ಯೆಹೆಜ್ಕೇಲನು 31:15 - ಪರಿಶುದ್ದ ಬೈಬಲ್15 ನನ್ನ ಒಡೆಯನಾದ ಯೆಹೋವನು ಇದನ್ನು ನುಡಿದಿದ್ದಾನೆ: “ಆ ಮರವು ಪಾತಾಳಕ್ಕೆ ಹೋದ ದಿವಸದಲ್ಲಿ ನಾನು ಜನರನ್ನು ಅಳುವಂತೆ ಮಾಡಿದೆನು. ಅದನ್ನು ನಾನು ಆಳವಾದ ಸಾಗರದಿಂದ ಮುಚ್ಚಿಬಿಟ್ಟೆನು. ನಾನು ಅದರ ನದಿಗಳನ್ನೂ ಬೇರೆ ನೀರಿನ ತೊರೆಗಳನ್ನೂ ನಿಲ್ಲಿಸಿಬಿಟ್ಟೆನು. ಲೆಬನೋನ್ ಅದಕ್ಕಾಗಿ ಶೋಕಿಸುವಂತೆ ಮಾಡಿದೆನು. ಆ ದೊಡ್ಡ ಮರವು ಹೋದುದಕ್ಕಾಗಿ ಆ ಪ್ರಾಂತ್ಯದ ಬೇರೆ ಎಲ್ಲಾ ಮರಗಳು ದುಃಖದಿಂದ ಕಾಯಿಲೆಯಲ್ಲಿ ಬಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ವೃಕ್ಷವು ಪಾತಾಳಕ್ಕೆ ಇಳಿದು ಹೋದ ದಿನದಲ್ಲಿ ನಾನು ದುಃಖವನ್ನು ಹುಟ್ಟಿಸುವೆನು. ಅದರ ವಿಯೋಗಕ್ಕಾಗಿ ನಾನು ಮಹಾ ನದಿಯನ್ನು ಮರೆಮಾಡಿ, ನದಿಗಳನ್ನು ತಡೆದುಬಿಟ್ಟೆನು, ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆನು, ಭೂಮಿಯ ಸಕಲ ವೃಕ್ಷಗಳು ಆ ದುಃಖಕ್ಕೆ ಕುಗ್ಗಿಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ : “ಆ ವೃಕ್ಷ ಪಾತಾಳಕ್ಕೆ ಇಳಿದುಹೋದ ದಿನದಲ್ಲಿ ನಾನು ದುಃಖದ ಚಿಹ್ನೆಗಳನ್ನು ಏರ್ಪಡಿಸಿದೆ; ಅದರ ವಿಯೋಗಕ್ಕಾಗಿ ನಾನು ಮಹಾನದಿಯನ್ನು ಮರೆಮಾಡಿ, ನದಿಯ ಶಾಖೆಗಳನ್ನು ತಡೆದುಬಿಟ್ಟೆ; ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆ. ಭೂಮಿಯ ಸಕಲ ವೃಕ್ಷಗಳು ಆ ದುಃಖಕ್ಕೆ ಮೂರ್ಛೆಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಕರ್ತನಾದ ಯೇಹೋವನು ಇಂತೆನ್ನುತ್ತಾನೆ - ಆ ವೃಕ್ಷವು ಪಾತಾಳಕ್ಕೆ ಇಳಿದುಹೋದ ದಿನದಲ್ಲಿ ನಾನು ದುಃಖದ ಚಿಹ್ನೆಗಳನ್ನು ಏರ್ಪಡಿಸಿದೆನು; ಅದರ ವಿಯೋಗಕ್ಕಾಗಿ ನಾನು ಮಹಾನದಿಯನ್ನು ಮರೆಮಾಡಿ ನದಿಯ ಶಾಖೆಗಳನ್ನು ತಡೆದುಬಿಟ್ಟೆನು, ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆನು, ಭೂವಿುಯ ಸಕಲ ವೃಕ್ಷಗಳು ಆ ದುಃಖಕ್ಕೆ ಮೂರ್ಛೆಹೋದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದು ಸಮಾಧಿಗೆ ಇಳಿದ ದಿನದಲ್ಲಿ ನಾನು ಆಳವಾದ ಬುಗ್ಗೆಗಳನ್ನು ದುಃಖದಿಂದ ಮುಚ್ಚಿದೆನು; ನಾನು ಅದರ ಪ್ರವಾಹವನ್ನು ತಡೆಹಿಡಿದೆನು. ಮಹಾಜಲವನ್ನು ನಿಲ್ಲಿಸಿದೆನು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಿಡುವಂತೆ ಮಾಡಿದೆನು. ಬಯಲಿನ ಮರಗಳೆಲ್ಲಾ ಕುಗ್ಗಿಹೋದವು. ಅಧ್ಯಾಯವನ್ನು ನೋಡಿ |