ಯೆಹೆಜ್ಕೇಲನು 31:12 - ಪರಿಶುದ್ದ ಬೈಬಲ್12 ಪರದೇಶದ ಕ್ರೂರ ಜನರು ಅದನ್ನು ಕಡಿದು ಅದರ ರೆಂಬೆಗಳನ್ನೆಲ್ಲಾ ಬೆಟ್ಟ, ಬಯಲು, ತಗ್ಗುಗಳಲ್ಲಿ ಚದರಿಸಿಬಿಟ್ಟರು. ಅದರ ಮುರಿಯಲ್ಪಟ್ಟ ಕೊಂಬೆಗಳು ಆ ದೇಶದಲ್ಲಿ ಹರಿಯುವ ನದಿಯಲ್ಲಿ ತೇಲಿದವು. ಆ ಮರದಡಿಯಲ್ಲಿ ಈಗ ನೆರಳು ಇಲ್ಲ. ಆದ್ದರಿಂದ ಅಲ್ಲಿ ವಾಸವಾಗಿದ್ದ ಜನರೆಲ್ಲಾ ಅಲ್ಲಿಂದ ಹೊರಟುಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ಜನಾಂಗಗಳಲ್ಲಿ ಭಯಂಕರವಾದ ಅನ್ಯರು ಅದನ್ನು ಕಡಿದುಹಾಕಿ ಬಿಟ್ಟಿದ್ದಾರೆ. ಅದರ ರೆಂಬೆಗಳು ಗುಡ್ಡಗಳಲ್ಲಿಯೂ, ಎಲ್ಲಾ ಹಳ್ಳಕೊಳ್ಳಗಳಲ್ಲಿಯೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲಾ ಹಳ್ಳಗಳ ಹತ್ತಿರ ಮುರಿದುಹಾಕಲ್ಪಟ್ಟಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅತಿಭಯಂಕರ ರಾಷ್ಟ್ರದವರಾದ ಮ್ಲೇಚ್ಛರು ಅದನ್ನು ಕಡಿದುಹಾಕಿ ಹೋಗಿಬಿಟ್ಟಿದ್ದಾರೆ; ಅದರ ರೆಂಬೆಗಳು ಗುಡ್ಡಗಳಲ್ಲೂ ಎಲ್ಲ ಹಳ್ಳಕೊಳ್ಳಗಳಲ್ಲೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲ ತೊರೆಗಳ ಹತ್ತಿರ ಮುರಿದುಬಿದ್ದಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ತೊಲಗಿಹೋಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅತಿಭಯಂಕರ ಜನಾಂಗದವರಾದ ಮ್ಲೇಚ್ಫರು ಅದನ್ನು ಕಡಿದುಹಾಕಿ ಹೋಗಿಬಿಟ್ಟಿದ್ದಾರೆ; ಅದರ ರೆಂಬೆಗಳು ಗುಡ್ಡಗಳಲ್ಲಿಯೂ ಎಲ್ಲಾ ಹಳ್ಳಕೊಳ್ಳಗಳಲ್ಲಿಯೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲಾ ತೊರೆಗಳ ಹತ್ತಿರ ಮುರಿದುಹಾಕಲ್ಪಟ್ಟಿವೆ; ಲೋಕದ ಸಮಸ್ತಜನಾಂಗಗಳು ಅದರ ನೆರಳಿನಿಂದ ತೊಲಗಿ ಅದನ್ನು ಬಿಟ್ಟುಹೋಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಜನಾಂಗಗಳಲ್ಲಿ ಭಯಂಕರವಾದ ವಿದೇಶಿಯರು ಅದನ್ನು ಕಡಿದುಹಾಕುವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅದರ ಕೊಂಬೆಗಳು ಬೀಳುವುವು. ದೇಶದ ಹಳ್ಳಗಳಲ್ಲೆಲ್ಲಾ ಅದರ ರೆಂಬೆಗಳು ಮುರಿದು ಹೋಗುವುವು. ಭೂಮಿಯ ಜನಗಳೆಲ್ಲಾ ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಡುವರು. ಅಧ್ಯಾಯವನ್ನು ನೋಡಿ |