ಲಿಯೂ ಸಂಕಟವಾಗುವುದು; ಐಗುಪ್ತದ ಜನಸಮೂಹವು ಒಯ್ಯಲ್ಪಡುವುದು, ಅದರ ಅಸ್ತಿವಾರವು ಮುರಿದು ಹಾಳಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಖಡ್ಗವು ಈಜಿಪ್ಟಿನ ಮೇಲೆ ಬೀಳುವುದು; ಅಲ್ಲಿ ಪ್ರಜೆಗಳು ಹತರಾಗಲು ಸುಡಾನಿನಲ್ಲಿಯೂ ಸಂಕಟವಾಗುವುದು; ಈಜಿಪ್ಟಿನಲ್ಲಿ ಹಲವರು ಸತ್ತುಬೀಳುವರು, ಅದರ ಅಸ್ತಿಭಾರ ಹಾಳಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಖಡ್ಗವು ಐಗುಪ್ತದ ಮೇಲೆ ಬೀಳುವದು; ಅಲ್ಲಿನ ಪ್ರಜೆಗಳು ಹತರಾಗಲು ಕೂಷಿನಲ್ಲಿಯೂ ಸಂಕಟವಾಗುವದು ; ಐಗುಪ್ತದ ಲಕ್ಷೋಪಲಕ್ಷ ಪ್ರಜೆಯು ಒಯ್ಯಲ್ಪಡುವದು; ಅದರ ಅಸ್ತಿವಾರವು ಹಾಳಾಗುವದು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಖಡ್ಗವು ಈಜಿಪ್ಟಿಗೆ ವಿರುದ್ಧವಾಗಿ ಬರುವುದು. ಕೂಷ್ ಪಟ್ಟಣವು ಸಂಕಟಪಡುವುದು. ಈಜಿಪ್ಟಿನಲ್ಲಿ ಕೊಲ್ಲಲಾದವರು ಬಿದ್ದಾಗ, ಅವಳ ಸಂಪತ್ತು ಸೂರೆಯಾಗುವುದು. ಅವಳ ಅಡಿಪಾಯಗಳು ಕಿತ್ತುಹೋಗುವವು. ಅಧ್ಯಾಯವನ್ನು ನೋಡಿ |