ಯೆಹೆಜ್ಕೇಲನು 31:10 - ಪರಿಶುದ್ದ ಬೈಬಲ್10 ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಆ ಮರವು ಎತ್ತರವಾಗಿ ಬೆಳೆಯಿತು. ಅದರ ತುದಿ ಮುಗಿಲನ್ನು ಮುಟ್ಟಿತು. ಇದು ಅದಕ್ಕೆ ಹೆಮ್ಮೆಯನ್ನು ತಂದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು, ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾದ ವಿಷಯವಾಗಿ ಉಬ್ಬಿಕೊಂಡಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು ತನ್ನ ತುದಿ ಮೋಡಕ್ಕೆ ಮುಟ್ಟುವಷ್ಟು ನೀಳವಾಗಿದ್ದುದರ ಬಗ್ಗೆ ಗರ್ವಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು ತನ್ನ ತುದಿಯನ್ನು ಮೋಡಕ್ಕೆ ತಗಲಿಸಿ ತನ್ನ ನೀಳದ ವಿಷಯವಾಗಿ ಉಬ್ಬಿಕೊಂಡದರಿಂದ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಅವನು ಎತ್ತರವಾಗಿ ಬೆಳೆದು ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾಗಿದ್ದುದರ ಬಗ್ಗೆ ಗರ್ವಪಟ್ಟನು. ಅಧ್ಯಾಯವನ್ನು ನೋಡಿ |
“ಈಗ ಆ ನೀರಿನ ಬಳಿಯಲ್ಲಿರುವ ಯಾವ ಮರಗಳೂ ಹೆಮ್ಮೆಪಡುವದಿಲ್ಲ. ಅವು ಮುಗಿಲನ್ನು ಮುಟ್ಟಲು ಪ್ರಯತ್ನಿಸುವದಿಲ್ಲ. ಚೆನ್ನಾಗಿ ಬೆಳೆದ ಮರಗಳು ಆ ನೀರನ್ನು ಕುಡಿದು ತಾನು ಉದ್ದವಾಗಿ ಬೆಳೆದಿದ್ದೇನೆ ಎಂದು ಕೊಚ್ಚಿಕೊಳ್ಳುವದಿಲ್ಲ. ಯಾಕೆಂದರೆ ಎಲ್ಲವೂ ಸಾಯುವುದಕ್ಕಾಗಿ ನೇಮಕಗೊಂಡಿವೆ. ಅವುಗಳೆಲ್ಲಾ ಮರಣದ ಸ್ಥಳವನ್ನು ಸೇರುವವು. ಅಲ್ಲಿ ಸತ್ತು, ಮರಣದ ಆ ಸ್ಥಳಕ್ಕೆ ಹೋಗಿ ಪಾತಾಳಕ್ಕೆ ಸೇರಿದವರನ್ನು ಸೇರುವವು.”