ಯೆಹೆಜ್ಕೇಲನು 30:9 - ಪರಿಶುದ್ದ ಬೈಬಲ್9 “‘ಆ ಸಮಯದಲ್ಲಿ, ನಾನು ಸಂದೇಶವಾಹಕರನ್ನು ಕಳುಹಿಸುವೆನು. ಅವರು ಇಥಿಯೋಪ್ಯಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿ ಕೆಟ್ಟ ಸುದ್ದಿಯನ್ನು ಒಯ್ಯುವರು. ಇಥಿಯೋಪ್ಯ ಈಗ ಸುರಕ್ಷಿತವಾಗಿರುವುದು. ಆದರೆ ಈಜಿಪ್ಟ್ ಶಿಕ್ಷಿಸಲ್ಪಟ್ಟಾಗ ಇಥಿಯೋಪ್ಯದ ಜನರು ಭಯದಿಂದ ನಡುಗುವರು. ಆ ಸಮಯವು ಬರುವದು.’” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು; ಐಗುಪ್ತದ ನಾಶದ ದಿನದಲ್ಲಿ ಆದ ಹಾಗೆ ಕೂಷ್ಯರಿಗೂ ಸಂಕಟವು ಉಂಟಾಗುವುದು; ಇಗೋ, ಆ ದಿನ ಬಂತು!’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ಆ ದಿನಗಳಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು, ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಸುಡಾನರನ್ನು ಹೆದರಿಸುವರು; ಈಜಿಪ್ಟಿನ ವಿನಾಶ ದಿನದಲ್ಲಿ ಸುಡಾನರಿಗೂ ಸಂಕಟವಾಗುವುದು; ಇಗೋ, ಆ ದಿನ ಬಂದಿತು!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು; ಐಗುಪ್ತದ ನಾಶನದಿನದಲ್ಲಿ ಕೂಷ್ಯರಿಗೂ ಸಂಕಟವಾಗುವದು; ಇಗೋ ಬಂತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ ‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು. ಈಜಿಪ್ಟಿನ ದಿನದಲ್ಲಿ ಆದ ಹಾಗೆ ಅವರ ಮೇಲೆ ದೊಡ್ಡ ದುಃಖ ಉಂಟಾಗುವುದು, ಏಕೆಂದರೆ ಇಗೋ, ಆ ದಿನ ಬರುವುದು ನಿಶ್ಚಯ. ಅಧ್ಯಾಯವನ್ನು ನೋಡಿ |
ಈ ನಿನೆವೆಯು ಸಂತೋಷಭರಿತ ನಗರಿಯಾಗಿದೆ. ಅದರ ನಿವಾಸಿಗಳು ತಾವು ಸುರಕ್ಷಿತರಾಗಿದ್ದೇವೆಂದು ತಿಳಿದಿದ್ದಾರೆ. ನಿನೆವೆಯು ಲೋಕದಲ್ಲಿ ಅತ್ಯಂತ ಮಹತ್ವಪೂರ್ಣ ಸ್ಥಳವೆಂದು ತಿಳಿದಿದ್ದಾರೆ. ಅವರು ಬಹಳ ಗರ್ವಪಡುತ್ತಾರೆ. ಆದರೆ ಆ ನಗರವು ನಾಶವಾಗುವದು. ಕಾಡುಮೃಗಗಳ ಹಕ್ಕೆಯಾಗುವದು. ದಾಟಿಹೋಗುವ ಜನರು, ತಮ್ಮ ಆಶ್ಚರ್ಯವನ್ನು ಸಿಳ್ಳುಹಾಕಿ ತಲೆಯಾಡಿಸಿ “ಎಂಥಾ ದುರ್ಗತಿ” ಎಂದು ಉದ್ಗರಿಸುವರು.
ಆ ಐದು ಜನರು ಹೊರಟರು. ಅವರು ಲಯಿಷ್ ನಗರಕ್ಕೆ ಬಂದರು. ಅಲ್ಲಿಯ ಜನರು ಸುರಕ್ಷಿತವಾಗಿರುವುದನ್ನು ಅವರು ನೋಡಿದರು. ಚೀದೋನ್ಯರು ಅವರನ್ನು ಆಳುತ್ತಿದ್ದರು. ಎಲ್ಲವೂ ಶಾಂತವಾಗಿತ್ತು; ಸಮಾಧಾನಕರವಾಗಿತ್ತು; ಸುಖಕರವಾಗಿತ್ತು. ಸಮೀಪದಲ್ಲಿ ಅವರನ್ನು ಪೀಡಿಸುವ ಶತ್ರುಗಳು ಇರಲಿಲ್ಲ. ಅವರು ಚೀದೋನ್ ನಗರದಿಂದ ಬಹಳ ದೂರ ಇದ್ದರು. ಅವರು ಆರಾಮಿನ ಜನರೊಡನೆ ಯಾವ ಒಪ್ಪಂದವನ್ನೂ ಇಟ್ಟುಕೊಂಡಿರಲಿಲ್ಲ.