ಯೆಹೆಜ್ಕೇಲನು 31:11 - ಪರಿಶುದ್ದ ಬೈಬಲ್11 ಆಗ ನಾನು ಒಬ್ಬ ಬಲಾಢ್ಯನಾದ ರಾಜನು ಬಂದು ಆ ಮರವನ್ನು ತೆಗೆದುಕೊಳ್ಳುವಂತೆ ಮಾಡಿದೆನು. ಆ ರಾಜನು ಮರವು ಮಾಡಿದ ದುಷ್ಕೃತ್ಯಗಳಿಗಾಗಿ ಅದನ್ನು ಶಿಕ್ಷಿಸಿದನು. ಆ ಮರವನ್ನು ನಾನು ನನ್ನ ತೋಟದಿಂದ ತೆಗೆದು ಹಾಕಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದುದರಿಂದ ನಾನು ಅದನ್ನು ಜನಾಂಗಗಳಲ್ಲಿ ಮಹಾ ಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸುತ್ತಾನೆ. ನಾನು ಅದರ ದುಷ್ಟತ್ವದ ನಿಮಿತ್ತ ತಳ್ಳಿಹಾಕಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದುದರಿಂದ ನಾನು ಅದನ್ನು ರಾಷ್ಟ್ರಗಳಲ್ಲಿ ಮಹಾಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸೇ ತೀರುವನು; ನಾನು ಅದನ್ನು ತಳ್ಳಿಹಾಕಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾನು ಅದನ್ನು ಜನಾಂಗಗಳಲ್ಲಿ ಮಹಾಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸೇ ದಂಡಿಸುವನು; ನಾನು ಅದನ್ನು ತಳ್ಳಿಹಾಕಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದ್ದರಿಂದ ನಾನು ಅವನನ್ನು ಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಕೊಟ್ಟಿದ್ದೇನೆ. ಇವನು ನಿಶ್ಚಯವಾಗಿ ಅದನ್ನು ದಂಡಿಸುತ್ತಾನೆ ಅದರ ದುಷ್ಟತ್ವದ ನಿಮಿತ್ತ ನಾನು ಅದನ್ನು ತಳ್ಳಿಹಾಕಿದ್ದೇನೆ. ಅಧ್ಯಾಯವನ್ನು ನೋಡಿ |
“ನಾನು ನರಳಾಡುತ್ತಿದ್ದೇನೆ. ಅದಕ್ಕಾಗಿ ನನ್ನ ಮಾತುಗಳಿಗೆ ಕಿವಿಗೊಡು; ನನ್ನನ್ನು ಸಂತೈಸುವವರು ಯಾರೂ ಇಲ್ಲ. ನನ್ನ ಎಲ್ಲ ವೈರಿಗಳು ನನ್ನ ಕಷ್ಟಗಳ ಬಗ್ಗೆ ಕೇಳಿದ್ದಾರೆ. ಅವರು ಸಂತೋಷಪಡುತ್ತಿದ್ದಾರೆ. ನೀನು ನನಗೆ ಈ ಸ್ಥಿತಿಯನ್ನು ತಂದದ್ದಕ್ಕಾಗಿ ಅವರು ಸಂತೋಷಪಡುತ್ತಲಿದ್ದಾರೆ. ನೀನು ಪ್ರಕಟಿಸಿದ ಆ ದಿನವನ್ನು ಬರಮಾಡು. ಆ ದಿನ ನನ್ನ ಶತ್ರುಗಳ ಸ್ಥಿತಿ ನನ್ನ ಇಂದಿನ ಸ್ಥಿತಿಯಂತೆ ಆಗಲಿ.
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
ಆಗ ಬೆಜೆಕ್‌ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.